ಕೊವಿಡ್​ ಸೋಂಕಿನ ತೀವ್ರತೆ ಹೆಚ್ಚಳ; ಅಂತ್ಯಕ್ರಿಯೆಗೆ ಸಾಲಾಗಿ ನಿಂತ ಆ್ಯಂಬುಲೆನ್ಸ್​

ರಾಜಧಾನಿಯಲ್ಲಿ ಕೊವಿಡ್ ಮರಣ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಇಂದಿನಿಂದ ಮೂರು ಚಿತಾಗಾರಕ್ಕೆ ಅನುಮತಿ ನೀಡಲಾಗಿದೆ.

ಕೊವಿಡ್​ ಸೋಂಕಿನ ತೀವ್ರತೆ ಹೆಚ್ಚಳ; ಅಂತ್ಯಕ್ರಿಯೆಗೆ ಸಾಲಾಗಿ ನಿಂತ ಆ್ಯಂಬುಲೆನ್ಸ್​
ಸಾಲುಸಾಲಾಗಿ ನಿಂತ ಅಂಬ್ಯುಲೆನ್ಸ್​ಗಳು
Follow us
shruti hegde
| Updated By: ganapathi bhat

Updated on: Apr 16, 2021 | 4:23 PM

ಬೆಂಗಳೂರು: ಕೊರೊನಾ ಮಹಾಮಾರಿ ದೇಶದಲ್ಲಿ ಹೆಚ್ಚಾಗುತ್ತಿದ್ದು, ಸೋಂಕಿನ ತೀವ್ರತೆಯಿಂದ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮೃತರ ಅಂತ್ಯಕ್ರಿಯೆಗಾಗಿ ಆ್ಯಂಬುಲೆನ್ಸ್​​ಗಳು ಸಾಲು ಸಾಲಾಗಿ ಮೇಡಿ ಅಗ್ರಹಾರದ ಚಿತಾಗಾರದ ಬಳಿ ನಿಂತಿವೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ 8 ಮೃತದೇಹಗಳು ಬಂದಿವೆ. ಒಂದು ಶವ ಅಂತ್ಯಕ್ರಿಯೆ ಮಾಡಲು ಕನಿಷ್ಠ ಒಂದೂವರೆ ಗಂಟೆಯಾದರೂ ಬೇಕು. ಮೃತ ದೇಹಗಳ ಅಂತ್ಯಕ್ರಿಯೆ ವಿಳಂಬವಾಗುತ್ತಿದೆ. ನಗರದ ಕೆಂಗೇರಿ ವಿದ್ಯುತ್ ಚಿತಾಗಾರಕ್ಕೆ 8 ಕೊವಿಡ್ ಮೃತದೇಹಗಳು ಬಂದಿವೆ.

ರಾಜಧಾನಿಯಲ್ಲಿ ಕೊವಿಡ್ ಮರಣ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜಧಾನಿಯಲ್ಲಿ ಇಂದಿನಿಂದ ಮೂರು ಚಿತಾಗಾರಕ್ಕೆ ಅನುಮತಿ ನೀಡಲಾಗಿದೆ. ಬನಶಂಕರಿ ಚಿತಾಗಾರದಲ್ಲಿ ಇಂದಿನಿಂದ ಕೊವಿಡ್ ಮೃತರ ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆಯಿಂದ ಇಲ್ಲಿಯವರೆಗೆ 2 ಕೊವಿಡ್​ ಶವದ ಸಂಸ್ಕಾರ ನೆರವೇರಿಸಲಾಗಿದೆ.

ಪಿಪಿಇ ಕಿಟ್ ಇಲ್ಲದೇ ಚಿತಾಗಾರ ಸಿಬ್ಬಂದಿಗಳ ಗೋಳಾಟ ಹೆಚ್ಚಾಗಿದೆ. ಬಿಬಿಎಂಪಿ ಪಿಪಿಇ ಕಿಟ್​ ಪೂರೈಸಿಲ್ಲ. ಆಂಬ್ಯುಲೆನ್ಸ್ ಚಾಲಕನಿಗೂ ಪಿಪಿಇ ಕಿಟ್ ಇಲ್ಲ. ಬಿಬಿಎಂಪಿಯ ಈ ನಿರ್ಲಕ್ಷ್ಯಕ್ಕೆ ಯಾರು ಹೊಣೆ? ಎಂಬ ಪ್ರಶ್ನೆ ಕೇಳಿ ಬರುತ್ತಿದೆ.

ಯಲಹಂಕದ ಮೇಡಿ ಅಗ್ರಹಾರ ಚಿತಗಾರದಲ್ಲಿ ಸಿಬ್ಬಂದಿಗಳ ಬೇಜವಾಬ್ದಾರಿ ಮೃತರ ಸಂಬಂಧಿಕರು ಶವ ಸಂಸ್ಕಾರ ಮುಗಿದ ನಂತರ ಪಿಪಿಇ ಕಿಟ್​ಗಳನ್ನು ಚಿತಾಗಾರದ ಆವರಣದಲ್ಲೇ ಬಿಸಾಡುತ್ತಿದ್ದಾರೆ. ಚಿತಾಗಾರದಲ್ಲಿ ಅಂತ್ಯಕ್ರಿಯೆ ವೇಳೆ ಮೃತರ ಸಂಬಂಧಿಕರು ಪಿಪಿಇ ಕಿಟ್​ಗಳನ್ನ ಧರಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಪೂಜೆ ನಂತರ ಚಿತಾಗಾರದ ಆವರಣದಲ್ಲೇ ಪಿಪಿಇ ಕಿಟ್ ಎಸೆದು ಬೇಜಾವಾಬ್ದಾರಿ ತೋರುತ್ತಿದ್ದಾರೆ.

ಸುಮನಹಳ್ಳಿ ಚಿತಾಗರದಲ್ಲಿ 13 ಕೊವಿಡ್ ಮೃತದೇಹ ಅಂತ್ಯಕ್ರಿಯೆ ವಿವಿಧ ಆಸ್ಪತ್ರೆಗಳಿಂದ ಆ್ಯಂಬುಲೆನ್ಸ್ ಮೂಲಕ ತರಲಾಗಿದ್ದ ಮೃತದೇಹವನ್ನು ಕೆಲವೇ ಕೆಲವು ಸಂಬಂಧಿಕರಿಗೆ ನೋಡಲು ಅವಕಾಶ ಕಲ್ಪಿಸಲಾಗಿದೆ. ಇನ್ನೂ ನಿರಂತರವಾಗಿ ಮೃತದೇಹ ಬರುತ್ತಲೇ ಇದೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ ಏರಿಕೆ; ಒಂದೇ ಚಿತೆಯಲ್ಲಿ 5 ಶವಗಳ ಸಂಸ್ಕಾರ

ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ