ಸಮುದಾಯದ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಪುಲಿಕೇಶಿ ನಗರ MLA ಮನೆ, DJ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಪೊಲೀಸ್‌ ಫೈರಿಂಗ್‌ಗೆ 2 ಬಲಿ

| Updated By: ಸಾಧು ಶ್ರೀನಾಥ್​

Updated on: Aug 12, 2020 | 12:42 PM

[lazy-load-videos-and-sticky-control id=”M1ss198xDbk”] ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಕಾವಲ್‌ ಭೈರಸಂದ್ರದಲ್ಲಿರುವ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ ಉದ್ರಿಕ್ತ ಜನರ ಗುಂಪು ದಾಳಿ ಮಾಡಿದೆ. ದಾಳಿಗೆ ಕಾರಣ ಶಾಸಕರ ಸಂಬಂಧಿಯೊಬ್ಬರು ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೊಸ್ಟ್ ಅನ್ನು ಸಾಮಾಜಿಕ ತಾಣದಲ್ಲಿ ಹಾಕಿದ್ದಾರೆಂಬ ಆರೋಪ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ ಈ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಅಖಂಡ ಮೂರ್ತಿ ನಾನು […]

ಸಮುದಾಯದ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಪುಲಿಕೇಶಿ ನಗರ MLA ಮನೆ, DJ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಪೊಲೀಸ್‌ ಫೈರಿಂಗ್‌ಗೆ 2 ಬಲಿ
Follow us on

[lazy-load-videos-and-sticky-control id=”M1ss198xDbk”]

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಕಾವಲ್‌ ಭೈರಸಂದ್ರದಲ್ಲಿರುವ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ ಉದ್ರಿಕ್ತ ಜನರ ಗುಂಪು ದಾಳಿ ಮಾಡಿದೆ. ದಾಳಿಗೆ ಕಾರಣ ಶಾಸಕರ ಸಂಬಂಧಿಯೊಬ್ಬರು ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೊಸ್ಟ್ ಅನ್ನು ಸಾಮಾಜಿಕ ತಾಣದಲ್ಲಿ ಹಾಕಿದ್ದಾರೆಂಬ ಆರೋಪ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ
ಈ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಅಖಂಡ ಮೂರ್ತಿ ನಾನು ಸ್ಥಳದಲ್ಲಿ ಇಲ್ಲ. ನನಗೆ ಯಾವುದೇ ಪೊಸ್ಟ್ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದಾರೆ. ಆದ್ರೆ ಜನರು ಕೇವಲ ಉಹಾಪೊಹಗಳ ಮೇಲೆ ಈ ರೀತಿ ದಾಳಿ ಮಾಡುವುದು, ಗುಂಪು ಸೇರಿ ಗಲಾಟೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ನನ್ನ ಅಕೌಂಟ್‌ ಹ್ಯಾಕ್‌ ಆಗಿದೆ: ನವೀನ್‌
ಆದ್ರೆ ಶಾಸಕರ ಸಂಬಂಧಿ ನವೀನ್ ಎಂಬವರು, ನನ್ನ ಸೋಷಿಯಲ್ ಮೀಡಿಯಾ ಅಕೌಂಟ್ ಹ್ಯಾಕ್ ಆಗಿದೆ ಎಂದು ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಪೊಸ್ಟ್ ಮಾಡಿದ್ದಾರೆ.

ಡಿಜೆ ಹಳ್ಳಿ ಪೊಲೀಸ್‌ ಠಾಣೆ ಮೇಲೆ ದಾಳಿ
ಆದ್ರೆ ಉದ್ರಿಕ್ತ ಜನರು ಗುಂಪು ಕೇವಲ ಶಾಸಕರ ಮನೆ ಮೇಲೆ ದಾಳಿ ಮಾಡಿ ಸುಮ್ಮನಾಗಿಲ್ಲ. ನಂತರ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಮೇಲೂ ದಾಳಿ ಮಾಡಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ಸೇರಿರುವ ಉದ್ರಿಕ್ತ ಜನರು ಗುಂಪು ಪೊಲೀಸ್ ಠಾಣೆಯತ್ತ  ಕಲ್ಲುಗಳನ್ನು ಎಸೆಯುತ್ತಿದೆ. ಇದು ಪೊಲೀಸರಿಗೆ ಆತಂಕಕ್ಕಿಡು ಮಾಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ರವಾನಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ ಪಂತ್ ಕೂಡಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ ಗುಡುಗು
ಈ ನಡುವೆ ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿ ಮಾಡುವುದು ಸರಿಯಲ್ಲ, ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಿಡಿಗೇಡಿಗಳ ವಿರುದ್ದ ತಕ್ಕ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಯಾರೂ ಶಾಂತಿಗೆ ಭಂಗ ಮಾಡಬಾರದು. ಈ ಘಟನೆ ಹಿಂದೆ ಯಾರೇ ಇದ್ದರೂ ಅಂತಹ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಡಿಸಿಪಿ ಬೀಮಾಶಂಕರ್‌ ಗುಳೇದ್‌ ವಾಹನ ಜಖಂ
ಆದ್ರೂ ಸ್ಥಳದಲ್ಲಿ ಮಾತ್ರ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ಎಲ್ಲೆಂದರಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚುವ ಕೆಲಸ ಮುಂದುವರಿದಿದೆ. ಕೆಲ ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ. ಬೆಂಗಳೂರಿನ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್‌ ಗುಳೆದ್‌ ಅವರ ವಾಹನವೂ ಗಲಾಟೆಯಲ್ಲಿ ಜಖಂ ಗೊಂಡಿದೆ. ರಿಸರ್ವ್ ಪೊಲೀಸ್ ಸೇರಿದಂತೆ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ರವಾನಿಸಲಾಗಿದೆ.

ಜಮೀರ್‌ ಅಹ್ಮದ್‌ ಖಾನ್‌ ಕೈಗೆ ಗಾಯ
ಈ ನಡುವೆ ಗಲಾಟೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಡಿಜೆ ಹಳ್ಳಿ ಪೊಲೀಸ್‌ ಠಾಣೆಗೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ ನಂತರ ನಡೆದ ಬೆಳವಣಿಗೆಗಳಲ್ಲಿ ಅವರ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು
ಲಭ್ಯವಾಗಿರುವ ಮಾಹಿತಿಯ ಪ್ರಕಾರ ಪುಂಡರ ಗುಂಪು ಪೊಲೀಸ್‌ ಕ್ವಾಟರ್ಸ್‌ ಮೇಲೂ ದಾಳಿ ಮಾಡಿದ್ದಾರೆ ಎನ್ನಲಾಗ್ತಿದೆ. ಅಷ್ಟೇ ಅಲ್ಲ ಕಿಡಿಗೇಡಿಗಳು ವಾಹನಗಳಿಗೆ ಬೆಂಕಿ ಹಚ್ಚಿ ಚಪ್ಪಾಳೆ ಹೊಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಪರಿಸ್ಥಿತಿ ವಿಕೋಪಕ್ಕೆ ಹೋದ ಪರಿಣಾಮ, ಕಿಡಿಗೇಡಿಗಳನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಜೊತೆಗೆ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೆಕ್ಸನ್‌ 144 ಜಾರಿ ಮಾಡಲಾಗಿದೆ.

ಪೊಲೀಸ್‌ ಫೈರಿಂಗ್‌ಗೆ ಎರಡು ಬಲಿ
ತಡ ರಾತ್ರಿಯಾದರೂ ಕಡಿಮೆಯಾಗದ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಒಬ್ಬ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಕೂಡಾ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಕೆಎಸ್‌ಆರ್‌ಪಿ ವಾಹನ ಸೇರಿದಂತೆ ಗಲಾಟೆಯಲ್ಲಿ ಹಲವಾರು ವಾಹನಗಳು ಹಾನಿಗೊಳಗಾಗಿದ್ದು, ಕೆಲ ವಾಹನಗಳು ಸುಟ್ಟು ಹೋಗಿವೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ
ಈ ನಡುವೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಫೊನ್‌ ಮಾಡಿ ಅಗತ್ಯ ಕ್ರಮಗಳ ಕುರಿತು ಸೂಚನೆ ನೀಡಿದ್ದಾರೆ.  ಅಷ್ಟೇ ಅಲ್ಲ ಗೃಹ ಸಚಿವರೊಂದಿಗೆ ಖುದ್ದು ಸಿಎಂ ಅವರೇ ಪರಿಸ್ಥಿತಿಯನ್ನು ಮಾನಿಟರ್‌ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೊತೆಗೆ ಪರಿಸ್ಥಿತಿ ನಿಯಂತ್ರಿಸಲು ಸಿಎಂ ಪೊಲೀಸರಿಗೆ ಮುಕ್ತ ಸ್ವಾತಂತ್ರ ನೀಡಿದ್ದಾರೆಂದು ತಿಳಿದು ಬಂದಿದೆ.

ತಡರಾತ್ರಿ 15ಕ್ಕೂ ಹೆಚ್ಚು ಗಲಭೆಕೋರರ ಬಂಧನ
ತಡರಾತ್ರಿ ಬಂದ ಮಾಹಿತಿಯ ಪ್ರಕಾರ ಬೆಂಗಳೂರು ಪೊಲೀಸರು 15ಕ್ಕೂ ಹೆಚ್ಚು ಆರೋಪಿಗಳನ್ನು ಗಲಭೆಗೆ ಸಂಬಂಧಿಸಿದಂತೆ ಅರೆಸ್ಟ್‌ ಮಾಡಿದ್ದಾರೆ. ಇನ್ನೂ ಅನೇಕ ಗಲಭೆಕೋರರನ್ನು ಪತ್ತೆ ಹಚ್ಚಲಾಗುತ್ತಿದೆ. ಜೊತೆಗೆ ಘಟನೆಯ ಕುರಿತು ತನಿಖೆಗೆ ವಿಶೇಷ ತಂಡಗಳನ್ನು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ರಚಿಸಿದ್ದಾರೆಂದು ತಿಳಿದು ಬಂದಿದೆ. ಇನ್ನು, ವಿವಾದಾತ್ಮಕ ಪೊಸ್ಟ್‌ ಮಾಡಿದನೆನ್ನಲಾದ ನವೀನ್‌ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆಂದು ತಿಳಿದು ಬಂದಿದೆ.

 

Published On - 11:48 pm, Tue, 11 August 20