AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya: ಹೆಚ್ಚುವರಿ 5ಕೆಜಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ; ಇದರಿಂದ ಸರ್ಕಾರಕ್ಕೆ ಉಳಿಯುತ್ತೆ ಕೋಟಿ ಕೋಟಿ ರೂ

ಉಚಿತವಾಗಿ ಹೆಚ್ಚುವರಿ 5 ಕೆಜಿ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಾಕಷ್ಟು ಹಗ್ಗಜಗ್ಗಾಟ ನಡೆಯಿತು. ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂ. ನಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ನಿರ್ಧರಿಸಿದ್ದು, ಇದರಿಂದ ಸರ್ಕಾರಕ್ಕೆ ಕೋಟಿ ಕೋಟಿ ರೂ. ಹಣ ಉಳಿತಾಯವಾಗಲಿಗದೆ. ಹೇಗೆ? ಇಲ್ಲಿದೆ ವಿವರ

Anna Bhagya: ಹೆಚ್ಚುವರಿ 5ಕೆಜಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ; ಇದರಿಂದ ಸರ್ಕಾರಕ್ಕೆ ಉಳಿಯುತ್ತೆ ಕೋಟಿ ಕೋಟಿ ರೂ
ಅನ್ನಭಾಗ್ಯ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Jul 02, 2023 | 11:53 AM

Share

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ (Anna Bhagya Scheme) ಉಚಿತವಾಗಿ ಹೆಚ್ಚುವರಿ 5 ಕೆಜಿ ಅಕ್ಕಿ (Rice) ನೀಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಾಕಷ್ಟು ಹಗ್ಗಜಗ್ಗಾಟ ನಡೆಯಿತು. ಕೇಂದ್ರ ಸರ್ಕಾರ (Union Government) ಅಕ್ಕಿ ನೀಡಲು ನಿರಾಕರಿಸಿದೆ ಎಂದು ಕಾಂಗ್ರೆಸ್​​ (Congress) ಆರೋಪಿಸಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂ. ನಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ಸಚಿವ ಸಂಪುಟ ನಿರ್ಧರಿಸಿತ್ತು. ಇದು ನಿನ್ನೆ (ಜುಲೈ.01) ರಿಂದ ಜಾರಿಗೆಯಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಉಳಿತಾಯವಾಗುತ್ತದೆ.

ಹೌದು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಿಂದ ರಾಜ್ಯ ಸರ್ಕಾರಕ್ಕೆ ತಿಂಗಳಿಗೆ 123 ಕೋಟಿ ರೂ. ಹಣ ಉಳಿತಾಯವಾಗಲಿದೆ. ರಾಜ್ಯದಲ್ಲಿ 1.14 ಕೋಟಿ ಪಡಿತರ ಚೀಟಿಗಳಿದ್ದು, 4.30 ಕೋಟಿ ಫಲಾನುಭವಿಗಳಿದ್ದಾರೆ. ತಲಾ 5 ಕೆಜಿಯಂತೆ ಅಕ್ಕಿ ವಿತರಣೆ ಮಾಡಲು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. ಇದರ ಸಾಗಣೆ ವೆಚ್ಚ, ಕಮೀಷನ್ ಎಲ್ಲ ಲೆಕ್ಕ ಹಾಕಿದರೆ ಮಾಸಿಕ 123 ಕೋಟಿ ರೂ. ತಗಲುತ್ತದೆ. ಅಂದರೇ ಹೆಚ್ಚುವರಿ 5 ಕೆಜಿ ಅಕ್ಕಿ ಫಲಾನುಭವಿಗಳ ಕೈಗೆ ತಲುಪಿಸಲು ಸರ್ಕಾರ 856 ಕೋಟಿ ರೂ. ವ್ಯಯ ಮಾಡಬೇಕಿತ್ತು.

ಇದನ್ನೂ ಓದಿ: ಇಂದಿನಿಂದ ಅನ್ನಭಾಗ್ಯ ಜಾರಿ, ಅಕ್ಕಿ ಬದಲು ಖಾತೆಗೆ ಬೀಳಲಿದೆ ಹಣ

ಪ್ರತಿ ಕೆಜಿಗೆ ಸಾಗಣೆ ವೆಚ್ಚ 1.10 ರೂ. ಸಗಟು ಕಮೀಷನ್ 35 ಪೈಸೆ ಹಾಗೂ ಚಿಲ್ಲರೆ ಕಮೀಷನ್ 1.84 ರೂ. ನಂತೆ 4.30 ಕೋಟಿ ಫಲಾನುಭವಿಗಳಿಗೆ ಅಕ್ಕಿ ವಿತರಿಸಲು 856 ಕೋಟಿ ರೂ. ವ್ಯಯವಾಗುತ್ತಿತ್ತು. ಆದರೆ ಇದೀಗ ಹಣ ವರ್ಗಾವಣೆಯಿಂದ ಸಾಗಣೆ ವೆಚ್ಚ, ಸಗಟು ಮತ್ತು ಚಿಲ್ಲರೆ ಕಮೀಷನ್ ಹಣ ಉಳಿತಾಯವಾಗಲಿದೆ.

ಇನ್ನು ಪ್ರತಿ ವ್ಯಕ್ತಿಗೆ 170 ರೂ. ಹಣ ನೀಡುವುದರಿಂದ ಮಾಸಿಕ 733 ಕೋಟಿ ರೂ. ಸರ್ಕಾರ ಎತ್ತಿಡಬೇಕಾಗುತ್ತದೆ. ಇದರಿಂದ ಸರ್ಕಾರಕ್ಕೆ ಪ್ರತಿ ಕೆಜಿಗೆ 2.69 ಪೈಸೆ ಉಳಿತಾಯವಾಗುತ್ತೆ. ಅಂದರೇ ರಾಜ್ಯ ಸರ್ಕಾರಕ್ಕೆ ತಿಂಗಳಿಗೆ 123 ಕೋಟಿ ರೂ. ಹಣ ಉಳಿತಾಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ