ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಮತ್ತೊಂದು ಬಲಿ
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಈವರೆಗೆ 19 ಜನ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 465 ಕೊರೊನಾ ಸೋಂಕಿತ ಮಹಿಳೆ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ರು. ಅಲ್ಲದೆ ಈಕೆಗೆ ಡಯಾಬಿಟಿಸ್ ಸಮಸ್ಯೆ ಸಹ ಇತ್ತು. ಕೊರೊನಾ ಸೋಂಕಿನಿಂದ ಏಪ್ರಿಲ್ 24ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾರೆ. 465 ಸೋಂಕಿತ ಮಹಿಳೆಯಿಂದ […]
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಈವರೆಗೆ 19 ಜನ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
465 ಕೊರೊನಾ ಸೋಂಕಿತ ಮಹಿಳೆ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ರು. ಅಲ್ಲದೆ ಈಕೆಗೆ ಡಯಾಬಿಟಿಸ್ ಸಮಸ್ಯೆ ಸಹ ಇತ್ತು. ಕೊರೊನಾ ಸೋಂಕಿನಿಂದ ಏಪ್ರಿಲ್ 24ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ರು. ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾರೆ.
465 ಸೋಂಕಿತ ಮಹಿಳೆಯಿಂದ ಈಗಾಗಲೇ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೆ ಈಕೆ ಮೂಡಲಪಾಳ್ಯದ ಹೆರಿಗೆ ಆಸ್ಪತ್ರೆಗೆ ಎರಡು ದಿನ ಹೋಗಿ ಬಂದಿದ್ರು. ಇದೀಗ ಮಹಿಳೆಯ ಸಾವಿನಿಂದ ಹಂಪಿನಗರದಲ್ಲಿ ಆತಂಕ ಹೆಚ್ಚಾಗಿದೆ.
Published On - 5:31 pm, Sun, 26 April 20