ಹಾಸನದಲ್ಲಿ ಮತ್ತೊಂದು ದುರಂತ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ಹಾಸನ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಸ್ಥಳೀಯರು ಕೆರೆಯಿಂದ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನದಲ್ಲಿ ಮತ್ತೊಂದು ದುರಂತ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು
ಹಾಸನದಲ್ಲಿ ಮತ್ತೊಂದು ದುರಂತ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 31, 2024 | 5:33 PM

ಹಾಸನ, ಮೇ 31: ಜಿಲ್ಲೆಯಲ್ಲಿ ಇತ್ತೀಚೆಗೆ ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದರು. ಆ ಘಟನೆ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಬೇಲೂರು (Belur) ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ (drowned) ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ದೀಕ್ಷಿತ್(10), ನಿತ್ಯಾಶ್ರೀ(12), ಕುಸುಮಾ(6) ಮೃತಪಟ್ಟವರು. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರು ಕೆರೆಯಿಂದ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಲ್ವರು ಮಕ್ಕಳು ನೀರು ಪಾಲು

ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲಾಗಿರುವಂತಹ ಘಟನೆ ನಡೆದಿತ್ತು. ಶಾಲೆಗೆ ರಜೆ ಹಿನ್ನೆಲೆ ಈಜಲು ತೆರಳಿದ್ದಾಗ ದುರಂತ ಸಂಭವಿಸಿತ್ತು. ಆರಲೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಘಟನೆ ನಡೆದಿತ್ತು.

ಮನೆ ಮೇಲ್ಚಾವಣಿ ಕುಸಿದು ಅಕ್ಕ-ತಮ್ಮ ದುರ್ಮರಣ

ಬಾಗಲಕೋಟೆ: ಮನೆ ಕುಸಿದು ಬಿದ್ದು ಅಕ್ಕ-ತಮ್ಮ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಇಳಕಲ್ ತಾಲೂಕಿನ ಕಂದಗಲ್​ನಲ್ಲಿ ನಡೆದಿದೆ. ಗೀತಾ ಈಶ್ವರಯ್ಯ ಆದಾಪುರಮಠ(14) ಹಾಗೂ ಆಕೆಯ ಸಹೋದರ ರುದ್ರಯ್ಯ(10) ಮೃತ ದುರ್ವೈವಿಗಳು. ಮನೆಯ ಮೇಲ್ಛಾವಣಿಯ ಅಪಾರ ಮಣ್ಣು, ಕಟ್ಟಿಗೆ ಬಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಸ್ವಲ್ಪದರಲ್ಲೇ ಅಜ್ಜ-ಅಜ್ಜಿ ಪಾರಾಗಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ತನ್ನನ್ನು ಬಿಟ್ಟು ಸಹೋದರನನ್ನು ಮದ್ವೆಯಾಗಿದ್ದಕ್ಕೆ ಮೂವರನ್ನ ಕೊಂದ ಭಗ್ನ ಪ್ರೇಮಿ

ಮನೆ ಬೀಳುವ ಕೆಲವೇ ಕ್ಷಣಕ್ಕೆ ಮೊದಲು ಮನೆಯಿಂದ ಹೊರಗಿದ್ದ ಅಜ್ಜ-ಅಜ್ಜಿ ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರ್ಯಾಚರಣೆ ನಡೆಸಿ, ಮಣ್ಣಲ್ಲಿ ಸಿಲುಕಿದ್ದ ಇಬ್ಬರ ಶವವನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಇಳಕಲ್ ತಾಲೂಕು ಆಸ್ಪತ್ರೆಗೆ ಎರಡು ಮಕ್ಕಳ ಶವ ರವಾನೆ ಮಾಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:15 pm, Fri, 31 May 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ