AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಉನ್ನತ ಮಟ್ಟದ ಸಭೆ ನಿರೀಕ್ಷೆ

ಪ್ರಧಾನಿ ಮೋದಿ ಭೇಟಿ ವೇಳೆ, ರಾಜ್ಯಕ್ಕೆ ಬರ ಪರಿಹಾರ ಆದಷ್ಟು ಶೀಘ್ರದಲ್ಲಿ ನೀಡಬೇಕು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಭೆ ಕರೆಯುವಂತೆ ಸೂಚಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಪ್ರಧಾನಿ ಮೋದಿ, ಶೀಘ್ರದಲ್ಲೇ ಸಭೆ ಕರೆಯುವಂತೆ ಅಮಿತ್ ಶಾ ಅವರಿಗೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದರು.

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಉನ್ನತ ಮಟ್ಟದ ಸಭೆ ನಿರೀಕ್ಷೆ
ಅಮಿತ್ ಶಾ
TV9 Web
| Edited By: |

Updated on:Dec 23, 2023 | 6:51 AM

Share

ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ ಅಮಿತ್ ಶಾ ಅವರು ಸಭೆ ಕರೆಯುವ ಸಾಧ್ಯತೆ ಹೆಚ್ಚಾಗಿದೆ.

ಪ್ರಧಾನಿ ಮೋದಿ ಭೇಟಿ ವೇಳೆ, ರಾಜ್ಯಕ್ಕೆ ಬರ ಪರಿಹಾರ ಆದಷ್ಟು ಶೀಘ್ರದಲ್ಲಿ ನೀಡಬೇಕು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಭೆ ಕರೆಯುವಂತೆ ಸೂಚಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಪ್ರಧಾನಿ ಮೋದಿ, ಶೀಘ್ರದಲ್ಲೇ ಸಭೆ ಕರೆಯುವಂತೆ ಅಮಿತ್ ಶಾ ಅವರಿಗೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದರು. ಈ ವಿಚಾರವಾಗಿ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

18,177 ಕೋಟಿ ರೂಪಾಯಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿದೆ. ರಾಜ್ಯದ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಪ್ರಧಾನಿ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಬರ ಪರಿಹಾರ ಬಿಡುಗಡೆ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದೆ. ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಿಯವರು ಸಮಯ ನೀಡುತ್ತಿಲ್ಲ ಎಂದು ಹಲವು ಬಾರಿ ಆರೋಪಿಸಿತ್ತು. ಅನೇಕ ಸಚಿವರು, ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಅವರ ಭೇಟಿಗೆ ಮೋದಿ ಸಭೆ ನೀಡಿದ್ದರು. ಅಲ್ಲದೆ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸಿ ಶೀಘ್ರದಲ್ಲೇ ಬರ ಪರಿಹಾರ ಬಿಡುಗಡೆ ಮಾಡಲು ಸೂಚಿಸುವುದಾಗಿ ಭರವಸೆ ನೀಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:41 am, Sat, 23 December 23

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ