AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್: ಬಾಕಿ ಹಣ ಬಿಡುಗಡೆ ಘೋಷಣೆ ಬೆನ್ನಲ್ಲೇ ಕ್ರಮ

ಅನ್ನಭಾಗ್ಯ ಅಕ್ಕಿ ಪೂರೈಕೆ ಮಾಡುವ ಲಾರಿ ಮಾಲೀಕರಿಗೆ ರಾಜ್ಯ ಸರ್ಕಾರ 260 ಕೋಟಿ ರೂ.ನಷ್ಟು ಹಣ ಬಾಕಿ ಇರಿಸಿಕೊಂಡಿತ್ತು. ಆ ಹಣಕ್ಕಾಗಿ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರಕ್ಕೆ ಆರಂಭಿಸಿದ್ದರು. ಕೊನೆಗೂ ಮಂಗಳವಾರ ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಲು ಅನುಮೋದನೆ ನೀಡಿದ್ದು, ಲಾರಿ ಮುಷ್ಕರ ಹಿಂಪಡೆಯಲಾಗಿದೆ.

ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್: ಬಾಕಿ ಹಣ ಬಿಡುಗಡೆ ಘೋಷಣೆ ಬೆನ್ನಲ್ಲೇ ಕ್ರಮ
ಅನ್ನಭಾಗ್ಯ ಅಕ್ಕಿ ಸಾಗಾಟ ಲಾರಿಗಳ ಮುಷ್ಕರ ವಾಪಸ್
Kiran Surya
| Edited By: |

Updated on: Jul 09, 2025 | 7:31 AM

Share

ಬೆಂಗಳೂರು, ಜುಲೈ 9: ಕರ್ನಾಟಕದಾದ್ಯಂತ ಅನ್ನಭಾಗ್ಯ (Anna Bhagyaಅಕ್ಕಿ ಪೂರೈಕೆ ಮಾಡಿದ ಲಾರಿ ಮಾಲೀಕರಿಗೆ ಕಳೆದ ಐದು ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ.ನಷ್ಟು ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘ ಸೋಮವಾರದಿಂದ ಮುಷ್ಕರ ಆರಂಭಿಸಿತ್ತು. ಈ ಬಗ್ಗೆ ‘ಟಿವಿ9’ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಎರಡು ದಿನಗಳಲ್ಲಿ ಹಣ ಸಂದಾಯ ಮಾಡುತ್ತೇವೆಂದು ಭರವಸೆ ನೀಡಿದ್ದರು. ಆದರೆ ಇದರಿಂದ ತೃಪ್ತರಾಗದ ಲಾರಿ ಮಾಲೀಕರು ನಮ್ಮ ಬ್ಯಾಂಕ್ ಅಕೌಂಟ್​​ಗೆ ಹಣ ಸಂದಾಯ ಆಗುವವರೆಗೂ ಮುಷ್ಕರ ವಾಪಸ್ಸು ಪಡೆಯಲ್ಲ ಎಂದು ಪಟ್ಟು ಹಿಡಿದು ಮುಷ್ಕರ ಮುಂದುವರಿಸಿದ್ದರು.

ಲಾರಿ ಮುಷ್ಕರದ ಕಾರಣ ಮಂಗಳವಾರ ಸಹ ಗೋದಾಮುಗಳಿಂದ ಸೊಸೈಟಿಗೆ ಹೋಗಬೇಕಿದ್ದ ಅಕ್ಕಿ ಮೂಟೆಗಳು ಪೂರೈಕೆ ಆಗಿರಲಿಲ್ಲ. ಇದರಿಂದ ಬಡವರು ದೊಡ್ಡ ಮಟ್ಟದಲ್ಲಿ ಸಮಸ್ಯೆ ಎದುರಿಸಲಿದ್ದಾರೆ ಎಂದು ತಿಳಿದುಕೊಂಡ ಸರ್ಕಾರ ಕೂಡಲೇ ಲಾರಿ ಮಾಲೀಕರಿಗೆ ಬಿಡುಗಡೆ ಮಾಡಬೇಕಿದ್ದ 260 ಕೋಟಿ ರೂ. ಹಣದಲ್ಲಿ 244.22 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿದೆ. ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಷಣ್ಮುಗಪ್ಪ, ಮುಷ್ಕರ ಕೈಬಿಟ್ಟು ಅಕ್ಕಿ ಲೋಡ್​​ಗಳನ್ನು ಸೊಸೈಟಗಳಿಗೆ ಪೂರೈಕೆ ಮಾಡಲು ಲಾರಿ ಮಾಲೀಕರಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್: ಸಾಗಾಣಿಕೆ ವೆಚ್ಚ 250 ಕೋಟಿ ರೂ. ಬಾಕಿ ಕೊಡದ ಸರ್ಕಾರ

ಇದನ್ನೂ ಓದಿ
Image
ಬಿಜೆಪಿಯಲ್ಲಿ ಮತ್ತೆ ಸಕ್ರಿಯವಾದ ಭಿನ್ನರ ಬಣ: ಶಕ್ತಿ ಪ್ರದರ್ಶನ, ರಣತಂತ್ರ
Image
ರೆಡಿಮೇಡ್ ಬಟ್ಟೆಗಳ ಪ್ಯಾಕ್​ನಲ್ಲಿ ಡ್ರಗ್ಸ್ ಸೇಲ್! ನೈಜೀರಿಯಾ ಪ್ರಜೆಗಳು ವಶ
Image
250 ಕೋಟಿ ರೂ. ಬಾಕಿ ಕೊಡದ ಸರ್ಕಾರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಟ ಬಂದ್
Image
ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ಜನರಿಂದಲೂ ವಿರೋಧ!

ಒಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ನಾಲ್ಕೈದು ತಿಂಗಳಿನಿಂದ ಅನ್ನಭಾಗ್ಯ ಅಕ್ಕಿ ಲೋಡ್, ಅನ್ಲೋಡ್ ಮಾಡಿದ್ದ ಲಾರಿ ಮಾಲೀಕರಿಗೆ ಕೊನೆಗೂ ಹಣ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದು, ಲಾರಿ ಮಾಲೀಕರ ಅಕೌಂಟ್​​ಗೆ ಹಣ ಯಾವಾಗ ಜಮೆ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ