AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ

ಹಾಸನಾಂಬ ದೇವಿ ದರ್ಶನ ಪಡೆದು ವಾಪಾಸ್ ಬರುತ್ತಿದ್ದ ಬೈಕ್​ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದೆ. ಅದಲ್ಲದೇ ಇನ್ನೋರ್ವ ಬೈಕ್ ಸವಾರನಿಗೂ ಇದೇ ಗಾಡಿ ಗುದ್ದಿದ್ದು, ಆತನಿಗೂ ಗಂಭೀರ ಗಾಯಗಳಾಗಿವೆ.

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು;  ಸ್ಥಳದಲ್ಲೆ ಇಬ್ಬರ ದುರ್ಮರಣ
ಅಪಘಾತದಲ್ಲಿ ಮೃತಪಟ್ಟ ಬಸವರಾಜು ಮತ್ತು ಅನು
ಮಂಜುನಾಥ ಕೆಬಿ
| Updated By: ಭಾವನಾ ಹೆಗಡೆ|

Updated on: Oct 20, 2025 | 11:44 AM

Share

ಹಾಸನ, ಅಕ್ಟೋಬರ್ 20: ಹಾಸನಾಂಬ ದೇವಿ ದರ್ಶನ (Hasamanamba Darshan) ಪಡೆದು ವಾಪಾಸ್  ಬೈಕ್​ನಲ್ಲಿ ಬರುತ್ತಿದ್ದವರಿಗೆ  ಇನ್ನೋವಾ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಇಬ್ಬರ ದುರ್ಮರಣ, ಓರ್ವ ಯುವತಿ ಐಸಿಯುಗೆ ದಾಖಲು

ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಬಸವರಾಜು, ಅನು (19), ಛಾಯಾ (20) ಹಾಸನಾಂಬೆಯ ದರ್ಶನ ಮಾಡಲು ಬಂದಿದ್ದರು. ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಬರುತ್ತಿದ್ದ ಮೂವರು ಕಗ್ಗಲಿಕಾವಲು ಫಾರೆಸ್ಟ್ ಬಳಿ ಅಪಘಾತಕ್ಕೊಳಗಾಗಿದ್ದಾರೆ. ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು, ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆ್ಯಕ್ಟಿವ್ ಹೋಂಡಾಗೆ ಡಿಕ್ಕಿ ಹೊಡೆದು ನಂತರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ.

ಬಾಗಲಕೋಟೆಯಲ್ಲಿ ಆಸ್ತಿ ವಿವಾದಕ್ಕೆ ಯುವಕ ಬಲಿ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಯುವಕನ ಮೇಲೆ ಹಲ್ಲೆ ನಡೆದಿತ್ತು. ಈಗ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.   ಪೂರ್ವಜರಿಂದ ಬಂದ 10 ಎಕರೆ ಜಮೀನಿನಲ್ಲಿ ಪಾಲು ಕೇಳಿದ ವಿಚಾರವಾಗಿ ಹನಮಂತ ಮರೆಮ್ಮನವರ ಹಾಗೂ ಅವನ ಸಹೋದರಿ ಯಮನವ್ವ ಕುಟುಂಬಗಳ ನಡುವೆ ಕಳೆದ ಏಳು ತಿಂಗಳಿಂದ ಮನಸ್ತಾಪ ನಡೆಯುತ್ತಿತ್ತು.

ಅಕ್ಟೋಬರ್ 16ರಂದು ಹೊಲದಿಂದ ಮನೆಗೆ ಬರುತ್ತಿದ್ದ ವೇಳೆ ಜಗಳ ನಡೆದು, ಯಮನವ್ವನ ಸಂಬಂಧಿಗಳಾದ ಪ್ರಕಾಶ್, ಗಣೇಶ, ಯಂಕಪ್ಪ, ರಂಗಪ್ಪ, ಬಸಪ್ಪ ಸೇರಿದಂತೆ ಹಲವರು ಹನಮಂತನ ಮಗ ವಿಶ್ವನಾಥನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡ ವಿಶ್ವನಾಥನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ