AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್​ ನ್ಯೂಸ್; ವಿಶೇಷ ಪ್ರೋತ್ಸಾಹ ಧನ ಸೇರಿದಂತೆ ಹಲವು ಮಹತ್ವದ ಯೋಜನೆಗಳ ಘೋಷಣೆ

ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಕೊಡಗೆಗಳನ್ನು ಘೋಷಣೆ ಮಾಡಲಾಗಿದೆ. ಯಾವೆಲ್ಲ ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ತಿಳಿಯಲು ಈ ಸುದ್ದಿ ನೋಡಿ.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್​ ನ್ಯೂಸ್; ವಿಶೇಷ ಪ್ರೋತ್ಸಾಹ ಧನ ಸೇರಿದಂತೆ ಹಲವು ಮಹತ್ವದ ಯೋಜನೆಗಳ ಘೋಷಣೆ
ಶಿವರಾಮ್ ಹೆಬ್ಬಾರ್
TV9 Web
| Edited By: Rakesh Nayak Manchi|

Updated on: Jun 16, 2022 | 8:22 PM

Share

ಬೆಂಗಳೂರು: ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಭೆಯಲ್ಲಿ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಸೇರಿದಂತೆ ವಿವಿಧ ಮಹತ್ವದ ತೀರ್ಮಾನಗಳನ್ನು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: IND VS SA T-20:ಮೆಟ್ರೋ ಅವಧಿಯಲ್ಲಿ ಬದಲಾವಣೆ, ಹೆಚ್ಚುವರಿ ಬಸ್​ಗಳ ವ್ಯವಸ್ಥೆ; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಕಾರ್ಮಿಕ ಮಕ್ಕಳಿಗೆ ಪೈಲಟ್ ತರಬೇತಿ

ಕಟ್ಟಡ ಕಾರ್ಮಿಕರ ಮಕ್ಕಳ ಉನ್ನತಿಗಾಗಿ ಹಾಗೂ ಉದ್ಯೋಗದಲ್ಲಿ ಮುಂದೆ ತರುವ ನಿಟ್ಟಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪೈಲಟ್ ತರಬೇತಿ ನೀಡುವ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಪೈಲಟ್ ತರಬೇತಿಯ ಸಂಪೂರ್ಣ ವೆಚ್ಚವನ್ನು ಕಲ್ಯಾಣ ಮಂಡಳಿಯಿಂದ ಭರಿಸಲಾಗುತ್ತದೆ.

ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ; ಕೂದಲೆಳೆ ಅಂತರದಲ್ಲಿ ಸವಾರ ಬಚಾವ್, ಅಧಿಕಾರಿಗಳ ವಿರುದ್ಧ ಆಕ್ರೋಶ

ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹ ಧನ

ಇಂದು ನಡೆದ ಸಭೆಯಲ್ಲಿ ಘೋಷಿಸಲಾದ ಮಹತ್ವದ ಯೋಜನೆಗಳಲ್ಲಿ ಪ್ರೋತ್ಸಾಹ ಧನ ವಿತರಣೆ ಕೂಡ ಒಂದಾಗಿದೆ. ಈ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, 2500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೀಡಲಾಗುವ ಶೈಕ್ಷಣಿಕ ಪ್ರೋತ್ಸಾಹ ಧನದ ಜತೆ 10,000 ರೂ. ವಿಶೇಷ ಪ್ರೋತ್ಸಾಹ ಧನ ಮತ್ತು ಅಭಿನಂದನಾ ಪತ್ರ ವಿತರಿಸಲಾಗುತ್ತದೆ. ಇದರ ಜೊತೆಗೆ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ SSLC ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ನೆರವು ನೀಡಲಾಗುತ್ತದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More