ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯ ಕಹಿ ನೆನಪು ಇನ್ನೂ ಹಸಿಯಾಗಿರುವಾಗಲೇ ಅದೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯನ್ನ ಹತ್ಯೆಗೈಯಲಾಗಿದೆ. ಕಳೆದ 3 ದಿನಗಳಿಂದ ರಜೆ ಮೇಲೆ ತೆರಳಿದ್ದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅಂಜಲಿ ಕೊಲೆ ಹಿನ್ನೆಲೆ ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಿದ್ದಾರೆ. ಅಂಜಲಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
ಅಂಜಲಿ ಕೊಲೆ: ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
Edited By:

Updated on: May 15, 2024 | 7:16 PM

ಹುಬ್ಬಳ್ಳಿ, ಮೇ 15: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯ ಕಹಿ ನೆನಪು ಇನ್ನೂ ಹಸಿಯಾಗಿರುವಾಗಲೇ ಅದೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯನ್ನ ಹತ್ಯೆಗೈಯಲಾಗಿದೆ. ಯುವತಿಯನ್ನು ಪಾಗಲ್ ಪ್ರೇಮಯೊಬ್ಬನು ಭೀಕರವಾಗಿ ಹತ್ಯೆ (murder) ಮಾಡಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯ ಬಂಧನಕ್ಕೆ ಪೊಲೀಸರು ತಂಡ ಸಿದ್ಧಪಸಿಡಿದ್ದಾರೆ. ಕಳೆದ 3 ದಿನಗಳಿಂದ ರಜೆ ಮೇಲೆ ತೆರಳಿದ್ದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅಂಜಲಿ (Anjali) ಕೊಲೆ ಹಿನ್ನೆಲೆ ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಿದ್ದಾರೆ.

ಮನವೊಲಿಕೆ ನಂತರ ಪ್ರತಿಭಟನೆ ಕೈ ಬಿಟ್ಟ ಪ್ರತಿಭಟನಾಕಾರರು ಶವ ಸಂಸ್ಕಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಅಂತ್ಯಸಂಸ್ಕಾರ ಸ್ಥಳದತ್ತ ಅಂಜಲಿ ಮೃತದೇಹ ತೆಗೆದುಕೊಂಡು ಹೋಗಲಾಗಿದೆ.

ಪೊಲೀಸ್ ಆಯುಕ್ತೆ​ ರೇಣುಕಾ ಹೇಳಿದ್ದಿಷ್ಟು 

ಬಳಿಕ ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ, ಅಂಜಲಿ ಅಂಬಿಗೇರಗೆ 4 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಂಜಲಿ ಕೊಲೆ ಮಾಡಿದ ವಿಶ್ವ ಅಲಿಯಾಸ್ ಗಿರೀಶ್ ಪರಿಚಯಸ್ಥ. ಇಂದು ಮುಂಜಾನೆ ಅಂಜಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅವರ ಮನೆಯವರ ದೂರಿನ ಪ್ರಕಾರ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ತನ್ನ ಮಗಳಂತೆ ಮತ್ತೋರ್ವ ಯುವತಿ ಹತ್ಯೆ: ಗೃಹ ಸಚಿವರ ವಿರುದ್ಧ ನೇಹಾ ತಂದೆ ನಿರಂಜನ ಕೆಂಡಾಮಂಡಲ

ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ವಿರುದ್ಧ ಪ್ರಕರಣಗಳಿವೆ. ವಿಶ್ವನ ವಿರುದ್ಧ ಕಳ್ಳತನ ಸೇರಿದಂತೆ ಹಲವು ಕೇಸ್ ದಾಖಲಾಗಿವೆ. ಎಲ್ಲಾ ಆಯಾಮದಲ್ಲಿ‌ ತನಿಖೆ ಮಾಡ್ತೇವೆ. ಅಂಜಲಿ ಕುಟುಂಬ ಬೆಂಡಿಗೇರಿ‌ ಠಾಣೆಗೆ ಬಂದಿರುವುದು ನಿಜ. ಈ ಕುರಿತು ಪೊಲೀಸ್​ ಠಾಣೆಯ ಸಿಸಿಕ್ಯಾಮರಾ ದೃಶ್ಯಗಳಿವೆ. ಆದರೆ ಯಾವ ಕಾರಣಕ್ಕೆ ಬಂದಿದ್ದಾರೆ ಅನ್ನೋದು ಸ್ಪಷ್ಟತೆ ಇಲ್ಲ. ಆದ್ರೆ ಸಿಬ್ಬಂದಿ ಬೇರೆ ಪ್ರಕರಣಕ್ಕೆ ಬಂದಿದ್ದರು ಅಂತಾ ಹೇಳ್ತಿದ್ದಾರೆ. ಈ ಬಗ್ಗೆಯೂ ತನಿಖೆ ಆರಂಭಿಸಿದ್ದೇವೆ. ಬೆಂಡಿಗೇರಿ ಠಾಣೆ ಸಿಬ್ಬಂದಿ ಲೋಪದೋಷವಿದ್ರೆ ಕ್ರಮ ಕೈಗೊಳ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅವತ್ತು ಬೆಂಡಿಗೇರಿ ಪೊಲೀಸ್ರು ಕರೆದು ವಿಚಾರಣೆ ಮಾಡಿದ್ರೆ ಅಂಜಲಿ ಹತ್ಯೆಯಾಗ್ತಿರಲಿಲ್ಲ: ಮಹೇಶ್ ಟೆಂಗಿನಕಾಯಿ

ವಿವಿಧ ಕಡೆ ಪೊಲೀಸ್ ಇಲಾಖೆಯಿಂದ ಶಾಲಾ-ಕಾಲೇಜು, ಮಹಿಳೆಯರು ಸೇರುವ ಸ್ಥಳಗಳಲ್ಲಿ, ಕಾರ್ಯ ಸ್ಥಳಗಳಲ್ಲಿ ಪೊಲೀಸರಿಂದ ಜಾಗೃತಿ ಮೂಡಿಸಲಾಗ್ತಿದೆ. ಹಲವಾರು ಮುಖ್ಯಸ್ಥರ ಜೊತೆಗೆ ಸಭೆ ನಡೆಸಲಾಗುತ್ತದೆ. ಮಕ್ಕಳ ಪಾಲಕರ ಜೊತೆಗೂ ಚರ್ಚಿಸಿ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿ ಮಹಿಳೆಯರ‌ ಸುರಕ್ಷತೆಗೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಅಂಜಲಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು

ಅಂಜಲಿ ಕುಟುಂಬಕ್ಕೆ ನ್ಯಾಯ ಕೊಡಿಸಿ ಎಂದು ಪೊಲೀಸ್​ ಕಮಿಷನರ್ ರೇಣುಕಾ ಸುಕುಮಾರ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿಗೂ ಸ್ಥಳೀಯರಿಂದ ಮನವಿ ಮಾಡಲಾಗಿದೆ. ಅಂಜಲಿ ಹತ್ಯೆ ಮಾಡಿದವನನ್ನು ಎನ್​ಕೌಂಟರ್ ಮಾಡಬೇಕು. ಅಂಜಲಿ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು. ಅಂಜಲಿ ಸಹೋದರಿಗೆ ಸರ್ಕಾರಿ ಕೆಲಸ ನೀಡಬೇಕೆಂದು ಮನವಿ ಮಾಡಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us