ಅಧಿಕಾರ ವಹಿಸಿಕೊಂಡ ಆನಂದ್ ಸಿಂಗ್; ಪರಿಸರ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ
Anand Singh: ಪರಿಸರ ಇಲಾಖೆ ಅಧಿಕಾರಿಗಳ ಜೊತೆ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಬುಧವಾರ (ಆಗಸ್ಟ್ 25) ಸಭೆ ನಡೆಸಿದ್ದಾರೆ. ನೀರಿಗೆ ವಿಷ ಬೆರೆಸುವವರ ವಿರುದ್ಧ ಕಠಿಣ ಕ್ರಮದ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪರಿಸರ ಇಲಾಖೆ ಅಧಿಕಾರಿಗಳ ಜೊತೆ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಬುಧವಾರ (ಆಗಸ್ಟ್ 25) ಸಭೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಇಂದು ಸಭೆ ನಡೆಸಿದ್ದಾರೆ. ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದಿದ್ದು ಹಲವು ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಅರಿಶಿನ ಗಣೇಶ ಮೂರ್ತಿ ನಿರ್ಮಾಣ ಕುರಿತಂತೆ ಚರ್ಚೆ ನಡೆದಿದೆ. ನೀರಿಗೆ ವಿಷ ಬೆರೆಸುವವರ ವಿರುದ್ಧ ಕಠಿಣ ಕ್ರಮದ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ನೀರಿನ ಪರಿಶುದ್ಧತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಕಾನೂನು ತರುವ ವಿಚಾರವಾಗಿ ಮಾತುಕತೆ ನಡೆಸಲಾಗಿದೆ. ಸಚಿವ ಆನಂದ್ ಸಿಂಗ್ ಅಸಮಾಧಾನದ ಬೆನ್ನಲ್ಲೇ ನಿನ್ನೆ (ಆಗಸ್ಟ್ 24) ವಿಕಾಸಸೌಧದಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಆ ಬಳಿಕ ಇಂದು ಇಲಾಖೆ ಅಧಿಕಾರಿಗಳ ಜೊತೆ ಆನಂದ್ ಸಿಂಗ್ ಸಭೆ ನಡೆಸಿದ್ದಾರೆ.
ಕರ್ನಾಟಕ ಸಚಿವ ಸಂಪುಟದಲ್ಲಿ ಆನಂದ್ ಸಿಂಗ್ ಬಿಟ್ಟರೆ ಬೇರೆ ಯಾರಿಗೂ ಅಸಮಾಧಾನವಿಲ್ಲ. ಬೇರೆ ಖಾತೆ ನೀಡುವಂತೆ ಸಚಿವರು ಒತ್ತಡ ಹೇರುತ್ತಿಲ್ಲ. ಸಚಿವ ಆನಂದ್ ಸಿಂಗ್ ಕರೆದು ಮಾತನಾಡಿದ್ದೇನೆ. ಈಗ ಕೊಟ್ಟಿರುವ ಖಾತೆಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಅದರಂತೆ ಸಿಂಗ್ ಅಧಿಕಾರ ಸ್ವೀಕರಿಸಿ ಕೆಲಸ ಆರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ಧರು.
ಕ್ಯಾಬಿನೆಟ್ ರಚನೆ ಬಳಿಕ ವರಿಷ್ಠರನ್ನು ಭೇಟಿ ಮಾಡುತ್ತಿದ್ದೇನೆ. ರಾಜ್ಯದ ವಿದ್ಯಮಾನಗಳ ಬಗ್ಗೆ ವರಿಷ್ಠರ ಜೊತೆ ಚರ್ಚಿಸುತ್ತೇನೆ. 4 ಸಚಿವ ಸ್ಥಾನಗಳ ಭರ್ತಿ ಬಗ್ಗೆ ಈಗಲೇ ಹೇಳಲು ಆಗಲ್ಲ. ಶಾಸಕ ರಮೇಶ್ ಸಚಿವ ಸ್ಥಾನ ಬೇಕು ಎನ್ನುವುದು ಸಹಜ. ಎಲ್ಲ ನಾಯಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಸಚಿವ ಆನಂದ್ ಸಿಂಗ್ ಬಿಟ್ಟು ಯಾರಿಗೂ ಆಕ್ಷೇಪ ಇಲ್ಲ ಎಂದು ಸದ್ಯದ ಪರಿಸ್ಥಿತಿ ಬಗ್ಗೆ ಅವರು ಮಾಹಿತಿ ನೀಡಿದ್ದರು.
ಅಮಿತ್ ಶಾ ಭೇಟಿಯಾದ ಬೊಮ್ಮಾಯಿ ಹೊಸ ಸರ್ಕಾರದ ಕಾರ್ಯವೈಖರಿ ಬಗ್ಗೆ ತಿಳಿಯಲು ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ ಉತ್ಸುಕರಾಗಿದ್ದರು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಭೇಟಿ ನಂತರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು. ನಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ತಿಳಿದುಕೊಂಡರು. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದರು. ಮುಖ್ಯಮಂತ್ರಿ ಸ್ಥಾನ ಎನ್ನುವುದು ಜವಾಬ್ದಾರಿಯುತ ಸ್ಥಾನ. ಸಿಎಂ ಸ್ಥಾನದ ಜವಾಬ್ದಾರಿ ಏನೆಂಬ ಅರಿವು ನನಗೆ ಇದೆ. ಬಿ.ಎಸ್.ಯಡಿಯೂರಪ್ಪನವರ ಜತೆ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಆಗಿರುವುದು ಸಂತೋಷದಿಂದಿರಲು ಅಲ್ಲ. ರಾಜ್ಯದ ಜನರನ್ನು ಸಂತೋಷದಿಂದ ಇಡಲು ಸಿಎಂ ಆಗಿದ್ದೇನೆ ಎಂದು ಅಮಿತ್ ಶಾ ಭೇಟಿ ನಂತರ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ಜೊತೆ ಸಮಾಧಾನಕರ ಭೇಟಿ ಬಳಿಕ, ಖಾತೆ ಅಧಿಕಾರ ಸ್ವೀಕರಿಸಿದ ಸಚಿವ ಆನಂದ್ ಸಿಂಗ್
ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ; ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ




