AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಜಿಲ್ಲೆಯಲ್ಲಿ ರೈತರ ಒಕ್ಕಲೆಬ್ಬಿಸುವಿಕೆ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರ ಪ್ರತಿಭಟನೆ

ಸಂಸದ ಮುನಿಸ್ವಾಮಿ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸಮಸ್ಯೆ ವಿವರಿಸಿದರು. ಇದೇ ವೇಳೆ, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ, ಬಡವರಿಗೆ ಅನ್ಯಾಯ ಮಾಡುವುದಿಲ್ಲ. ಜಂಟಿ ಸರ್ವೆ ಆಗುವವರೆಗೆ ತೆರವು ಕಾರ್ಯ ಸ್ಥಗಿತಗೊಳಿಸಲು ಸೂಚಿಸಿದ್ದೇನೆ ಎಂದು ಪ್ರತಿಭಟನಾನಿರತ ಬಿಜೆಪಿ ಸಂಸದರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕೋಲಾರ ಜಿಲ್ಲೆಯಲ್ಲಿ ರೈತರ ಒಕ್ಕಲೆಬ್ಬಿಸುವಿಕೆ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರ ಪ್ರತಿಭಟನೆ
ಕೋಲಾರ ಸಂಸದ ಮುನಿಸ್ವಾಮಿ (ಸಂಗ್ರಹ ಚಿತ್ರ)
ಕಿರಣ್​ ಹನಿಯಡ್ಕ
| Edited By: |

Updated on: Oct 19, 2023 | 9:05 PM

Share

ಬೆಂಗಳೂರು, ಅಕ್ಟೋಬರ್ 19: ಕೋಲಾರ ಜಿಲ್ಲೆಯ (Kolar) ಮುಳಬಾಗಿಲು, ಕೆಜಿಎಫ್, ಶ್ರೀನಿವಾಸಪುರದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು (BJP MPs) ಗುರುವಾರ ಪ್ರತಿಭಟನೆ ನಡೆಸಿದರು. ಕೋಲಾರ ಸಂಸದ ಮುನಿಸ್ವಾಮಿ, ರಾಜ್ಯಸಭಾ ಸದಸ್ಯ ಕಡಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಂಸದರ ಜೊತೆ ಪ್ರತಿಭಟನೆಗೆ ಕುಳಿತಿದ್ದ ಬೆಂಬಲಿಗರನ್ನು ಪೊಲೀಸರು ಎಬ್ಬಿಸಿದರು. ನಂತರ ಸಂಸದರ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆಗಮಿಸಿದರು.

ಸಂಸದ ಮುನಿಸ್ವಾಮಿ ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸಮಸ್ಯೆ ವಿವರಿಸಿದರು. ಇದೇ ವೇಳೆ, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ, ಬಡವರಿಗೆ ಅನ್ಯಾಯ ಮಾಡುವುದಿಲ್ಲ. ಜಂಟಿ ಸರ್ವೆ ಆಗುವವರೆಗೆ ತೆರವು ಕಾರ್ಯ ಸ್ಥಗಿತಗೊಳಿಸಲು ಸೂಚಿಸಿದ್ದೇನೆ ಎಂದು ಪ್ರತಿಭಟನಾನಿರತ ಬಿಜೆಪಿ ಸಂಸದರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಈ ಮಧ್ಯೆ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಎದುರು ಸಂತ್ರಸ್ತ ವ್ಯಕ್ತಿ ಕಣ್ಣೀರಿಟ್ಟ ಘಟನೆಯೂ ನಡೆಯಿತು.

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹಲವು ಗ್ರಾಮಗಳಲ್ಲಿ ತಿಂಗಳ ಹಿಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. 3 ದಿನಗಳಲ್ಲಿ 560 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿತ್ತು. ಸುಮಾರು 25 ಕ್ಕೂ ಹೆಚ್ಚು ಜೆಸಿಬಿಗಳ ಮೂಲಕ 200 ಕ್ಕೂ ಹೆಚ್ಚು ಪೊಲೀಸ್​ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಭೂಮಿಯನ್ನು ವಶಕ್ಕೆ ಪಡೆದಿದ್ದರು.

ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ದಾಖಲಾಗಿತ್ತು ಪ್ರಕರಣ

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪದಡಿ ಕೋಲಾರ ಸಂಸದ ಮುನಿಸ್ವಾಮಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಸೆಪ್ಟೆಂಬರ್​ನಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವಿವಿದ ಸೆಕ್ಷನ್ ಅಡಿಯಲ್ಲಿ ಮೂರು ಪ್ರಕರಣ ದಾಖಲಾಗಿದ್ದವು.ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ರಾಜ್ಯದ ಹಲವೆಡೆ ಬಿಜೆಪಿ ನಾಯಕರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ಜಟಾಪಟಿ ನಡೆಯುತ್ತಿದೆ. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಒತ್ತುವರಿ ತೆರವು ವಿಚಾರವಾಗಿ ಬಿಜೆಪಿ ಶಾಸಕ ಹರೀಶ್​ ಪೂಂಜಾ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಮಧ್ಯೆ ನಡೆದ ಜಟಾಪಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಸಂಸದ ಉಮೇಶ್ ಜಾಧವ್ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ, ಬಡ ಕಾರ್ಮಿಕರ ಪರವಾಗಿ ಆಹೋರಾತ್ರಿ ಧರಣಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ