BDA: 100 ಕೋಟಿ ರೂ ಭಾರೀ ಹಗರಣದ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ಬಿಡಿಎ ಅಧ್ಯಕ್ಷ ವಿಶ್ವನಾಥ್, ಏನಿದು ಪ್ರಕರಣ?

BDA ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನುಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿ, ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.

BDA:  100 ಕೋಟಿ ರೂ ಭಾರೀ ಹಗರಣದ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ಬಿಡಿಎ ಅಧ್ಯಕ್ಷ ವಿಶ್ವನಾಥ್, ಏನಿದು ಪ್ರಕರಣ?
100 ಕೋಟಿ ರೂ ಭಾರೀ ಹಗರಣದ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ಬಿಡಿಎ ಅಧ್ಯಕ್ಷ ವಿಶ್ವನಾಥ್, ಏನಿದು ಪ್ರಕರಣ?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 02, 2022 | 8:53 PM

ಬೆಂಗಳೂರು: ರಾಜಧಾನಿಯಲ್ಲಿ ಜನರಿಗೆ ಸೂರು ಒದಗಿಸುವ ಮಹತ್ವದ ಜವಾಬ್ದಾರಿ ಹೊತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) ಮತ್ತೊಂದು ಭಾರೀ ಹಗರಣ ಬೆಳಕಿಗೆ ಬಂದಿದೆ. 100 ಕೋಟಿ ರೂಪಾಯಿ ಹಗರಣದ ವಿರುದ್ಧ ಬಿಎಂಟಿಎಫ್ ನಲ್ಲಿ ಎಫ್ಐಆರ್ ದಾಖಲು ಮಾಡುವಂತೆ ಸ್ವತಃ ಬಿಡಿಎ ಅಧ್ಯಕ್ಷ ಎಸ್​ ಆರ್​ ವಿಶ್ವನಾಥ್ ಸೂಚಿಸಿದ್ದು, ಪ್ರಾಧಿಕಾರದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಜಿಪಿಎದಾರ ಮತ್ತು ಹಿಂದಿನ ಬಿಡಿಎ ಅಧಿಕಾರಿಗಳು, ಸಿಬ್ಬಂದಿ ಶಾಮೀಲು ಶಂಕೆ:

ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನುಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿ, ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ನಾಗರಾಜ್ ಎಂಬ ವ್ಯಕ್ತಿ ಮತ್ತು ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ನಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.

ಈಸ್ಟ್ ಆಫ್ ಎನ್ ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಈರಣ್ಣ ಎಂಬುವರಿಗೆ ಸೇರಿದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್. ಪುರ ಹೋಬಳಿಯ ಬಾಣಸವಾಡಿ ಗ್ರಾಮದ ಸರ್ವೆ ಸಂಖ್ಯೆ 73 ರಲ್ಲಿದ್ದ 4 ಎಕರೆ 13 ಗುಂಟೆ ಜಮೀನನ್ನು 1986 ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರದ ಹಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಠೇವಣಿ ಇಟ್ಟಿತ್ತು. ಆದರೆ, ಈರಣ್ಣ ಬಳಿ ನಾಗರಾಜ್ ಎಂಬ ವ್ಯಕ್ತಿ ಜಿಪಿಎ ಬರೆಯಿಸಿಕೊಂಡು ಜಮೀನು ತನ್ನದು ಎಂದು ಪ್ರತಿಪಾದಿಸಿ, ನಿವೇಶನಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು.

ಈ ಮಧ್ಯೆ, ರೆವಿನ್ಯೂ ನಿವೇಶನದಾರರ ಮೂಲಕ ಬಿಡಿಎ ತಮ್ಮ ನಿವೇಶನಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಇದಕ್ಕೆ ಬದಲಿ ನಿವೇಶನಗಳನ್ನು ನೀಡುವಂತೆ ಸೂಚನೆ ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಿಡಿಎ ನಿಯಮಾನುಸಾರ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು.

ನಾಗರಾಜ್ ಕಿಂಗ್ ಪಿನ್

ಈ ಮಧ್ಯೆ, ನಾಗರಾಜ್ ಎಲ್ಲಾ ರೆವಿನ್ಯೂ ನಿವೇಶನದಾರರಿಂದ ಸದರಿ ನಿವೇಶನಗಳನ್ನು ತನ್ನ ಹೆಸರಿಗೆ ಬರೆಯಿಸಿಕೊಂಡು, ತನಗೆ ಬದಲಿ ನಿವೇಶನಗಳನ್ನು ಮಂಜೂರು ಮಾಡುವಂತೆ ಬಿಡಿಎಗೆ ಅರ್ಜಿ ಸಲ್ಲಿಸುತ್ತಾನೆ. ಈ ಬಗ್ಗೆ ಎರಡು ಬಾರಿ ಚರ್ಚಿಸಿದ್ದ ಬಿಡಿಎ ಪ್ರಾಧಿಕಾರ ಸಭೆಯು ನಿಯಮಾವಳಿಗಳ ಪ್ರಕಾರ ಬದಲಿ ನಿವೇಶನ ನೀಡಲು ಸಾಧ್ಯವಿಲ್ಲ ಎಂದು ನಾಗರಾಜ್ ಮನವಿಯನ್ನು ತಿರಸ್ಕರಿಸಿತ್ತು.

2012 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಾಗರಾಜ್ ಗೆ ಅರ್ಕಾವತಿ ಬಡಾವಣೆಯ ವಿವಿಧ ಸರ್ವೇ ನಂಬರ್ ಗಳಲ್ಲಿ ಒಟ್ಟು 4 ಎಕರೆ 13 ಗುಂಟೆ ಜಮೀನನ್ನು ಬದಲಿಯಾಗಿ ನೀಡಲು ನಿರ್ಧಾರವಾಗಿ ಅದರಂತೆ ಮಂಜೂರು ಮಾಡಲಾಗುತ್ತದೆ. ಹೀಗೆ ಮಂಜೂರು ಮಾಡಲಾದ ಕೆಲವು ಜಾಗಗಳು ಬಫರ್ ಝೋನ್ ಸೇರಿದಂತೆ ಇನ್ನಿತರೆ ಕಾರಣಗಳಿಂದ ಮನೆ ನಿರ್ಮಾಣಕ್ಕೆ ಅಸಾಧ್ಯ ಎಂಬ ನೆಪ ಹೇಳಿ ನಾಗರಾಜ್ ನನಗೆ ಬೇರೆ ಕಡೆ ಭೂಮಿ ನೀಡಬೇಕೆಂದು ಮತ್ತೊಮ್ಮೆ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಮಾಡುತ್ತಾನೆ.

ಈ ಮನವಿಯನ್ನು ಪುರಸ್ಕರಿಸಿದ್ದ ಬಿಡಿಎ ಅಧಿಕಾರಿಗಳು 2014 ರಲ್ಲಿ ಥಣಿಸಂದ್ರ ಸೇರಿದಂತೆ ವಿವಿಧ ಕಡೆಗಳ ಪ್ರೈಂ ಸ್ಥಳಗಳಲ್ಲಿ ಜಿಪಿಎ ದಾರನಾಗಿದ್ದ ನಾಗರಾಜ್ ಹೆಸರಿಗೆ ಮಂಜೂರು ಮಾಡಿ, ನೋಂದಣಿಯನ್ನೂ ಮಾಡಿಸಿ ಸ್ವಾಧೀನಪತ್ರಗಳನ್ನೂ ನೀಡಿರುತ್ತಾರೆ.

ತನಿಖೆಗೆ ಎಸ್.ಆರ್.ವಿಶ್ವನಾಥ್ ಆದೇಶ

ಇದೊಂದು ದೊಡ್ಡ ಮಟ್ಟದ ಅಕ್ರಮವಾಗಿದೆ ಎಂಬುದನ್ನು ಗಮನಿಸಿದ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರು, ಮಂಜೂರಾತಿಯ ಇಡೀ ಕಡತವನ್ನು ಜಾಲಾಡಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಬಿಡಿಎ ಕಾರ್ಯಪಡೆಯ ಡಿವೈಎಸ್ ಪಿ ರವಿಕುಮಾರ್ ತಂಡಕ್ಕೆ ಆದೇಶ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ರವಿಕುಮಾರ್, ಇನ್ಸ್ ಪೆಕ್ಟರ್ ಶ್ರೀನಿವಾಸ್ ಅವರು ಈ ಪ್ರಕರಣದಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ ಎಂದು ಆಯುಕ್ತರು ಮತ್ತು ಅಧ್ಯಕ್ಷರಿಗೆ ವರದಿ ನೀಡಿದ್ದರು.

ಬಿಡಿಎ ಅಧ್ಯಕ್ಷ ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಸೂಚನೆಯಂತೆ ಇನ್ಸ್ ಪೆಕ್ಟರ್ ಶ್ರೀನಿವಾಸ್ ಅವರು ದೂರು ನೀಡಿದ್ದಾರೆ. ಈ ಅಕ್ರಮ ಭೂ ಮಂಜೂರಾತಿ ನಡೆಸಿ ಸುಮಾರು 100 ಕೋಟಿ ರೂಪಾಯಿಯಷ್ಟು ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಲಾಗಿದೆ. ಈ ಬಗ್ಗೆ ನಾಗರಾಜ್ ಮತ್ತು ಇದಕ್ಕೆ ಕಾರಣರಾಗಿರುವ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಬಿಎಂಟಿಎಫ್ ಗೆ ದೂರು ನೀಡಿದರು.

Published On - 8:53 pm, Sat, 2 July 22

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು