ಬೆಂಗಳೂರು: ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು. ಮಾ.18ರಂದು ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದರು. ನ್ಯಾಯಾಲಯದ ಆದೇಶದಂತೆ ಪ್ರತಿಭಟನೆಗೆ ಫ್ರೀಡಂ ಪಾರ್ಕ್ ಸ್ಥಳ ನಿಗದಿಯಾಗಿದೆ. ಆದರೂ ಸಹ ಆದೇಶ ಉಲ್ಲಂಘಿಸಿ ವಾಟಾಳ್ ಬೇರೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ:
ಕಾಂಗ್ರೆಸ್ ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಆದ ಹಿನ್ನೆಲೆ ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ ವಿಧಿಸಿತ್ತು. ಫ್ರೀಡಂಪಾರ್ಕ್ನ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಾರ್ಚ್ 4ಕ್ಕೆ ಮಹತ್ವದ ಆದೇಶ ನೀಡಿದೆ. ಪ್ರತಿಭಟನೆಗಳಿಂದಾಗಿ ದೈನಂದಿನ ಜೀವನದ ಮೇಲೆ ಪರಿಣಾಮವಾಗುತ್ತಿದೆ. ಟ್ರಾಫಿಕ್ ಜಾಮ್ನಿಂದ ಬೆಂಗಳೂರಿನ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಿದೆ.
ನಿಗದಿತ ಸ್ಥಳ ಬಿಟ್ಟು ಬೇರೆಡೆ ಪ್ರತಿಭಟನೆಗೆ ಅವಕಾಶ ನೀಡಬಾರದು. ಯಾವುದೇ ಸಂಘಟನೆ, ಪಕ್ಷಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಈಗಾಗಲೇ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ
ನಾನು ಹೇಳಿದಂತೆ ಆಯ್ತು, ಬಿಜೆಪಿ ಅಧಿಕಾರ ರಚಿಸಿದ ಬೆನ್ನಲ್ಲೇ ಇಂಧನ-ಗ್ಯಾಸ್ ಬೆಲೆ ಜಾಸ್ತಿಯಾಯ್ತು: ಛತ್ತೀಸ್ಗಢ ಸಿಎಂ
ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್ಬಿಐ ಮಾಹಿತಿ
Published On - 8:48 am, Wed, 23 March 22