ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

ಅಕ್ಟೋಬರ್ 3ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ. ಆದರೆ ದಸರಾ ಉದ್ಘಾಟನೆ ಯಾರು ಮಾಡುತ್ತಾರೆ ಎಂಬುವುದು ತಿರ್ಮಾನಿಸಲಾಗಿತ್ತು. ಇದೀಗ ಗದಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರವ ಸಚಿವ ಹೆಚ್​ಕೆ ಪಾಟೀಲ್​, ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಅತಿಥಿಯಾಗಿ ಬರುತ್ತಾರೆ ಎಂದು ಹೇಳಿದ್ದಾರೆ.

ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್
ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 15, 2024 | 4:28 PM

ಗದಗ, ಆಗಸ್ಟ್​ 15: ಈ ಬಾರಿ ವಿಜೃಂಭಣೆ, ಅರ್ಥಪೂರ್ಣವಾಗಿ ದಸರಾ (Mysuru Dasara) ಆಚರಣೆ ಮಾಡುತ್ತೇವೆ. ದೇಶದ ಒಬ್ಬ ಪ್ರಮುಖ ವ್ಯಕ್ತಿ ದಸರಾ ಅತಿಥಿಯಾಗಿ ಬರುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಹೆಚ್​.ಕೆ.ಪಾಟೀಲ್ (HK Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟನೆಗೆ ಎರಡು-ಮೂರು ಹೆಸರು ಪ್ರಸ್ತಾಪವಾಗಿದೆ. ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿಗಳೇ ತಿಳಿಸುತ್ತಾರೆ. ಪ್ರವಾಸಿಗರು ಮೈಸೂರಿನ ಗತವೈಭವ ಅನುಭವಿಸುವಂತೆ ಮಾಡುತ್ತೇವೆ ಎಂದಿದ್ದಾರೆ.

ದಸರಾ ಉದ್ಘಾಟನೆ ಯಾರಿಂದ ಎಂಬ ಪ್ರಶ್ನೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೈಸೂರು ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದುನ್ನು ನನಗೆ ಸಭೆಯಲ್ಲಿ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ‌ ಮಹದೇವಪ್ಪ ಅವರು ಕೆಲವು ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ಹೇಳಿದ್ದರು. ಇದೀಗ ಹೆಚ್​.ಕೆ.ಪಾಟೀಲ್​ ದೇಶದ ಪ್ರಮುಖ ವ್ಯಕ್ತಿಯೊಬ್ಬರಿಂದ ದಸರಾ ಉದ್ಘಾಟನೆಗೊಳ್ಳಿದೆ ಎಂದಿರುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ‌ ಪಟ್ಟಿ ಬಿಡುಗಡೆ

ಗ್ಯಾರಂಟಿ ಯೋಜನೆ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ಬಂದ್​ ಆಗುವುದಿಲ್ಲ. ತೆರಿಗೆ ಕಟ್ಟುವವರಿಗೆ ಗ್ಯಾರಂಟಿ ಕೊಡಬಾರದು ಅಂತಾ ಮಾಡಿದ್ದೇವೆ. ನುಸುಳಿ ಬಂದವರನ್ನ ತೆಗೆಯುವ ವ್ಯವಸ್ಥೆ ನಿಯಮಗಳಲ್ಲಿ ಇದೆ. ಕೆಲವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಬಾರಿ ಅದ್ಧೂರಿ ದಸರಾ ಆಚರಣೆ: ಅ 3 ರಂದು ಉದ್ಘಾಟನೆ, ಅ 12 ಕ್ಕೆ ಜಂಬೂಸವಾರಿ

ಬಿಜೆಪಿ ಪಾದಯಾತ್ರೆ ಬಗ್ಗೆ ನಿರ್ಧಾರ ಆದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕಾನೂನಾತ್ಮಕವಾಗಿ ಚುನಾವಣೆ ಮಾಡಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಮಾಡೋದಕ್ಕೆ ಹೆಜ್ಜೆ ಇಡುತ್ತೇವೆ. ಮೀಸಲಾತಿ ಕುರಿತು ಸಾಕಷ್ಟು ಚರ್ಚೆಯಾಗಿದೆ. ಆದಷ್ಟು ಬೇಗ ಘೋಷಣೆ ಮಾಡುತ್ತೇವೆ. ಈ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Thu, 15 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ