ಅನಿರುದ್ಧ್​-​ಕಾವ್ಯಾ ಮಾರನ್​ ಮದುವೆ: ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ ಪತ್ರಿಕೆ ನೀಡಿದ ಕಲಾನಿಧಿ ಮಾರನ್ ದಂಪತಿ!

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ವಿವಾಹ ನವೆಂಬರ್‌ನಲ್ಲಿ ನಿಗದಿಯಾಗಿದೆ. ಸನ್ ಟಿವಿ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್ ದಂಪತಿ, ಸಿಎಂ ಡಿಕೆ ಶಿವಕುಮಾರ್​​​ ಅವರನ್ನು ಭೇಟಿ ಮಾಡಿ ತಮ್ಮ ಮಗಳ ಮದುವೆಗೆ ಬರುವಂತೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಅನಿರುದ್ಧ್​-​ಕಾವ್ಯಾ ಮಾರನ್​ ಮದುವೆ: ಸಿಎಂ ಡಿಕೆ ಶಿವಕುಮಾರ್‌ಗೆ ಆಹ್ವಾನ ಪತ್ರಿಕೆ ನೀಡಿದ ಕಲಾನಿಧಿ ಮಾರನ್ ದಂಪತಿ!
ಡಿಕೆ ಶಿವಕುಮಾರ್​​, ಕಲಾನಿಧಿ ಮಾರನ್​ ದಂಪತಿ

Updated on: Oct 17, 2026 | 4:02 PM

ಮುಖ್ಯಾಂಶಗಳು

  • ಅನಿರುದ್ಧ್​ ರವಿಚಂದರ್​ ಜೊತೆ ಕಾವ್ಯಾ ಮಾರನ್​ ಮದುವೆ
  • ಬೆಂಗಳೂರಿನಲ್ಲಿ ಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿ ಕಲಾನಿಧಿ ಮಾರನ್​​ ದಂಪತಿ
  • ಸಿಎಂ ಡಿಕೆ ಶಿವಕುಮಾರ್​ಗೆ ಆಹ್ವಾನ ಪತ್ರಿಕೆ

ಬೆಂಗಳೂರು, ಅಕ್ಟೋಬರ್​​ 17: ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್​ ಮತ್ತು ಐಪಿಎಲ್‌ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕಾವ್ಯಾ ಮಾರನ್​ ಅವರ ವಿವಾಹ ನಿಗದಿ ಆಗಿದ್ದು, ನವೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ಮದುವೆ ನಡೆಯಲಿದೆ. ಈಗಾಗಲೇ ಮದುವೆ ಕಾರ್ಯಗಳು ಶುರುವಾಗಿದ್ದು, ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದೆ. ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​ ಅವರಿಗೂ ಮದುವೆ ಆಹ್ವಾನ ಪತ್ರಿಕೆ ನೀಡಲಾಗಿದೆ.

ಸಿಎಂ ಡಿಕೆ ಶಿವಕುಮಾರ್​ಗೆ ಆಹ್ವಾನ ಪತ್ರಿಕೆ 

ಸನ್​ ಟಿವಿ ಗ್ರೂಪ್ ಅಧ್ಯಕ್ಷ ಕಲಾನಿಧಿ ಮಾರನ್​​ ಮತ್ತು ಅವರ ಪತ್ನಿ ಕಾವೇರಿ ಮಾರನ್​​ ಅವರು ಇಂದು ಬೆಂಗಳೂರಿನಲ್ಲಿ ರಾಜ್ಯದ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ತಮ್ಮ ಮಗಳ ಮದುವೆಯ ಆಮಂತ್ರಣವನ್ನು ನೀಡಿದ್ದಾರೆ. ಈ ವೇಳೆ ಕಾವ್ಯ ಕಲಾನಿಧಿ ಅವರು ಕೂಡ ಜೊತೆಗಿದ್ದರು.

ಇದನ್ನೂ ಓದಿ: ನವೆಂಬರ್ ತಿಂಗಳಲ್ಲಿ ಅನಿರುದ್ಧ್-ಕಾವ್ಯಾ ಮಾರನ್ ವಿವಾಹ; ಚೆನ್ನೈನಲ್ಲಿ ಮದುವೆ

ಸದ್ಯ ಅನಿರುದ್ಧ್ ಮತ್ತು ಕಾವ್ಯಾ ಅವರ ವಿವಾಹದ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಚಿತ್ರರಂಗದ ನಟ, ನಟಿಯರು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ರಾಜಕಾರಣಿಗಳಿಗೆ ಕಲಾನಿಧಿ ಮಾರನ್​​ ದಂಪತಿ ಖುದ್ದಾಗಿ ತಾವೇ ಆಹ್ವಾನ ಪತ್ರಿಕೆಯನ್ನ ನೀಡುತ್ತಿದ್ದಾರೆ.

ಪ್ರಧಾನಿ ಮೋದಿ ಸೇರಿ ಹಲವರಿಗೆ ಆಹ್ವಾನ ಪತ್ರಿಕೆ

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ತೆರಳಿ ಆಹ್ವಾನ ಪತ್ರಿಕೆ ನೀಡಲಾಗಿದೆ. ಜೊತೆಗೆ ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ತಮ್ಮ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಜೊತೆಗೆ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್​ರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಮದುವೆ ಯಾವಾಗ ಮತ್ತು ಏಲ್ಲಿ?

ಇನ್ನು ಅನಿರುದ್ಧ್ ಮತ್ತು ಕಾವ್ಯಾ ಅವರ ವಿವಾಹ ನವೆಂಬರ್ 11ರಂದು ಗ್ರೀಸ್‌ನಲ್ಲಿ ನಡೆಯಲಿದೆ. ಬಳಿಕ ನವೆಂಬರ್ 21 ರಂದು ಚೆನ್ನೈನಲ್ಲಿ ಆರತಕ್ಷತೆ ನಡೆಯಲಿದೆ. ಚಿತ್ರರಂಗ, ರಾಜಕೀಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:59 pm, Sat, 17 October 26

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us