ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಚುನಾವಣೆ ಸಮರ: ಆರೋಪ-ಪ್ರತ್ಯಾರೋಪ ಜೋರು!

ಕರ್ನಾಟಕದಲ್ಲಿ ಹಾಲು ದರ ಏರಿಕೆ ಒಂದು ಕಡೆ ಆದರೆ ಕೋಚಿಮುಲ್ ಚುನಾವಣೆ ಹಿನ್ನಲೆ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ಚುನಾವಣೆ ನಡೆಸುವ ವಿಚಾರ ಹಾಗೂ ಅಧಿಕಾರ ಅನುಭವಿಸುವ ವಿಚಾರವಾಗಿ ವಾಕ್ಸಮರವೇ ನಡೆದಿದೆ. ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಸುವ ವಿಚಾರಕ್ಕೆ ಈಗ ಮತ್ತೆ ಸದ್ದು ಮಾಡುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಚುನಾವಣೆ ಸಮರ: ಆರೋಪ-ಪ್ರತ್ಯಾರೋಪ ಜೋರು!
ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಚುನಾವಣೆ ಸಮರ: ಆರೋಪ-ಪ್ರತ್ಯಾರೋಪ ಜೋರು!
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 26, 2024 | 10:56 PM

ಚಿಕ್ಕಬಳ್ಳಾಪುರ, ಜೂನ್​ 26: ಅತ್ತ ಕೆಎಂಎಫ್ (KMF) ಲೀಟರ್ ಹಾಲಿಗೆ ಹೆಚ್ಚುವರಿ ಹಾಲು ಸೇರಿಸಿ, ಹಾಲಿನ ದರ ಏರಿಕೆ ಮಾಡಿದ್ದರೆ, ಇತ್ತ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾಮಂಡಳಿಯ ಆಡಳಿತ ಮಂಡಳಿ ಚುನಾವಣೆ (Election) ನಡೆಸುವ ವಿಚಾರಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಬೆಂಬಲಿತರ ನಡುಎ ವಾಕ್ಸಮರ ಜೋರಾಗಿದೆ.

ಕೋಚಿಮುಲ್ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾಮಂಡಳಿ ವಾದ-ವಿವಾದ, ಆರೋಪ-ಪ್ರತ್ಯಾರೋಪ ಹಗರಣಗಳಿಗೆ ಖ್ಯಾತಿ. ಇನ್ನು ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾಮಂಡಳಿ ವಿಭಜನೆ ಮಾಡಿ, ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಮಂಡಳಿ ಮಾಡುವ ವಿಚಾರಕ್ಕೆ ರಾಜ್ಯದಲ್ಲೇ ಗಮನ ಸೆಳೆದಿತ್ತು.

ಇದನ್ನೂ ಓದಿ: ಅಜ್ಜವಾರ: ಹಾಲಿಗೆ ನೀರು ಸೇರಿಸಿ ಕೆಎಂಎಫ್​​ಗೆ ಭಾರೀ ವಂಚನೆ, ಹಾಲಿನ ಡೈರಿ ಗುಮಾಸ್ತ-ಕಾರ್ಯದರ್ಶಿ ಸಸ್ಪೆಂಡ್​

ಇನ್ನು ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಸುವ ವಿಚಾರಕ್ಕೆ ಈಗ ಮತ್ತೆ ಕುಖ್ಯಾತಿಯಾಗಿದೆ. ಪ್ರಸ್ತುತ ಇರುವ ಆಡಳಿತ ಮಂಡಳಿಯ ಅವಧಿ ಮುಗಿದು ಒಂದು ವರ್ಷವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಆಡಳಿತ ಮಂಡಳಿಯ ಅವಧಿಯನ್ನು ಒಂದು ವರ್ಷ ವಿಸ್ತರಿಸಿದೆ. ಇದರಿಂದ ಬಿಜೆಪಿ, ಜೆಡಿಎಸ್ ಬೆಂಬಲಿತ ನಿರ್ದೇಶಕರುಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳು ಒಕ್ಕೂಟ ವಿಭಜನೆ ಮಾಡಿ ಚುನಾವಣೆ ನಡೆಸುವುದು ಒಳ್ಳೆಯದು ಎನ್ನುತ್ತಿದ್ದಾರೆ.

ಇನ್ನು ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಆಡಳಿತ ಮಂಡಳಿಯ ಅವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಿದ್ದರಂತೆ. ಈಗ ನಾವು ಏಕೆ ವಿಸ್ತರಣೆ ಮಾಡಿಕೊಂಡು ಮುಂದುವರೆಯಬಾರದು, ಅವರಿಗೊಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಹಾಲಿ ಕೋಚಿಮುಲ್ ನಿರ್ದೇಶಕ ಊಲವಾಡಿ ಬಾಬು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ

ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾಮಂಡಳಿಯ ಆಡಳಿತ ಮಂಡಳಿ ಚುನಾವಣೆ ನಡೆಸುವ ವಿಚಾರಕ್ಕೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತರ ನಡುವೆ ವಾಕ್ಸಮರ ಜೋರಾಗಿದ್ದು, ಕೋಚಿಮುಲ್‍ನ್ನು ಹೇಗೆ ಲಾಭದಾಯಕ ಮಾಡಬೇಕು, ಹಾಲು ಉತ್ಪಾದಕ ರೈತರನ್ನು ಹೇಗೆ ಅಭಿವೃದ್ಧಿಗೊಳಿಸಬೇಕು ಎನ್ನುವುದರ ಬದಲು ಚುನಾವಣೆ ನಡೆಸುವ ವಿಚಾರ ಹಾಗೂ ಅಧಿಕಾರ ಅನುಭವಿಸುವ ವಿಚಾರಕ್ಕೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು