
ಬೆಂಗಳೂರು, ಜುಲೈ 07: ನಾಲ್ಕು ತಿಂಗಳಿಂದ ರಾಜ್ಯ ಸರ್ಕಾರ ಪಡಿತರ ಆಹಾರ ಧಾನ್ಯ ಸಾಗಣಿಕೆ ವೆಚ್ಚ ನೀಡಿಲ್ಲ. 250 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಲಾರಿ ಮಾಲೀಕರು, ಚಾಲಕರು ಮುಷ್ಕರಕ್ಕೆ (strike) ಕರೆ ನೀಡಿದ್ದಾರೆ. ಆ ಮೂಲಕ ಈ ತಿಂಗಳ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ವಿ.ಆರ್.ಷಣ್ಮುಗಪ್ಪ (VR Shanmugappa), ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಟಿವಿ9ಗೆ ಮಾಹಿತಿ ನೀಡಿರುವ ವಿ.ಆರ್.ಷಣ್ಮುಗಪ್ಪ, ಯಾವುದೇ ಭರವಸೆ ಈಡೇರಿಸದ ಹಿನ್ನೆಲೆ ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್ ಎಂದಿದ್ದಾರೆ. ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಹೇಳಿದ್ದಾರೆ.
Karnataka truckers have halted rice transport under state govt’s Anna Bhagya scheme, citing Rs 250 crore unpaid dues from Feb-June. “Drivers are pledging jewellery for fuel; finance firms are seizing trucks” said Shanmugappa. 3,500–4,000 drivers now face crisis. pic.twitter.com/2jCwzCxGOQ
— ChristinMathewPhilip (@ChristinMP_) July 7, 2025
ಇದನ್ನೂ ಓದಿ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ
5 ತಿಂಗಳಿನಿಂದ 260 ಕೋಟಿ ರೂ. ಬಿಡುಗಡೆ ಆಗಬೇಕು. ಜೂ.19ರಂದು 100 ಕೋಟಿ ರೂ. ಹಾಕುವುದಾಗಿ ಹೇಳಿದ್ದರು. ಆದರೆ ಈವರೆಗೂ 1 ರೂ. ಹಣ ಬಂದಿಲ್ಲ ನಮ್ಮ ಖಾತೆಗೆ. ಆಹಾರ ಸಚಿವರು, ಅಧಿಕಾರಿಗಳು ಮಾತುಕತೆಗೆ ಕರೆದಿಲ್ಲ, ಹಾಗಾಗಿ ಇಂದಿನಿಂದ ಮುಷ್ಕರ ಮಾಡಲು ಮುಂದಾಗಿದ್ದೇವೆ. ಹಣ ಬಂದ ಮೇಲೆ ನಾವು ಅಕ್ಕಿ ಸರಬರಾಜು ಮಾಡಲು ಮುಂದಾಗುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: ಬಿಜೆಪಿ ಎಮ್ಮೆಲ್ಸಿ ಲಖನ್ ಜಾರಕಿಹೊಳಿಯ ಗೋಕಾಕ್ ಮನೇಲಿ ಸಭೆ ಸೇರಿದ ಬಿಜೆಪಿ ಭಿನ್ನರು
ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರ ಸಂಘ ಬಾಕಿ ಹಣ ಪಾವತಿ ಮಾಡಲು ಸರ್ಕಾರಕ್ಕೆ 15 ದಿನ ಗಡುವು ನೀಡಿತ್ತು. ಆದರೆ ಇದಕ್ಕೆ ಕ್ಯಾರೆ ಎಂದಿಲ್ಲ. ಇದರಿಂದ ಸಿಡಿದ 3-4 ಲಾರಿ ಮಾಲೀಕರು ಲಾರಿಗಳ ಸಂಚಾರವನ್ನೇ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ನೂರಾರು ಲಾರಿಗಳು ಬೆಂಗಳೂರಿನ ಯಶವಂತಪುರ ಡಿಪೋದಲ್ಲೇ ನಿಂತಿವೆ. ದಾವಣಗೆರೆಯಲ್ಲೂ ಲಾರಿ ಮಾಲೀಕರಿಗೆ 10 ಕೋಟಿಯಷ್ಟು ಹಣ ಬಾಕಿ ಇದ್ದು, ಅಲ್ಲಿಯೂ ಮುಷ್ಕರ ಮಾಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:08 pm, Mon, 7 July 25