AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya Scheme: ಅನ್ನಭಾಗ್ಯಕ್ಕೆ ದಶಕದ ಸಂಭ್ರಮ, ಇಂದಿನಿಂದಲೇ ಫಲಾನುಭವಿಗಳ ಖಾತೆಗೆ ಹಣ ಜಮೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯ ಯೋಜನೆಗೆ ದಶಕದ ಸಂಭ್ರಮ. ಈ ಹಿನ್ನೆಲೆ 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ 170 ರೂ. ಹಣ ಜಮೆ ಮಾಡುವ ಕಾರ್ಯಕ್ರಮಕ್ಕೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

Anna Bhagya Scheme: ಅನ್ನಭಾಗ್ಯಕ್ಕೆ ದಶಕದ ಸಂಭ್ರಮ, ಇಂದಿನಿಂದಲೇ ಫಲಾನುಭವಿಗಳ ಖಾತೆಗೆ ಹಣ ಜಮೆ
ಅನ್ನಭಾಗ್ಯ ಯೋಜನೆ
ಪ್ರಸನ್ನ ಗಾಂವ್ಕರ್​
| Edited By: |

Updated on: Jul 10, 2023 | 9:55 AM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯ (Anna Bhagya Scheme) ಯೋಜನೆಗೆ ದಶಕದ ಸಂಭ್ರಮ. ಈ ಹಿನ್ನೆಲೆ 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ 170 ರೂ. ಹಣ ಜಮೆ ಮಾಡುವ ಕಾರ್ಯಕ್ರಮಕ್ಕೆ ಇಂದು (ಜು.10) ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿ ಕೆಜಿಗೆ 34 ರೂ.ನಂತೆ 170 ರೂ. ವರ್ಗಾವಣೆ ಮಾಡಲಾಗುತ್ತದೆ.

ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳ ಬಳಿ ಬಿಪಿಎಲ್ ಕಾರ್ಡ್​ಗಳಿವೆ. ಸುಮಾರು 4.5 ಕೋಟಿ ಜನರು ಉಚಿತ ಅಕ್ಕಿಯ ಫಲಾನುಭವಿಗಳಿದ್ದಾರೆ. ಇವರಿಗೆ ಕೆಜಿಗೆ 34 ರೂ. ಹಾಕಲು ಸರ್ಕಾರಕ್ಕೆ 733 ಕೋಟಿ ರೂಪಾಯಿ ಹಣ ಬೇಕು. 1.22 ಕೋಟಿ ಜನರು ಆಧಾರ್ ಹಾಗೂ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿದ್ದಾರೆ. ಇನ್ನು 6 ಲಕ್ಷದಷ್ಟು ಅಕೌಂಟ್​​ಗಳು ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿಲ್ಲ.

‘ಅನ್ನಭಾಗ್ಯ’ಕ್ಕೆ ದಶಕದ ಸಂಭ್ರಮ

2013ರ ಮೇ 13 ರಂದು ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರ ಸ್ವೀಕಾರದ ನಂತರ ಸಿದ್ದರಾಮಯ್ಯವರು ಐತಿಹಾಸಿಕ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದರು. ಜುಲೈ ತಿಂಗಳಿನಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದರು. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ವ್ಯಕ್ತಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಇದನ್ನೂ ಓದಿ: ಬಡವರ ಪಾಲಾಗಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳರ ಪಾಲು, ಗದಗದಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

ಅನ್ನಭಾಗ್ಯ ಯೋಜನೆ ಆರಂಭವಾದಾಗ 1.08 ಕೋಟಿ ಕುಟುಂಬಗಳು ಯೋಜನೆಯ ಲಾಭ ಪಡೆದಿದ್ದವು. 2013ರಲ್ಲಿ ಪ್ರತಿ ತಿಂಗಳು 2.93 ಲಕ್ಷ ಟನ್ ಆಹಾರ ಧಾನ್ಯ ಬಿಡುಗಡೆಯಾಗುತ್ತಿತ್ತು. 2013ರಲ್ಲಿ ಅನ್ನಭಾಗ್ಯ ಯೋಜನೆಗಾಗಿ 4,300 ಕೋಟಿ ರೂಪಾಯಿಗಳನ್ನ ಮೀಸಲಿರಿಸಲಾಗಿತ್ತು. 2013-2014ರ ಸಾಲಿನಲ್ಲಿ ಅನ್ನಭಾಗ್ಯಕ್ಕಾಗಿ 3,050 ಕೋಟಿ ವೆಚ್ಚವಾಗಿತ್ತು.

ಅನ್ನಭಾಗ್ಯ ಯೋಜನೆ ಪ್ರಾರಂಭಿಸಿ ೧೦ ವರ್ಷಗಳಾದ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್​​ನಲ್ಲಿ ಲೋಡಿಂಗ್ ಕಾರ್ಮಿಕರ ದಶಮಾನೋತ್ಸವ ಹಾಗೂ ಶ್ರಮಿಕರ ಹಕ್ಕೋತ್ತಾಯ ಸಮಾವೇಶ ಮಧ್ಯಾಹ್ನ 1.30 ಕ್ಕೆ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಭಾಗಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌