Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಆನೆಗುಂದಿಯಲ್ಲೂ ಆನಂದಯ್ಯನ ಕೊರೊನಾ ಔಷಧ ವಿತರಣೆ

ಕೊಪ್ಪಳ ಜಿಲ್ಲೆಯಲ್ಲಿ ಹಂಪಿ ಮೂಲದ ಗೋವಿಂದಾನಂದ ಸರಸ್ವತಿ ಶ್ರೀಗಳು ನಾಟಿ ವೈದ್ಯ ಆನಂದಯ್ಯ ಸಿದ್ಧಪಡಿಸಿದ ಆಯುರ್ವೇದ ಔಷಧವನ್ನು ವಿತರಿಸುತ್ತಿದ್ದಾರೆ.

ಕೊಪ್ಪಳದ ಆನೆಗುಂದಿಯಲ್ಲೂ ಆನಂದಯ್ಯನ ಕೊರೊನಾ ಔಷಧ ವಿತರಣೆ
ಕೊರೊನಾ ವೈರಸ್ ವಿರುದ್ಧ ಆಯುರ್ವೇದ ಔಷಧ ನೀಡಲು ಆನಂದಯ್ಯಗೆ ಆಂಧ್ರ ಸರ್ಕಾರ ಗ್ರೀನ್​ ಸಿಗ್ನಲ್
Follow us
TV9 Web
| Updated By: guruganesh bhat

Updated on: Jun 27, 2021 | 5:11 PM

ಕೊಪ್ಪಳ: ಆಂಧ್ರಪ್ರದೇಶದಲ್ಲಿ ಪ್ರಖ್ಯಾತಿಗೊಂಡಿರುವ ಆನಂದಯ್ಯನ ಕೊರೊನಾ ಔಷಧವನ್ನು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ವಿತರಣೆ ಮಾಡಲಾಗುತ್ತಿದೆ. ಹಂಪಿ ಮೂಲದ ಗೋವಿಂದಾನಂದ ಸರಸ್ವತಿ ಶ್ರೀಗಳು ನಾಟಿ ವೈದ್ಯ ಆನಂದಯ್ಯ ಸಿದ್ಧಪಡಿಸಿದ ಆಯುರ್ವೇದ ಔಷಧವನ್ನು ವಿತರಿಸುತ್ತಿದ್ದಾರೆ. ಈಗಾಗಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಸುಮಾರು 200 ಜನರಿಗೆ ಔಷಧ ವಿತರಣೆ ಮಾಡಲಾಗಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆ ಕೃಷ್ಣಪಟ್ಟಣಂನ ಆನಂದಯ್ಯ ಎಂಬುವವರು ತಯಾರಿಸಿದ ಈ ಔಷಧವನ್ನು ಕೊವಿಡ್​ಗಾಗಿ ನೀಡಲಾಗುತ್ತಿದೆ. ಸದ್ಯ ಈ ಔಷಧ ವಿತರಿಸಲು ಕರ್ನಾಟಕದಲ್ಲಿ ಅನುಮತಿ ಇಲ್ಲ ಎಂದು ಹೇಳಲಾಗಿದೆ.

ಕೊಪ್ಪಳದಲ್ಲಿ 758 ಅಪೌಷ್ಟಿಕ ಮಕ್ಕಳನ್ನ ಗುರುತಿಸಲಾಗಿದೆ; ಜಿಲ್ಲಾ ಪಂಚಾಯತಿ ಸಿಇಒ ರಘುನಂದನ್ ಮೂರ್ತಿ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳನ್ನು ಬೆಂಬಿಡದೆ ಕಾಡುತ್ತಿದೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ತಜ್ಞರ ವರದಿ ಹಿನ್ನೆಲೆ ಜಿಲ್ಲಾಡಳಿತ ಈಗಲೇ ತಯಾರಿ ಆರಂಭಿಸಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಆರೈಕೆಗೆ ಜಿಲ್ಲಾಡಳಿತ ವಿಶೇಷ ಯೋಜನೆ ರೂಪಿಸಿದೆ. 0-6 ವಯಸ್ಸಿನ ಮಕ್ಕಳಿಗೆ ಕೊರೊನಾ ಬರದಂತೆ ಎಚ್ಚರ ವಹಿಸಲು ಪಾಲಕರಿಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ದೊಡ್ಡ ಮಕ್ಕಳಿಗೆ ಸ್ವಲ್ಪ ತಿಳುವಳಿಕೆ ಮೂಡಿರುತ್ತದೆ. ಜೊತೆಗೆ ಆರೋಗ್ಯವಂತ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಚಿಕಿತ್ಸೆಗೆ ಸ್ಪಂದಿಸಲಿದ್ದಾರೆ. ಬೇಗ ಗುಣಮುಖರಾಗುವ ಶಕ್ತಿ ಹೊಂದಿರುತ್ತಾರೆ. ಆದರೆ ಅಪೌಷ್ಟಿಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅಂಥಹ ಮಕ್ಕಳ ಬಗ್ಗೆ ಈಗಿನಿಂದಲೇ ಜಾಗೃತಿ ವಹಿಸಬೇಕಾಗಿದೆ.

ಜಿಲ್ಲೆಯಲ್ಲಿ ಮಕ್ಕಳ ತಜ್ಞ ವೈದ್ಯರ ಕೊರತೆ ತೀವ್ರವಾಗಿದೆ. ಲಭ್ಯವಿರುವ ವೈದ್ಯರಿಂದಲೇ ಚಿಕಿತ್ಸೆ ನೀಡಬೇಕಾದ ಅನಿವಾರ್ಯತೆ ಇದೆ. ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ ಅಂಗನವಾಡಿ ಕೇಂದ್ರದಲ್ಲಿ ಸಾಮಾನ್ಯ 1,32,734 ಮಕ್ಕಳು, ಸಾಧಾರಣ 30,273 ಮಕ್ಕಳಿದ್ದು, ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 758 ಮಕ್ಕಳನ್ನು ಗುರುತಿಸಿದೆ. ಕನಕಗಿರಿ ತಾಲೂಕಿನಲ್ಲಿ 279, ಕೊಪ್ಪಳ 78, ಗಂಗಾವತಿ 170, ಕುಷ್ಟಗಿ 66, ಯಲಬುರ್ಗಾ 155 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಜಿಲ್ಲೆಯ 758 ಅಪೌಷ್ಟಿಕ ಮಕ್ಕಳ ಪಾಲಕರಿಗೆ ತರಬೇತಿ ಆಯೋಜಿಸಲು ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳನ್ನು ರಕ್ಷಿಸಿಕೊಳ್ಳುವ ಬಗೆ, ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ, ಮಕ್ಕಳಲ್ಲಿ ಆಗುವ ಬದಲಾವಣೆಗೆ ಸಂಬಂಧಿಸಿದಂತೆ ವೈದ್ಯರ ಸಂಪರ್ಕ, ಮಕ್ಕಳ ಆರೈಕೆ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡಿದೆ. ಆಯಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರು, ವಿಷಯ ಪರಿಣಿತರನ್ನು ಕರೆಸಿ ಸುಮಾರು 15 ದಿನಗಳವರೆಗೆ ತರಬೇತಿ ಆಯೋಜಿಸುತ್ತಿದೆ. ಪ್ರತಿ ದಿನ 50 ರಿಂದ 100 ಮಕ್ಕಳ ಪಾಲಕರಿಗೆ ತರಬೇತಿ ಆಯೋಜಿಸಲು ಕ್ರಿಯಾ ಯೋಜನೆ ರೂಪಿಸುತ್ತಿದೆ.

ಇದನ್ನೂ ಓದಿ: ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ.. 

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

( Anandaiah Covid Medicine distributed in Koppal Anegundi)

ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು