AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Academic Year 2021: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ, ಜುಲೈ 1 ರಿಂದ ಶಾಲೆಗಳು ಆರಂಭ: ಅನ್ಬುಕುಮಾರ್ ಮಾಹಿತಿ

ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್​ಡೌನ್​ ಇರುವ ಜಿಲ್ಲೆಗಳಲ್ಲಿ ಪಾಸ್ ಪಡೆದು ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ.

Academic Year 2021: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ, ಜುಲೈ 1 ರಿಂದ ಶಾಲೆಗಳು ಆರಂಭ: ಅನ್ಬುಕುಮಾರ್ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Jun 14, 2021 | 12:06 PM

Share

ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಜೊತೆಗೆ ಜುಲೈ 1ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ.

ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್​ಡೌನ್​ ಇರುವ ಜಿಲ್ಲೆಗಳಲ್ಲಿ ಪಾಸ್ ಪಡೆದು ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ. ಶಿಕ್ಷಕರು ಅನ್ಯ ಕಾರಣ ನೀಡುವಂತಿಲ್ಲ. ಕೊವಿಡ್ ಸಮಯದಲ್ಲಿ ವೈದ್ಯರು ಪೌರಕಾರ್ಮಿಕರ ಮಾದರಿಯಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಅನ್ಬುಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷ ಮೂಂದುಡುವ ಪ್ರಶ್ನೆಯೇ ಇಲ್ಲ. ಕೊವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದೆ ಇದ್ದರೆ ಪರ್ಯಾಯವಾಗಿ ಆನ್​ಲೈನ್​, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡಬೇಕಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

New Academic Year; 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ವಿಳಂಬ?

ತಾಂತ್ರಿಕ ಸಮಿತಿ ನೀಡಿದ್ದ ಸಲಹೆಗಳ ನಿರ್ಲಕ್ಷ್ಯ ಮಾಡಿದ ರಾಜ್ಯ ಸರ್ಕಾರ ಮುಕ್ತ ಮುಕ್ತ ಅಂದಿದೆ! ಮುಂದಿದೆ ದೊಡ್ಡ ಪ್ರಮಾದ…

(Annubukumar informed that the current academic year will start tomorrow)

Published On - 12:03 pm, Mon, 14 June 21