ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ
ಡಾ|| ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು, ಡಾ|| ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ. ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣ ಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.
ಡಾ|| ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು, ಡಾ|| ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ. ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ 1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ 25 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಪ್ರಶಸ್ತಿ ಪ್ರಕಟವಾದ ದಿನವೇ ಡಾ|| ಸುಧೀಂದ್ರ ಹಾಲ್ದೊಡ್ಡೇರಿ ನಿಧನ ಸುಪ್ರಸಿದ್ಧ ವಿಜ್ಞಾನ ಬರಹಗಾರ, ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಹೆಚ್.ಎ.ಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಈಡಾಗಿದ್ದ ಅವರು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು ಅವರ ಮೆದುಳು ನಿಷ್ಕ್ರಿಯ (Brain Dead) ಹಂತಕ್ಕೆ ತಲುಪಿದೆ. ಪರಿಸ್ಥಿತಿ ಕಷ್ಟವಿದೆ ಎಂದು ಹೇಳಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುಧೀಂದ್ರ ಹಾಲ್ದೊಡ್ಡೇರಿ ಕೊನೆಯುಸಿರೆಳೆದಿದ್ದಾರೆ. ವಿಪರ್ಯಾಸ ಎಂದರೆ ಇಂದು (ಜುಲೈ 2 ) ಡಾ|| ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು, ಡಾ|| ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಪ್ರಕಟಿಸಲಾಗಿತ್ತು. ಪ್ರಶಸ್ತಿ ನೀಡುವ ಬಗ್ಗೆ ಅಧಿಕೃತವಾಗಿ ಪ್ರಕಟಿಸಿದ ದಿನವೇ ಸುಧೀಂದ್ರ ಹಾಲ್ದೊಡ್ಡೇರಿ ಅವರು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಲೋಕಾರ್ಪಣೆ
Published On - 2:42 pm, Fri, 2 July 21