ಕಾಲುಬಾಯಿ ರೋಗಕ್ಕೆ 50 ಲಕ್ಷ ಡೋಸ್ ಲಸಿಕೆ ಮಂಜೂರು: ಪ್ರಭು ಚೌಹಾಣ್ ಮಾಹಿತಿ

| Updated By: ganapathi bhat

Updated on: Oct 19, 2021 | 5:38 PM

ಸದ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಂಡಿದೆ. ರೋಗೋದ್ರೇಕ ಕಂಡುಬಂದ 5 ಕಿ.ಮೀ. ವ್ಯಾಪಿಯಲ್ಲಿ ಲಸಿಕೆ ನೀಡುವ ಬಗ್ಗೆ ತಿಳಿಸಲಾಗಿದೆ.

ಕಾಲುಬಾಯಿ ರೋಗಕ್ಕೆ 50 ಲಕ್ಷ ಡೋಸ್ ಲಸಿಕೆ ಮಂಜೂರು: ಪ್ರಭು ಚೌಹಾಣ್ ಮಾಹಿತಿ
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಕಾಲುಬಾಯಿ ರೋಗಕ್ಕೆ 50 ಲಕ್ಷ ಡೋಸ್ ಲಸಿಕೆ ಮಂಜೂರು ಮಾಡಲಾಗಿದೆ. ಕೇಂದ್ರ ಸರ್ಕಾರ ಮೊದಲನೇ ಹಂತದಲ್ಲಿ 25 ಲಕ್ಷ ಲಸಿಕೆ ಪೂರೈಸಲಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೊದಲನೇ ಹಂತದಲ್ಲಿ ಬಳ್ಳಾರಿ, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಚಿತ್ರದುರ್ಗ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಓ ಮಾದರಿಯ ವೈರಸ್ ಕಂಡು ಬಂದಿದೆ. ಜ್ವರದಿಂದ ಕರುಗಳು ಈ ರೋಗಕ್ಕೆ ಹೆಚ್ಚು ತುತ್ತಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆಯ ಕ್ರಮ ಕೈಗೊಳ್ಳಲಾಗಿದೆ. ಎರಡನೇ ಹಂತದಲ್ಲಿ 25 ಲಕ್ಷ ಡೋಸ್ ಲಸಿಕೆ ಪೂರೈಕೆ ಮಾಡಲಾಗುತ್ತದೆ. ಅದನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಾಲುಬಾಯಿ ರೋಗ ಹೆಚ್ಚು ಕಂಡುಬರುತ್ತಿರುವ ಜಿಲ್ಲೆಗಳಲ್ಲಿ ಸ್ಯಾಂಪಲ್ ಸಂಗ್ರಹಣೆ ಮಾಡಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಸದ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಂಡಿದೆ. ರೋಗೋದ್ರೇಕ ಕಂಡುಬಂದ 5 ಕಿ.ಮೀ. ವ್ಯಾಪಿಯಲ್ಲಿ ಲಸಿಕೆ ನೀಡುವ ಬಗ್ಗೆ ತಿಳಿಸಲಾಗಿದೆ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಕಾಲುಬಾಯಿ ಜ್ವರ ಉಲ್ಬಣ: ಜಾತ್ರೆ, ಸಂತೆ ನಿಷೇಧ

ಇದನ್ನೂ ಓದಿ: ಕೋಲಾರದಲ್ಲಿ ಮತ್ತೆ ಕಾಣಿಸಿಕೊಂಡಿದೆ ಕಾಲುಬಾಯಿ ರೋಗ; ಜಾನುವಾರುಗಳ ರಕ್ಷಣೆ ಮಾಡುವಂತೆ ರೈತರ ಆಗ್ರಹ