ಗೋಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆಗೆ ಅನುಮೋದನೆ
ಗೋಹತ್ಯೆ ನಿಷೇಧ ತಿದ್ದುಪಡಿ ಬಿಲ್ ಸುಗ್ರೀವಾಜ್ಞೆಗೆ ಒಪ್ಪಿಗೆ ಸಿಕ್ಕಿದ್ದು ಇಂದು (ಡಿ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಗೋಹತ್ಯೆ ನಿಷೇಧ ತಿದ್ದುಪಡಿ ಬಿಲ್ ಸುಗ್ರೀವಾಜ್ಞೆಗೆ ಒಪ್ಪಿಗೆ ಸಿಕ್ಕಿದ್ದು ಇಂದು (ಡಿ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಗೋವುಗಳ ರಕ್ಷಣೆ ಆಗಬೇಕು. ವಿಧಾನಪರಿಷತ್‌ನಲ್ಲಿ ವಿಧೇಯಕ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಸುದೀರ್ಘ ಚರ್ಚೆ ಮಾಡಿ ಸುಗ್ರೀವಾಜ್ಞೆ ನಿರ್ಧಾರ ಮಾಡಲಾಗಿದೆ. ಈ ಕಾಯ್ದೆ ಜಾರಿಗೊಳಿಸಿದ ನಂತರ ಅನೇಕರು ಕರೆ ಮಾಡಿ ಬೆಂಬಲ ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋವು ನಮ್ಮ ಭಾರತೀಯ ಸಂಸ್ಕೃತಿಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಅವರು ಹೇಳಿದ್ದಾರೆ.
2009ರ ಜಾನುವಾರು ಗಣತಿ ಪ್ರಕಾರ ವರ್ಷಕ್ಕೆ 2,38,296ರ ಗೋವುಗಳ ವಧೆ:
2009ರ ಜಾನುವಾರು ಗಣತಿ ಪ್ರಕಾರ 2,38,296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಇದೇ ರೀತಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ.
ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಭಿನ್ನ ಪ್ರಯೋಗ:
ಗೋವುಗಳ ಸಂರಕ್ಷಣೆಗೆ ಉತ್ತರಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಭಿನ್ನವಾದ ಪ್ರಯೋಗಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ, ಗೋವುಗಳ ಸಂಖ್ಯೆ ಗಣನೀಯ ಪ್ರಮಾಣದ ಏರಿಕೆ ಕಂಡು ಬಂದಿದ್ದು, ಉದ್ಯೋಗ ಸೃಷ್ಟಿ, ಗೋವಿನ ದೇಶಿ ಉತ್ಪನ್ನಗಳ ಮಾರಾಟ ಮತ್ತು ಬಳಕೆಗಳು ಹೆಚ್ಚುತ್ತಿದೆ.
ಗೋ ಹತ್ಯೆ ನಿಷೇಧ ಕಾಯ್ದೆ ಕಠೋರ, ಅವೈಜ್ಞಾನಿಕ, ರೈತ ವಿರೋಧಿ ಎಂದು ಗುಡುಗಿದ ಸಿದ್ದರಾಮಯ್ಯ
Published On - 1:12 pm, Mon, 28 December 20