ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ ಕೇಳಿ ಬಂದ ಹಿನ್ನಲೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಲಾಗಿದೆ.
ಹುಬ್ಬಳ್ಳಿ, ಮೇ 18: ಅಂಜಲಿ ಅಂಬಿಗೇರ ಕೊಲೆ (murder) ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ (DCP P Rajeev) ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಪೊಲೀಸರ ಮೇಲೆ ಆರೋಪ ಕೇಳಿ ಬಂದ ಹಿನ್ನಲೆ ಹುಬ್ಬಳ್ಳಿಗೆ ಗೃಹಸಚಿವರ ಭೇಟಿಗೂ ಮುನ್ನ ಡಿಸಿಪಿ ರಾಜೀವ್ ಅಮಾನತು ಮಾಡಲಾಗಿದೆ. ಇತ್ತೀಚೆಗೆ ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ, ಹೆಡ್ಕಾನ್ಸ್ಟೇಬಲ್ ರೇಖಾರನ್ನು ಹು-ಧಾ ಆಯುಕ್ತರು ಅಮಾನತು ಮಾಡಿದ್ದರು. ಆ ಮೂಲಕ ಅಂಜಲಿ ಹತ್ಯೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಮಾಡಲಾಗಿದೆ.
ಅಂಜಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸಂತೋಷ್ ಲಾಡ್
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇವತ್ತು ಅಂಜಲಿ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಘಟನೆ ನಡೆದು ನಾಲ್ಕು ದಿನಗಳ ಬಳಿಕ ಸಚಿವರು ಹಾಗೂ ಶಾಸಕರು ಆಗಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಈ ವೇಳೆ ಸ್ಥಳೀಯ ನಾಯಕರು ಜನರನ್ನ ಸಮಾಧಾನಗೊಳಿಸಿದರು. ಲಾಡ್ ಫೌಂಡೇಶನ್ ವತಿಯಿಂದ ಸಚಿವರು ಎರಡು ಲಕ್ಷ ರೂಪಾಯಿ ಚೆಕ್ ವಿತರಿಸಿದ್ದಾರೆ.
ಇಂತಹ ಪಾಪಿ ಮಗ ಯಾರಿಗೂ ಬೇಡ: ಗಿರೀಶ್ ತಾಯಿ
ಇನ್ನು ಆರೋಪಿ ಗಿರೀಶ್ ತಾಯಿ ಸವಿತಾ ಟಿವಿ9 ಜತೆ ಮಾತನಾಡಿದ್ದು, ಇಂತಹ ಪಾಪಿ ಮಗ ಯಾರಿಗೂ ಬೇಡ ಅಂತಾ ಆಕ್ರೋಶ ಹೊರಹಾಕಿದ್ದಾರೆ. ನನಗೆ ಇವನೊಬ್ಬನೇ ಮಗ, ಏನು ಕೆಲಸ ಮಾಡ್ತಿದ್ನೋ ಗೊತ್ತಿಲ್ಲ. ನ್ಯಾಯಾಲಯ ಅವನಿಗೆ ಏನು ಶಿಕ್ಷೆ ಕೊಡುತ್ತದೆಯೋ ಕೊಡಲಿ. ನನ್ನ ಮಗ ವಿಶ್ವ ಮಾಡಿದ ತಪ್ಪಿಗೆ ನಾವೆಲ್ಲ ಶಿಕ್ಷೆ ಅನುಭವಿಸ್ತಿದ್ದೇವೆ. ಮೊದಲು ವಿಶ್ವ ಚೆನ್ನಾಗಿದ್ದ, 4 ವರ್ಷದ ನಂತರ ಹೀಗೆ ಆಗಿದ್ದಾನೆ. ಅಂತಹ ಮಗ ನನಗೆ ಬೇಡ, ಅವನನ್ನ ನೋಡಲು ಹೋಗುವುದಿಲ್ಲ ಹೇಳಿದ್ದಾರೆ.
ಇದನ್ನೂ ಓದಿ: ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ರು, ಆದ್ರೆ ನನ್ನ ಮಗಳ ಕೊಲೆ ಮಾಡಿದ್ರು: ನಿರಂಜನ ಹಿರೇಮಠ
ಇದೆಲ್ಲದರ ನಡುವೆ ಅಂಜಲಿ ಹತ್ಯೆ ಖಂಡಿಸಿ ಇವತ್ತು ಕೂಡಾ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆದಿತ್ತು. ಅಂಬಿಗರ ಚೌಡಯ್ಯ ಶ್ರೀಗಳ ನೇತ್ರತ್ವದಲ್ಲಿ ಇವತ್ತು ಕೂಡಾ ದೊಡ್ಡ ಹೋರಾಟ ನಡೆದಿತ್ತು. ದಿಂಗಾಲೇಶ್ವರ ಶ್ರೀ, ಬಸವರಾಜ ದೇವರು ಸೇರಿದಂತೆ ಅನೇಕ ಶ್ರೀಗಳು ಪಾಲ್ಗೊಂಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:15 pm, Sat, 18 May 24