ಅನ್ನಭಾಗ್ಯ ಯೋಜನೆ: ಆಹಾರ ಇಲಾಖೆಗೆ 200 ಕೋಟಿ ಉಳಿತಾಯ ಮಾಡಿದ ‘5 ಕೆಜಿ ಅಕ್ಕಿ ಹಣ’

ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಹಣ ನೀಡಲಾಗುತ್ತಿದೆ. ಇದು ಪಡಿತರ ವಿತರಕರ ಕಮಿಷನ್, ಸಾರಿಗೆ ವೆಚ್ಚ ಉಳಿತಾಯಕ್ಕೆ ಸಹಕಾರಿಯಾಗಿದೆ. ಆಹಾರ ಇಲಾಖೆಗೆ ಪ್ರತಿ ತಿಂಗಳಿಗೆ ಬರೋಬ್ಬರಿ 200 ಕೋಟಿ ಉಳಿತಾಯವಾಗುತ್ತಿದೆ. ಈ ಪ್ಲಾನ್​ನಿಂದ ಲಾಭವಾಗಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕರು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆ: ಆಹಾರ ಇಲಾಖೆಗೆ 200 ಕೋಟಿ ಉಳಿತಾಯ ಮಾಡಿದ '5 ಕೆಜಿ ಅಕ್ಕಿ ಹಣ'
ಅನ್ನಭಾಗ್ಯ ಯೋಜನೆ: ಆಹಾರ ಇಲಾಖೆಗೆ 200 ಕೋಟಿ ಉಳಿತಾಯ ಮಾಡಿದ '5 ಕೆಜಿ ಅಕ್ಕಿ ಹಣ'
Follow us
TV9 Web
| Updated By: Rakesh Nayak Manchi

Updated on:Jan 05, 2024 | 2:23 PM

ಬೆಂಗಳೂರು, ಜ.5: ಅನ್ನಭಾಗ್ಯ ಯೋಜನೆಯಡಿ (Anna Bhagya) ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಹಣ ನೀಡುತ್ತಿರುವುದು ಆಹಾರ ಇಲಾಖೆಗೆ ಭರ್ಜರಿ ಲಾಭ ತಂದುಕೊಟ್ಟಿದೆ. ಡಿಬಿಟಿ ಮೂಲಕ ಪಡಿತರ ಫಲಾನುಭವಿಗೆ ನೇರ ಹಣ ವರ್ಗಾವಣೆ ಆಗುತ್ತಿರುವುದರಿಂದ ಪಡಿತರ ವಿತರಕರ ಕಮಿಷನ್, ಸಾರಿಗೆ ವೆಚ್ಚ ಉಳಿತಾಯವಾಗುತ್ತಿದೆ. ಇದರಿಂದಾಗಿ ಇಲಾಖೆಗೆ ಪ್ರತಿ ತಿಂಗಳು ಬರೋಬ್ಬರಿ 200 ಕೋಟಿ ರೂ. ಉಳಿತಾಯವಾಗುತ್ತಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕರು ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಇನ್ನೊಂದೆಡೆ, ಕೇಂದ್ರ ಸರ್ಕಾರವು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹೆಚ್ಚುವರಿ ಅಕ್ಕಿಯ ಬದಲು ರಾಜ್ಯ ಸರ್ಕಾರ ಹಣ ನೀಡುತ್ತಿದ್ದು, ಇದನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತಿದೆ.

ಇದನ್ನೂ ಓದಿ: ಯಾದಗಿರಿ: ಬಿಜೆಪಿ ಮುಖಂಡನ ಸೋದರನ ರೈಸ್ ಮಿಲ್​ನಲ್ಲಿ 700 ಕ್ವಿಂಟಾಲ್ ಅಕ್ಕಿ ಜಪ್ತಿ

ಈ ಪ್ಲಾನ್​ನಿಂದ ಲಾಭವಾಗಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಗ್ಯಾನೇಂದ್ರ ಕುಮಾರ್ ಹೇಳಿದ್ದಾರೆ. ಸದ್ಯ ಎಪಿಎಲ್ ಕಾರ್ಡ್​ದಾರರು ಪಡಿತರ ತೆಗೆದುಕೊಳ್ಳುವ ಪ್ರಮಾಣ ಕೂಡ ಕುಸಿತವಾಗಿದೆ. ಈಗ ಇರುವ ಬಿಪಿಎಲ್ ಕಾರ್ಡ್​ದಾರರಿಗೆ ಪಡಿತರ ತಲುಪುತ್ತಿದೆ ಎಂದರು.

ವರದಿ: ಶಾಂತ್​ಕುಮಾರ್ ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Fri, 5 January 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್