ಹೊರನಾಡು ಅನ್ನಪೂರ್ಣೆಯ ಬ್ರಹ್ಮರಥೋತ್ಸವ: ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ ಭಕ್ತರು

| Updated By: ಸಾಧು ಶ್ರೀನಾಥ್​

Updated on: Mar 17, 2021 | 1:01 PM

ಕ್ಷೇತ್ರದಲ್ಲಿ ಪ್ರತಿ ವರ್ಷ ಪಾಲ್ಗುಣ ಶುಕ್ಲ ಮಾಸದ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದ್ದು, ಈ ಬಾರಿ ಅದ್ದೂರಿಯಾಗಿ ದೇವಿಯ ರಥೋತ್ಸವ ಜರಗಿತು. ಒಟ್ಟು ಐದು ದಿನಗಳ ಕಾಲ ನಡೆಯುವ ಈ ವಾರ್ಷಿಕ ಆಚರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಹೊರನಾಡು ಅನ್ನಪೂರ್ಣೆಯ ಬ್ರಹ್ಮರಥೋತ್ಸವ: ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ ಭಕ್ತರು
ಅನ್ನಪೂರ್ಣೆಯನ್ನು ದೇಗುಲದಿಂದ ಹೊರ ತರುತ್ತಿರುವ ದೃಶ್ಯ
Follow us on

ಚಿಕ್ಕಮಗಳೂರು: ಕಾಫಿನಾಡ ಆದಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯ ಬ್ರಹ್ಮರಥೋತ್ಸವ ನಿನ್ನೆ (ಫೆಬ್ರವರಿ 16) ಸಂಭ್ರಮ ಸಡಗರದಿಂದ ನಡೆಯಿತು. ರಥೋತ್ಸವದ ಅಂಗವಾಗಿ ಆದಿಶಕ್ತಿ ಅನ್ನಪೂರ್ಣೆಗೆ ವಿಶೇಷ ಅಲಂಕಾರ ಹಾಗೂ ಪೂಜೆಯನ್ನ ನೇರವೇರಿಸಲಾಯಿತು. ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹರಕೆ ಸಲ್ಲಿಸುವ ಮೂಲಕ ರಥೋತ್ಸವದ ಮೆರಗನ್ನ ಹೆಚ್ಚಿಸಿದರು. ಭಕ್ತರು ತೇರಿನ ಚಕ್ರಕ್ಕೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿ, ಅನ್ನಪೂರ್ಣೇಶ್ವರಿಯ ಧಾರ್ಮಿಕ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ಅದ್ದೂರಿಯಾಗಿ ನಡೆದ ದೇವಿಯ ರಥೋತ್ಸವ
ಕ್ಷೇತ್ರದಲ್ಲಿ ಪ್ರತಿ ವರ್ಷ ಪಾಲ್ಗುಣ ಶುಕ್ಲ ಮಾಸದ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದ್ದು, ಈ ಬಾರಿ ಅದ್ದೂರಿಯಾಗಿ ದೇವಿಯ ರಥೋತ್ಸವ ಜರಗಿತು. ಒಟ್ಟು ಐದು ದಿನಗಳ ಕಾಲ ನಡೆಯುವ ಈ ವಾರ್ಷಿಕ ಆಚರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಥೋತ್ಸವದ ಪ್ರಯುಕ್ತ ಅನ್ನಪೂರ್ಣೆಶ್ವರಿಗೆ ವಿಶೇಷ ಅಲಂಕಾರವನ್ನ ಮಾಡಲಾಗಿದ್ದು, ವಿಶೇಷ ಪೂಜೆಯನ್ನ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಪ್ರಾರ್ಥನೆ ಮಾಡಿ ರಥವನ್ನ ಎಳೆದು ಭಕ್ತಿ ಸಮರ್ಪಿಸಿದರು.

ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಅನ್ನಪೂರ್ಣೆಶ್ವರಿಗೆ ವಿಶೇಷ ಪೂಜೆಯನ್ನ ಸಲ್ಲಿಸಿ ಛತ್ರಿ ಚಾಮರಗಳ ಮೆರವಣಿಗೆಯಲ್ಲಿ ದೇವಿಯ ಮೂರ್ತಿಯನ್ನ ತಂದು ರಥದಲ್ಲಿ ಕೂರಿಸಲಾಯಿತು. ನಂತರ ನೆರೆದಿದ್ದ ಭಕ್ತರು ರಥಕ್ಕೆ ಕಾಯಿಯನ್ನ ಒಡೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಭಕ್ತರು ಇಷ್ಟಾರ್ಥ ಸಿದ್ದಿಗಾಗಿ ಮೆಣಸು, ಕಾಫಿ, ಅಡಿಕೆ ಬೆಳೆಗಳನ್ನು ಸಮರ್ಪಿಸುವ ಮೂಲಕ ಅನೇಕ ಹರಕೆಗಳನ್ನ ಸಲ್ಲಿಸಿದರು. ವರ್ಷಪೂರ್ತಿ ಗರ್ಭಗುಡಿಯಲ್ಲೇ ಕೂತು ಭಕ್ತರಿಗೆ ದರ್ಶನ ನೀಡುವ ಅನ್ನಪೂರ್ಣೇಶ್ವರಿ ವರ್ಷಕ್ಕೊಮ್ಮೆ ರಥದಲ್ಲಿ ಕೂತು ಭಕ್ತರಿಂದಲೇ ತನ್ನ ರಥವನ್ನ ಎಳೆಸಿಕೊಂಡು ಸಂತಸ ಪಟ್ಟು ದರ್ಶನ ನೀಡುತ್ತಾಳೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ.

ಮಧ್ಯಾಹ್ನ 12.30ರ ಸುಮಾರಿಗೆ ಅನ್ನಪೂರ್ಣೆಶ್ವರಿಗೆ ವಿಶೇಷ ಪೂಜೆಯನ್ನ ಸಲ್ಲಿಸಿ ಛತ್ರಿ ಚಾಮರಗಳ ಮೆರವಣಿಗೆಯಲ್ಲಿ ದೇವಿಯ ಮೂರ್ತಿಯನ್ನ ತಂದು ರಥದಲ್ಲಿ ಕೂರಿಸಲಾಯಿತು

ಅನ್ನಪೂರ್ಣೇಯ ಕ್ಷೇತ್ರದಲ್ಲಿ ವರ್ಷಂಪ್ರತಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಹರಿದುಬಂದಿತ್ತು

ಅನ್ನಪೂರ್ಣೇಯ ಕ್ಷೇತ್ರದಲ್ಲಿ ವರ್ಷಂಪ್ರತಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಹರಿದುಬಂದಿತ್ತು. ಹಗಲು ಮಾತ್ರವಲ್ಲದೇ ರಾತ್ರಿ ವೇಳೆಯೂ ವಿಶೇಷವಾದ ರಥೋತ್ಸವ ನಡೆಯುತ್ತಿದೆ. ಇಂದು ಬೆಳಗ್ಗೆ ಶಯನೋತ್ಸವ ಹಾಗೂ ಸಂಜೆ ಓಕುಳಿ ಸಂಪ್ರೋಕ್ಷಣೆಯೊಂದಿಗೆ ಪಂಚಮ ದಿನಗಳ ಕಾರ್ಯಕ್ರಮಕ್ಕೆ ತೆರೆಬೀಳಲಿದೆ. ಕೊರೊನಾ ಎರಡನೇ ಅಲೆಯ ಆತಂಕದ ನಡುವೆಯೂ ಸಾವಿರಾರು ಭಕ್ತರು ಹೊರನಾಡಿಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷವಾಗಿತ್ತು.

ಕ್ಷೇತ್ರದಲ್ಲಿ ಪ್ರತಿ ವರ್ಷ ಪಾಲ್ಗುಣ ಶುಕ್ಲ ಮಾಸದ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತದೆ

ರಥದಲ್ಲಿ ದೇವರನ್ನು ಕೂರಿಸಲು ತರುತ್ತಿರುವ ದೃಶ್ಯ

ಇದನ್ನೂ ಓದಿ

ವಿಜಯಪುರದಲ್ಲಿ ಗುರು ಕೊಟ್ಟೂರೇಶ್ವರರ ರಥೋತ್ಸವ.. ಕೊಟ್ಟೂರು ದೊರೆಯೇ ನಿನಗಾರು ಸರಿಯೇ ಎಂದ ಭಕ್ತರು

Chamundeshwari Chariot Festival: ಮೈಸೂರಿನಲ್ಲಿ ಚಾಮುಂಡೇಶ್ವರಿ ರಥೋತ್ಸವಕ್ಕೆ 5 ಲಕ್ಷ ವೆಚ್ಚದ ನೂತನ ಲಿಫ್ಟ್ ಲೋಕಾರ್ಪಣೆ

Published On - 12:49 pm, Wed, 17 March 21