AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೊಂದು ಹೇಯ ಕೃತ್ಯ: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರಿನಲ್ಲಿ 2021ರಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ನಂತರ ಮತ್ತೊಂದು ಘಟನೆ ನಡೆದಿದೆ. ಮಡಿಕೇರಿ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಲಾಗಿದೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ ಸಂತ್ರಸ್ತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೊಂದು ಹೇಯ ಕೃತ್ಯ: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಕರ್ನಾಟಕದಲ್ಲಿ ಮತ್ತೊಂದು ಹೇಯ ಕೃತ್ಯ: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ದಿಲೀಪ್​, ಚೌಡಹಳ್ಳಿ
| Edited By: |

Updated on:Nov 04, 2024 | 7:14 PM

Share

ಮೈಸೂರು, ನವೆಂಬರ್​ 04: 2021ರಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್​ರೇಪ್ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು​. ಇದೀಗ ಮಡಿಕೇರಿ ಮೂಲದ ಯುವತಿ (girl) ಮೇಲೆ ಮತ್ತೊಂದು ಗ್ಯಾಂಗ್ ರೇಪ್​ ನಡೆದಿದೆ. ನಗರದಲ್ಲಿ ನಿನ್ನೆ ಘಟನೆ ನಡೆದಿದೆ. ಸದ್ಯ ಸಂತ್ರಸ್ತ ಯುವತಿ ಮೈಸೂರಿನ ವಿಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಅಂದರೆ 2021ರಲ್ಲಿ ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಲಲಿತಾದ್ರಿಪುರದ ಹೊರವಲಯದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ರೇಪ್ ನಡೆದಿತ್ತು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಓರ್ವ ಬಾಲಾಪರಾಧಿ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ನಗರದಲ್ಲಿ ಮತ್ತೊಂದು ಗ್ಯಾಂಗ್ ರೇಪ್​ ನಡೆದಿದ್ದು, ಜನರಲ್ಲಿ ಆತಂಕ ಶುರುವಾಗಿದೆ.

ಡಿವೈಡರ್​ಗೆ ಕಾರ್ ಡಿಕ್ಕಿ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಕೋಲಾರ್​: ಡಿವೈಡರ್​ಗೆ ಕಾರ್ ಡಿಕ್ಕಿಯಾದ ಪರಿಣಾಮ ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಹೊರವಲಯದ ಪವನ್ ಕಾಲೇಜು ಬಳಿ ಈ ಘಟನೆ ನಡೆದಿದ್ದು, ಉತ್ತರ ಭಾರತ ಮೂಲದ ಕಿರಣ್ ಹಾಗೂ ರಜನಿಸಿಂಗ್ ಮೃತ ದುರ್ದೈವಿಗಳು.

ಇದನ್ನೂ ಓದಿ: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?

ಕಾರಿನಲ್ಲಿದ್ದ ಮಹಿಳೆ ಮತ್ತು ಮಕ್ಕಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತವಾದ ಸ್ಥಳದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ಗಾಯಗೊಂಡಿದ್ದ ವ್ಯಕ್ತಿಯ ಜೀವ ಉಳಿಸುವ ಪ್ರಯತ್ನ ಮಾಡಿ ಮಾನವೀಯತೆ ಮೆರೆದಿದ್ದರು. ಆದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

ಇನ್ನು ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಜೊತೆಗೆ ಅತಿ ವೇಗವಾಗಿ ಬಂದ ಕಾರಣ ಕಾರ್ ಡಿವೈಡರ್​ಗೆ ಡಿಕ್ಕಿಯಾಗಿದೆ. ಕೋಲಾರ ಸಂಚಾರಿ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:58 pm, Mon, 4 November 24