ಕರ್ನಾಟಕ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ, ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ
ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದ ಹಿನ್ನೆಲೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ.
ಚಾಮರಾಜನಗರ: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು (Anganavadi Workers) ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ನಡೆಸಿದರು. ಗೃಹ ಲಕ್ಷ್ಮೀ ಯೋಜನೆ ಬೇಡ ಗೌವರದನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ ನೀಡಿರುವ ಮೊಬೈಲ್ ವಾಪಸ್ಸು ನೀಡಲು ಮುಂದಾಗಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಸರ್ಕಾರ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಗೌರವದನದ ಕುರಿತು ಬಜೆಟ್ನಲ್ಲಿ ಪ್ರಸ್ಥಾವವಾಗಿಲ್ಲ. ಈ ಹಿನ್ನಲೆ ಕೈಯಲ್ಲಿ ಮೊಬೈಲ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರಿನಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದರು. ರಾಯಚೂರು ನಗರದ ರಾಮಲಿಂಗೇಶ್ವರ ದೇವಸ್ಥಾನದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿದರು. ನಂತರ ಕಚೇರಿ ಎದುರು ಕೆಲ ಕಾಲ ಕೂತು ಪ್ರತಿಭಟನೆ ನಡೆಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇ ವೇಳೆ ಸರ್ಕಾರ ಕೊಟ್ಟ ಮೊಬೈಲ್ ಅನ್ನು ಸರ್ಕಾರವೇ ಹಿಂಪಡೆಯಲಿ ಎಂದು ಆಗ್ರಹಿಸಿದರು. ಬಳಿಕ ಕಾರ್ಯಕರ್ತೆಯರು ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಕೆ ಮಾಡಿದರು.
ಇದನ್ನೂ ಓದಿ: Toronto: ಭಾರತೀಯ ದೂತವಾಸ ಕಚೇರಿ ಎದುರು ಖಲಿಸ್ತಾನಿಗಳ ಪ್ರತಿಭಟನೆ: ತ್ರಿವರ್ಣ ಧ್ವಜ ಬೀಸುವ ಮೂಲಕ ತಕ್ಕ ಉತ್ತರ ನೀಡಿದ ಭಾರತೀಯರು
ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕಲಬುರಗಿಯ ಅಂಗನವಾಡಿ ಕಾರ್ಯಕರ್ತೆಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದೆ ಕುಳಿತ ಪ್ರತಿಭಟನಾಕಾರರು, ಬಾಕಿ ವೇತನ ಪಾವತಿ, ಗೌರವಧನ ಹೆಚ್ಚಳ ಇತ್ಯಾದಿಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ನಡೆಯಿತು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ