AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya Scheme: 24 ಜಿಲ್ಲೆಗಳ 78 ಲಕ್ಷ ಪಡಿತರ ಫಲಾನುಭವಿಗಳಿಗೆ 456 ಕೋಟಿ ರೂ. ಜಮಾ

ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳ ಬ್ಯಾಂಕ್​ ಖಾತೆಗಳಿಗೆ ಐದು ಕೇಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದ್ದು, ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ.

Anna Bhagya Scheme: 24 ಜಿಲ್ಲೆಗಳ 78 ಲಕ್ಷ ಪಡಿತರ ಫಲಾನುಭವಿಗಳಿಗೆ 456 ಕೋಟಿ ರೂ. ಜಮಾ
ಅನ್ನಭಾಗ್ಯ ಯೋಜನೆ
ವಿವೇಕ ಬಿರಾದಾರ
|

Updated on:Jul 24, 2023 | 7:27 AM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿಯ ಎರಡನೇ ಗ್ಯಾರೆಂಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕನಸಿನ ಕೂಸಾದ “ಅನ್ನಭಾಗ್ಯ”ದಡಿ (Anna Bhagya) ಬಿಪಿಎಲ್ (BPL) ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಐದು ಕೇಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದೆ. ಜು.10 ರಂದು ಕಾರ್ಯಕ್ರಮಕ್ಕೆ ಚಾಲನೆ ದೊರೆತ ನಂತರ ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ.

ಇನ್ನುಳಿದ ಏಳು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆಯಲ್ಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿದ ಮಾಹಿತಿ ಪ್ರಕಾರ ಒಂದು ಕಡತವು ಕೇವಲ 20,000 ನೇರ ಲಾಭ ವರ್ಗಾವಣೆಯನ್ನು ಪ್ರಕ್ರಿಯೆಗೊಳಿಸಬಹುದು. ಪ್ರತಿ ಜಿಲ್ಲೆಗೆ ಬಹು ಕಡತಗಳನ್ನು ರಚಿಸಬೇಕಾಗಿದೆ. ಇದು ಸಮಯ ತೆಗೆದುಕೊಳ್ಳುವುದರಿಂದ, ಪಾವತಿಗಳು ವಿಳಂಬವಾಗಿದೆ ಆದರೆ ಅವು ಎಂಟು ದಿನಗಳಲ್ಲಿ ಪೂರ್ಣಗೊಳ್ಳುತ್ತವೆ ಎಂದು ತಿಳಿಸಿದೆ.

ಚಾಮರಾಜನಗರ, ವಿಜಯಪುರ, ಹಾಸನ, ಚಿಕ್ಕಬಳ್ಳಾಪುರ, ಉಡುಪಿ, ವಿಜಯನಗರ, ಮತ್ತು ಶಿವಮೊಗ್ಗ ಜಿಲ್ಲೆಗಳ ಫಲಾನುಭವಿ ಖಾತೆಗಳಿಗೆ ಹಣ ಜಮೆಯಾಗಬೇಕಿದೆ. ಈ ಜಿಲ್ಲೆಗಳಲ್ಲಿ ಒಟ್ಟು 18.86 ಲಕ್ಷ ಫಲಾನುಭವಿಗಳಿದ್ದಾರೆ. ಸರ್ಕಾರವು ಪ್ರತಿ ಫಲಾನುಭವಿಗೆ ತಿಂಗಳಿಗೆ ಕೇಜಿಗೆ 34 ರೂ. ನಂತೆ ಐದು ಕೇಜಿಗೆ 170 ರೂ. ವರ್ಗಾಯಿಸುತ್ತದೆ. ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ ಈ ಹಣ ಜಮೆಯಾಗುತ್ತದೆ. ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ ನಂತರ ಸರ್ಕಾರ ಹಣ ಜಮೆಗೆ ನಿರ್ಧರಿಸಿದೆ.

ಇದನ್ನೂ ಓದಿ: Anna Bhagya scheme: ನಿಮ್ಮ ಖಾತೆಗೆ ಅನ್ನಭಾಗ್ಯದ ಹಣ ವರ್ಗಾವಣೆಯಾಗಿದೆಯೇ ಎಂದು ತಿಳಿಯುವುದು ಹೇಗೆ?

ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿದಾರರಿದ್ದರೂ ಪ್ರಸ್ತುತ 97,27,160 ಮಂದಿ ಈ ಯೋಜನೆಗೆ ಅರ್ಹರಾಗಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ, ಕಳೆದ ಮೂರು ತಿಂಗಳಿನಿಂದ ಯೋಜನೆಯ ಪ್ರಯೋಜನ ಪಡೆಯದ ಸುಮಾರು 8.7 ಲಕ್ಷ ಪಡಿತರ ಚೀಟಿದಾರರನ್ನು ಇದೀಗ ಯೋಜನೆಯಿಂದ ಹೊರಗಿಡಲಾಗಿದೆ. ಸುಮಾರು 21 ಲಕ್ಷ ಕಾರ್ಡ್ ಹೊಂದಿರುವವರು ಇನ್ನೂ ಅರ್ಹತೆ ಪಡೆದಿಲ್ಲ. ಅವರಲ್ಲಿ ಹೆಚ್ಚಿನವರು ತಮ್ಮ ಆಧಾರ್ ಅನ್ನು ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಿಲ್ಲ ಮತ್ತು ಅವರಲ್ಲಿ ಕೆಲವರು ಬ್ಯಾಂಕ್ ಖಾತೆಗಳನ್ನು ಹೊಂದಿಲ್ಲ ಎಂದು ತಿಳಿಸಿದರು.

ಬ್ಯಾಂಕ್ ಖಾತೆಗಳನ್ನು ಹೊಂದಿರದ ಅಥವಾ ಆಧಾರ್‌ನೊಂದಿಗೆ ಬ್ಯಾಂಕ್ ಖಾತೆಗಳನ್ನು ಲಿಂಕ್ ಮಾಡದ ಪಡಿತರ ಚೀಟಿದಾರರ ಹೆಸರನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಬ್ಬಂದಿ ತಿಳಿಸುತ್ತಾರೆ. ಅವರು ಆಧಾರ್ ಸೀಡಿಂಗ್ ಅಥವಾ ಅಂಚೆ ಕಚೇರಿಗಳಲ್ಲಿ ಖಾತೆಗಳನ್ನು ತೆರೆಯಬಹುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Mon, 24 July 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು