ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜಲಕ್ಷಾಮ ಉಂಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಅಲ್ಲಲ್ಲಿ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಿದೆ. ಜಲಕ್ಷಾಮದ ನಡುವೆ ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ.

ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ
ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ: ಆರ್ ಅಶೋಕ ವಾಗ್ದಾಳಿ
Follow us
Rakesh Nayak Manchi
|

Updated on: Mar 11, 2024 | 2:27 PM

ಬೆಂಗಳೂರು, ಮಾ.11: ಕರ್ನಾಟಕದಲ್ಲಿ (Karnataka) ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜಲಕ್ಷಾಮ ಉಂಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಲೋಕಸಭೆ ಚುನಾವಣೆಗೆ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ಸರ್ಕಾರ ಅಲ್ಲಲ್ಲಿ ಸಮಾವೇಶಗಳನ್ನು (Guarantee Conventions) ನಡೆಸುತ್ತಿದೆ. ನೀರಿನ ಬಿಕ್ಕಟ್ಟಿನ (Water Crisis) ನಡುವೆ ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ (R Ashoka) ಅವರು ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ಅಶೋಕ, “ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರೆಂಟಿ ಉತ್ಸವ” ಎಂದು ಜರಿದಿದ್ದಾರೆ. ಅಲ್ಲದೆ, ” ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ” ಎಂದರು.

ಇದನ್ನೂ ಓದಿ: Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು; ವರ್ಕ್ ಫ್ರಂ ಹೋಮ್, ಆನ್​ಲೈನ್ ತರಗತಿಗಳಿಗೆ ಹೆಚ್ಚಿದ ಬೇಡಿಕೆ

“ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ” ಎಂದರು.

ಆರ್ ಅಶೋಕ ಎಕ್ಸ್ ಪೋಸ್ಟ್

“ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ ಒಂದು ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ಎರಡು ಕೋಟಿ ಖರ್ಚು ಮಾಡಿ ಉತ್ಸವ ಮಾಡುತ್ತಿದೀರಲ್ಲ ಸಿಎಂ ಸಿದ್ದರಾಮಯ್ಯ ನವರೇ, ನಿಮಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ?” ಎಂದು ಪ್ರಶ್ನಿಸಿದರು.

“ಗ್ಯಾರೆಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಬಹುದಿತ್ತಲ್ಲ? ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೂಡಬಹುದಿತ್ತಲ್ಲವೆ? ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಪ್ರಚಾರವೇ ಹೆಚ್ಚಾಗಿ ಹೋಯಿತೇ?” ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ