AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ತು ಬಿಗ್​ ಟ್ವಿಸ್ಟ್​

ಜ. 31 ರಂದು ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತದಲ್ಲಿ ರೇಖಾ, ಮೇಘನಾ ಎಂಬ ಇಬ್ಬರು ಯುವತಿಯರು ಮರಣ ಹೊಂದಿದ್ದರು. ಪ್ರಕರಣದಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್​​ ಒಂದು ಸಿಕ್ಕಿದೆ.

ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತ; ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕ್ತು ಬಿಗ್​ ಟ್ವಿಸ್ಟ್​
ಮೇಘನಾ, ಮುಲ್ಲಾ ಮತ್ತು ರೇಖಾ
shruti hegde
| Edited By: ಸಾಧು ಶ್ರೀನಾಥ್​|

Updated on: Feb 26, 2021 | 4:43 PM

Share

ಧಾರವಾಡ: ಜನವರಿ 31 ರಂದು ಅಂಕೋಲಾ ತಾಲೂಕಿನ ಮಾಸ್ತಿಕಟ್ಟಿ‌ ಬಳಿ ನಡೆದಿದ್ದ ಅಪಘಾತದಲ್ಲಿ ರೇಖಾ, ಮೇಘನಾ ಎಂಬ ಇಬ್ಬರು ಯುವತಿಯರು ಮರಣ ಹೊಂದಿದ್ದರು. ಯುವತಿಯರು, ಬಾಗಲಕೋಟೆ ಕೃಷಿ ವಿಶ್ವವಿದ್ಯಾಲಯಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ, ಕೃಷಿ ವಿಶ್ವವಿದ್ಯಾಲಯದ ವೈಸ್​ ಛಾನ್ಸಲರ್​ ಆಪ್ತ ಕಾರ್ಯದರ್ಶಿ ಮುಲ್ಲಾ ಜೊತೆ ಗೋವಾಗೆ ತೆರಳಿದ್ದರು. ಮನೆಗೆ ವಾಪಸ್​ ಬರುವಾಗ ಅಪಘಾತ ಸಂಭವಿಸಿ ಇಬ್ಬರೂ ಯುವತಿಯರು ಮರಣ ಹೊಂದಿದ್ದಾರೆ. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಒಂದು ಸಿಕ್ಕಿದೆ. 

ಕೃಷಿ ವಿಶ್ವವಿದ್ಯಾಲಯದ ವೈಸ್​ ಛಾನ್ಸಲರ್​​ ಆಪ್ತ ಕಾರ್ಯದರ್ಶಿ ಮುಲ್ಲಾ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ವಿಷಯ ಇದೀಗ ಬಹಿರಂಗವಾಗಿದೆ. ಮುಲ್ಲಾ ಕಿರುಕುಳ ನೀಡುತ್ತಿದ್ದ ವಿಷಯವನ್ನು ಮೇಘನಾ ತನ್ನ ಗೆಳೆತಿಯೊಂದಿಗೆ ಹಂಚಿಕೊಂಡಿದ್ದಳು. ಇದೀಗ ಈ ವಿಷಯ ಬಹಿರಂಗವಾಗಿದೆ. ಡಿಸೆಂಬರ್ ತಿಂಗಳೇ ನಿನ್ನ ಕೆಲಸ ಕೊನೆ ಎಂದು ಮುನ್ನ ಹೇಳುತ್ತಿರುತ್ತಾನೆ. ಇದರಿಂದ ನನಗೆ ಆತಂಕವಾಗುತ್ತಿದೆ ಎಂದು ಮೇಘನಾ ನೋವು ತೋಡಿಕೊಂಡಿದ್ದರು. ಆತಂಕವನ್ನೇ ವೈಯಕ್ತಿಕ ಲಾಭಕ್ಕೆ ಮುಲ್ಲಾ ಬಳಸಿಕೊಂಡಿದ್ದಾರಾ? ಎಂಬ ಶಂಕೆ ಇದೀಗ ಮೂಡಿದೆ.

ಪ್ರಕರಣದ ತನಿಖೆಗೆ ಜನಜಾಗೃತಿ ಸಂಘಟನೆ ಆಗ್ರಹಿಸಿದೆ. ಕೆಲಸ ಮುಂದುವರೆಸಲು ಯುವತಿಯರಿಗೆ ಕಿರುಕುಳ ನೀಡಲಾಗಿದೆ ಅನ್ನೋ ಆರೋಪ ಕೇಳಿಬರುತ್ತಿದೆ. ತನಿಖೆಗೆ ಜಯ ಕರ್ನಾಟಕ ಸಂಘಟನೆ ಕೂಡ ಆಗ್ರಹಿಸಿದ್ದು, ಯುವತಿ ಆಪ್ತರೊಡನೆ ನಡೆಸಿದ್ದ ವಾಟ್ಸಾಪ್ ಚಾಟ್ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಧಾರವಾಡ ಅಪಘಾತದ ಬಗ್ಗೆ ವರದಿ ನೀಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಮಿತಿ ಸೂಚನೆ

ಇದನ್ನೂ ಓದಿ: ಧಾರವಾಡ ಅಪಘಾತದಲ್ಲಿ ಮೃತದೇಹ ಅದಲುಬದಲು: ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯ ಶವ ಪತ್ತೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು