ಇಂದು ಬೆಂಗಳೂರಿಗೆ ಅಮಿತ್ ಶಾ, ಟ್ರಾಫಿಕ್ ಬಿಸಿ: ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗ ಬಳಸಲು ವಾಹನ ಸವಾರರಿಗೆ ಸೂಚನೆ

ಇಂದು ಸಂಜೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿ ಟ್ರಾಫಿಕ್ ಬಿಸಿ ತಟ್ಟಲಿದೆ. ಇದರಿಂದ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಅಮಿತ್ ಶಾ, ಟ್ರಾಫಿಕ್ ಬಿಸಿ: ಈ ರಸ್ತೆಗಳನ್ನು ಬಿಟ್ಟು ಪರ್ಯಾಯ ಮಾರ್ಗ ಬಳಸಲು ವಾಹನ ಸವಾರರಿಗೆ ಸೂಚನೆ
ಅಮಿತ್ ಶಾImage Credit source: thehindu.com
Follow us
|

Updated on: Mar 26, 2023 | 7:00 AM

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿರುವ  (Karnataka Assembly Elections 2023)ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮಿತ್‌ ಶಾ (Amit Shah) ಸೇರಿದಂತೆ ಕೇಂದ್ರದ ನಾಯಕರು ನಿಯಮಿತವಾಗಿ ಭೇಟಿ ನೀಡುತ್ತಿದ್ದಾರೆ. ನಿನ್ನೆ(ಮಾರ್ಚ್ 25) ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆಗೆ ಭೇಟಿ ಬಿಜೆಪಿಯ ವಿಜಯಸಂಕಲ್ಪ ಮಹಾಸಂಗಮ ಸಮಾವೇಶದಲ್ಲಿ ಭಾಗವಹಿಸಿದ್ದರು. ಇದರ ಬೆನ್ನಲ್ಲೇ ಇಂದು(ಮಾರ್ಚ್ 26) ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೀದರ್, ರಾಯಚೂರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ(Bengaluru) ಹೃದಯ ಭಾಗದಲ್ಲಿ ಟ್ರಾಫಿಕ್ ಬಿಸಿ ತಟ್ಟಲಿದೆ. ಇದರಿಂದ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಅಮಿತ್ ಶಾ

ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಸಂಸ್ಥಾಪ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರ ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್‌ ಶಾ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ರೇಸ್​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಲಾಗಿರುವ ಗುಜರಾತ್​ ಸಮಾಜದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ನಿರ್ಮಿಸಿರುವ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ತದನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರಾತ್ರಿ 8.30ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ, ಖಾಸಗಿ ಹೋಟೆಲ್​ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಲಿದ್ದಾರೆ.

ಪರ್ಯಾಯ ಮಾರ್ಗ ಬಳಸಲು ಸೂಚನೆ

ಅಮಿತ್ ಶಾ ಆಗಮಿಸಿತ್ತಿರುವುದರಿಂದ ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಹೀಗಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಈ ಕೆಳಗೆ ಹೇಳಲಾಗಿರುವ ರಸ್ತೆಗಳನ್ನು ಹೊರತುಪಡಿಸಿ ಬೇರೆ ಮಾರ್ಗ ಬಳಸಲು ವಾಹನ ಸವಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್ ಸರ್ಕಲ್, ಹಡ್ಸನ್ ಸರ್ಕಲ್, ಹಳೆ ಏರ್​ಪೋರ್ಟ್​ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್ ಹಾಲ್ ಸುತ್ತಮುತ್ತ ಪರ್ಯಾಯ ಮಾರ್ಗ ಬಳಸಲು ಸೂಚಿಸಿದ್ದಾರೆ.