ರಾಜ್ಯದಲ್ಲಿಂದು 662 ಜನರಿಗೆ ಕೊರೊನಾ ದೃಢ

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 662 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,17,571 ಕ್ಕೇರಿದೆ.

ರಾಜ್ಯದಲ್ಲಿಂದು 662 ಜನರಿಗೆ ಕೊರೊನಾ ದೃಢ
ಪ್ರಾತಿನಿಧಿಕ ಚಿತ್ರ
Rajesh Duggumane

| Edited By: Ghanashyam D M | ಡಿ.ಎಂ.ಘನಶ್ಯಾಮ

Dec 29, 2020 | 9:51 PM

ಬೆಂಗಳೂರು: ರಾಜ್ಯದಲ್ಲಿ ಮೂರು ಜನರಿಗೆ ಇಂಗ್ಲೆಂಡ್​ನಲ್ಲಿ ಕಾಣಿಸಿಕೊಂಡಿದ್ದ ರೂಪಾಂತರಗೊಂಡ ಕೊರೊನಾ ಇರುವುದು ದೃಢವಾಗಿದೆ. ಈ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದು ನಿಟ್ಟುಸಿರು ಬಿಡುವಂತಾಗಿದೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 662 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,17,571 ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಕೂಡ  ಮಿತಿ ಮೀರಿ ಕಡಿಮೆ ಆಗಿದೆ.

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 12,074 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,93,617 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 11,861 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 195 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತ್ಯ ರಾಜ್ಯದಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ರೂಪಾಂತರಿ ಕೊರೊನಾ ವೈರಸ್​ ಬಗ್ಗೆ ಅತಿ ಭಯ ಬೇಡ: ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada