ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಸ್ತುತ 2600 ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಮಾಡುವುದಕ್ಕೆ ಸುತ್ತೋಲೆ ತಂದಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಧರಣಿ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಯಾರನ್ನೂ ಕೆಲಸದಿಂದ ತೆಗೆಯೋಲ್ಲ ಎಂದ ಹೆಬ್ಬಾಳ್ಕರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 24, 2024 | 3:45 PM

ಬೆಂಗಳೂರು, ಜೂನ್​ 24: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು (anganwadi activist) ತೀವ್ರ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಂದ ಧರಣಿ ಮಾಡಿದ್ದಾರೆ. ಅತ್ತ ಕಾರ್ಯಕರ್ತೆಯರು ಮುಷ್ಕರ ಮಾಡುತ್ತಿದ್ದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ (Lakshmi Hebbalkar) ಸಿಎಂ ಸಿದ್ದರಾಮಯ್ಯ ಬುಲಾವ್​ ನೀಡಿದ್ದರು. ಅವರ ಬೇಡಿಕೆಗಳ ಕುರಿತು ಸಿಎಂ ಜೊತೆ ವಿಧಾನಸೌಧದಲ್ಲಿ ಚರ್ಚೆ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತರನ್ನು ಕೆಲಸದಿಂದ ತೆಗೆಯೋದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

ಸಿಎಂ ಸಿದ್ದರಾಮಯ್ಯರನ್ನು ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಸ್ತುತ 2600 ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಮಾಡುವುದಕ್ಕೆ ಸುತ್ತೋಲೆ ತಂದಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್; ಆತಂಕದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು

ಎಲ್​ಕೆಜಿ, ಯುಕೆಜಿಯನ್ನು ಸರ್ಕಾರಿ ಶಾಲೆಗಳಲ್ಲಿ‌ ಮಾಡಲು ಚಿಂತನೆ ಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳಲ್ಲೇ ಮಾಡಬೇಕೆಂಬ ಕಳಕಳಿ ಶಿಕ್ಷಣ ಇಲಾಖೆಗೂ ಇದೆ. ಆದರೆ ಅಂಗನವಾಡಿಯವರು ವಿರೋಧಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆ ಆಗಿದೆ. ಅಂಗನವಾಡಿಗಳನ್ನ ಮೇಲ್ದೆರ್ಜೇಗೇರಿಸುವ ಕೆಲಸದ ಬಗ್ಗೆ ಸಿಎಂ ಈ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ; ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ

ಕನ್ನಡ, ಇಂಗ್ಲಿಷ್ ಕಲಿಸುವ ಚಿಂತನೆ ಇದೆ. ಸರ್ಕಾರಿ ಮಾಂಟೆಸ್ಸರಿ ಮಾದರಿಯಲ್ಲಿ ಮಾಡುತ್ತೇವೆ. 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾನ್ಸ್ ಡಿಪಾರ್ಟ್ಮೆಂಟ್ ಒಪ್ಪಿಗೆ ಪಡೆದು ಮಾಡೋಣ ಎಂದಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು