ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ.  

ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
ರಾಯಚೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಮೂವರು ದುರ್ಮರಣ
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Oct 14, 2024 | 5:17 PM

ರಾಯಚೂರು, ಅಕ್ಟೋಬರ್​ 14: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು ಎನ್ನಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದಾನೆ. ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋಗಿದ್ದ ಕೇಸ್​: ಇಂದು ಮಗಳ ಶವ ಪತ್ತೆ

ರಾಯಚೂರು ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಿನ್ನೆ ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ ಸುಜಾತಾ (27), ಮಗಳು ಶ್ರಾವಣಿ (10) ಕೊಚ್ಚಿ ಹೋಗಿದ್ದು, ಇಂದು ಕಾಲುವೆಯಲ್ಲಿ ಶ್ರಾವಣಿ ಶವ ಪತ್ತೆ ಆಗಿದೆ.

ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗ

ನಿನ್ನೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ವೇಳೆ ತಾಯಿ ಸುಜಾತಾ ಶವ ಪತ್ತೆಯಾಗಿತ್ತು. ಇಂದು ಮಗಳು ಶ್ರಾವಣಿ ಮೃತದೇಹ ಪತ್ತೆ ಆಗಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನಿತ್ಯ ಬಟ್ಟೆ ತೊಳೆಯಲು ತಾಯಿ-ಮಗಳು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು.  ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವು

ಕೋಲಾರ: ಕಟ್ಟಡದ ಮೇಲಿಂದ ಆಯತಪ್ಪಿ‌ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಬಂಗಾರಪೇಟೆಯ ಕರ್ನಾಟಕ ರಾಜ್ಯದ ಉಗ್ರಾಣ‌ ನಿಗಮದ ಕಟ್ಟಡದಲ್ಲಿ ನಡೆದಿದೆ. ಕೆಜಿಎಫ್​ನ ಮಾದಮಂಗಲ ನಿವಾಸಿ ನಾರಾಯಣಸ್ವಾಮಿ(35) ಮೃತ ವ್ಯಕ್ತಿ.

ಉಗ್ರಾಣದ ಕಟ್ಟಡ ದುರಸ್ತಿ ಕಾರ್ಯ ವೇಳೆ ದುರಂತ ಸಂಭವಿಸಿದೆ. ಶೀಟ್​​ಗಳನ್ನು ಬದಲಾಯಿಸುವ ಕೆಲಸವನ್ನು ನಾರಾಯಣಸ್ವಾಮಿ ಮಾಡುತ್ತಿದ್ದ. ಶೀಟ್ ಮುರಿದು ಕೆಳಗೆ ಬಿದ್ದು ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:57 pm, Mon, 14 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ