‘ಸುವರ್ಣಸೌಧವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ’ ಎಂದು ಸಿಎಂಗೆ ಪತ್ರ ಬರೆದ ಶಾಸಕಿ ಅಂಜಲಿ ನಿಂಬಾಳ್ಕರ್

|

Updated on: May 07, 2021 | 9:33 AM

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. ಬೆಡ್ ಸಿಗದೆ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ. ಹೀಗಾಗಿ ಸುವರ್ಣಸೌಧವನ್ನ ಕೊವಿಡ್ ಕೇರ್ ಸೆಂಟರ್ ಮಾಡಿ ಎಂದು ಅಂಜಲಿ ನಿಂಬಾಳ್ಕರ್ ಸಿಎಂಗೆ ಪತ್ರ ಬರೆದಿದ್ದಾರೆ.

‘ಸುವರ್ಣಸೌಧವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ’ ಎಂದು ಸಿಎಂಗೆ ಪತ್ರ ಬರೆದ ಶಾಸಕಿ ಅಂಜಲಿ ನಿಂಬಾಳ್ಕರ್
ಶಾಸಕಿ ಅಂಜಲಿ ನಿಂಬಾಳ್ಕರ್
Follow us on

ಬೆಳಗಾವಿ: ‘ಸುವರ್ಣಸೌಧವನ್ನು ಕೊವಿಡ್ ಕೇರ್ ಸೆಂಟರ್ ಮಾಡಿ’ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪರಿಗೆ ಬೆಳಗಾವಿ ಜಿಲ್ಲೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. ಬೆಡ್ ಸಿಗದೆ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ. ಹೀಗಾಗಿ ಸುವರ್ಣಸೌಧವನ್ನ ಕೊವಿಡ್ ಕೇರ್ ಸೆಂಟರ್ ಮಾಡಿ ಎಂದು ಅಂಜಲಿ ನಿಂಬಾಳ್ಕರ್ ಪತ್ರ ಬರೆದಿದ್ದಾರೆ.

ಬೆಳಗಾವಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ. ನಿತ್ಯ ಸಾವಿರಾರು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಬೆಡ್ಗಳು ಸಿಗದೇ ಸಾಕಷ್ಟು ಜನ ಮೃತ ಪಡುತ್ತಿದ್ದಾರೆ. ಕಳೆದ 2 ವರ್ಷದಿಂದ ಅಧಿವೇಶನ ನಡೆಯದಿದ್ರೂ ನಿರ್ವಹಣೆಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದೀರಿ. ಹೀಗಾಗಿ ಇಂತಹ ಸಂದರ್ಭದಲ್ಲಿ ಸುವರ್ಣಸೌಧ ಬಳಸಿಕೊಳ್ಳಿ. ಕೂಡಲೇ ಸುವರ್ಣ ಸೌಧದಲ್ಲಿ ವೈದ್ಯಕೀಯ ಸಲಕರಣೆಗಳನ್ನ ಅಳವಡಿಸಿ. ವೈದ್ಯಕೀಯ ಸಿಬ್ಬಂದಿ ನಿಯೋಜಿಸಿ ಕೊವಿಡ್ ಕೇರ್ ಸೆಂಟರ್ ಮಾಡಿ. ಸುವರ್ಣಸೌಧವನ್ನು ಕೊವಿಡ್ ಕೇರ್ ಸೆಂಟರ್ ಮಾಡಿದರೆ ಸಾವಿರಾರು ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ. ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಯ ಜನರಿಗೆ ಅನುಕೂಲ ಆಗುತ್ತೆ. ಹೀಗಾಗಿ ಕೂಡಲೇ ಕೊವಿಡ್ ಕೇರ್ ಸೆಂಟರ್ ಮಾಡಿ ಎಂದು ಅಂಜಲಿ ನಿಂಬಾಳ್ಕರ್ ಸಿಎಂಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕೊವಿಡ್ ನಿರ್ವಹಣೆಯ ಕಾರ್ಯವೈಖರಿ, ಬೆಡ್ ವ್ಯವಸ್ಥೆ ಮಾಡಲು ಆಗದ ಸರ್ಕಾರಕ್ಕೆ ಪತ್ರದ ಮೂಲಕ ವ್ಯಂಗ್ಯ ಮಾಡಿದ್ದಾರೆ. ಜೊತೆಗೆ ಅಧಿವೇಶನ ಮಾಡದೇ ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರಕ್ಕೆ ತಿರುಗೇಟು ನೀಡಿ ಸಿಎಂಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದಾಗಿ ಎಲ್ಲಿ ನೋಡಿದ್ರೂ ಡೆಡ್​ ಬಾಡಿ ಕಾಣ್ತಿವೆ, ಇದೇನಾ ಅಚ್ಛೆ ದಿನ್‌ ಮೋದಿಜಿ..? ಶಾಸಕ ಜಮೀರ್‌ ಅಹ್ಮದ್‌ ಖಾನ್‌