AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಸೀಲಿಂಗ್ ಫ್ಯಾನ್​ಗಳಲ್ಲಿ ಆ್ಯಂಟಿ ಸೂಯಿಸೈಡ್ ಡಿವೈಸ್! ರಾಜೀವ್ ಗಾಂಧಿ ವಿವಿ ಮಹತ್ವದ ಕ್ರಮ

ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಿರುವುದರಿಂದ ಕಾಲೇಜು ಹಾಸ್ಟೆಲ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನಗಳನ್ನು ಅಳವಡಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮುಂದಾಗಿದೆ. ಇತ್ತೀಚೆಗೆ ಮಂಡ್ಯದ ವೈದ್ಯಕೀಯ ಸಂಸ್ಥೆಯಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ರಾಜೀವ್ ಗಾಂಧಿ ವಿವಿ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಹಾಸ್ಟೆಲ್ ಸೀಲಿಂಗ್ ಫ್ಯಾನ್​ಗಳಲ್ಲಿ ಆ್ಯಂಟಿ ಸೂಯಿಸೈಡ್ ಡಿವೈಸ್! ರಾಜೀವ್ ಗಾಂಧಿ ವಿವಿ ಮಹತ್ವದ ಕ್ರಮ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Aug 06, 2025 | 9:41 AM

Share

ಬೆಂಗಳೂರು, ಆಗಸ್ಟ್ 6: ಕರ್ನಾಟಕದ ಕಾಲೇಜು ವಸತಿ ನಿಲಯಗಳಲ್ಲಿ (College Hostels) ವಿದ್ಯಾರ್ಥಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS) ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ವಿವಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ವೈದ್ಯಕೀಯ ಸಂಸ್ಥೆಗಳ ಹಾಸ್ಟೆಲ್‌ಗಳ ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಥವಾ ಆ್ಯಂಟಿ ಸೂಯಿಸೈಡ್ ಡಿವೈಸ್ (Anti-Suicide Device) ಸಾಧನಗಳನ್ನು ಅಳವಡಿಸಲು ಯೋಚಿಸಿದೆ.

ಕೇವಲ ಎರಡು ವಾರಗಳ ಅವಧಿಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಮಿಮ್ಸ್) ಇಬ್ಬರು ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಂತರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಈ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ.

ಪರಿಸ್ಥಿತಿ ಬಗ್ಗೆ ಅವಲೋಕಿಸಲು ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗಟ್ಟುವ ಕ್ರಮಗಳ ಕುರಿತು ಚರ್ಚಿಸಲು ವಿವಿಯ ಪಠ್ಯಕ್ರಮ ಅಭಿವೃದ್ಧಿ ಕೋಶದ (CDC) ಡಾ. ಸಂಜೀವ್ ನೇತೃತ್ವದ ತಂಡವು ಜುಲೈ ಕೊನೆಯ ವಾರದಲ್ಲಿ ಮಿಮ್ಸ್​​ಗೆ ಭೇಟಿ ನೀಡಿ ಸಮಾಲೋಚನೆ ನಡೆಸಿತ್ತು. ಆ ಸಂದರ್ಭದಲ್ಲಿ, ಮುಂದೆ ಇಂಥ ಘಟನೆಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನ್‌ಗಳಲ್ಲಿ ಸುರಕ್ಷತಾ ಸಾಧನಗಳನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಡಾ. ಸಂಜೀವ್ ಬಹಿರಂಗಪಡಿಸಿದ್ದರು.

ಇದನ್ನೂ ಓದಿ
Image
ಅಂಜನಾದ್ರಿಯಲ್ಲಿ ಪೂಜಾ ವಿವಾದ: ವಿಚಾರಣೆಗೆ ಹಾಜರಾಗುವಂತೆ ಡಿಸಿಗೆ ತಾಕೀತು
Image
ಕಾಲ್ ಗರ್ಲ್ ಬೇಕೆಂದು ಲಿಂಕ್ ಕ್ಲಿಕ್ ಮಾಡಿ ಪೇಮೆಂಟ್! ಲಕ್ಷಾಂತರ ರೂ. ಪಂಗನಾಮ
Image
ಕೈಗಾದಲ್ಲಿ ಮತ್ತೆರಡು ಅಣು ವಿದ್ಯುತ್ ಘಟಕ: ವಿದ್ಯುತ್ ಉತ್ಪಾದನೆಗೆ ಬಲ
Image
ಡಿಮ್ಹಾನ್ಸ್ ಟೆಲಿ ಮಾನಸ್ ಸಾಧನೆ: 300 ಕ್ಕೂ ಹೆಚ್ಚು ಆತ್ಮಹತ್ಯೆಗಳಿಗೆ ತಡೆ

ಆ್ಯಂಟಿ ಸೂಯಿಸೈಡ್ ಡಿವೈಸ್ ಹೇಗೆ ಕೆಲಸ ಮಾಡುತ್ತೆ?

ಮೂಲಗಳ ಪ್ರಕಾರ, ಪ್ರಸ್ತಾವಿತ ಆ್ಯಂಟಿ ಸೂಯಿಸೈಡ್ ಡಿವೈಸ್ ಸೀಲಿಂಗ್ ಫ್ಯಾನ್‌ ಮೇಲಿನ ತೂಕ ಮಿತಿಗಿಂತ ಹೆಚ್ಚಾದರೆ ಸ್ವಯಂಚಾಲಿತ ವ್ಯವಸ್ಥೆ ಅಲರ್ಟ್ ಆಗುತ್ತದೆ. ಕೂಡಲೇ ಫ್ಯಾನ್ ಸೀಲಿಂಗ್ ಹುಕ್‌ನಿಂದ ಬೇರ್ಪಡುತ್ತದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದರೆ ಫ್ಯಾನ್ ತಾನಾಗಿಯೇ ಕಳಚಿ ಬೀಳಲಿದೆ.

ಆ್ಯಂಟಿ ಸೂಯಿಸೈಡ್ ಡಿವೈಸ್​​ನಲ್ಲಿದೆ ಸೈರನ್

ಕೇವಲ ಫ್ಯಾನ್ ಹುಕ್​ನಿಂದ ಕಳಚುವುದಷ್ಟೇ ಅಲ್ಲದೆ, ಹಾಸ್ಟೆಲ್ ಅಧಿಕಾರಿಗಳನ್ನು ಎಚ್ಚರಿಸಲು ಸೈರನ್ ಕೂಡ ಆ್ಯಂಟಿ ಸೂಯಿಸೈಡ್ ಡಿವೈಸ್​ನಲ್ಲಿ ಅಳವಡಿಸಲಾಗಿದೆ. ಇದರಿಂದ ಸಾವುಗಳನ್ನು ತಡೆಯುವುದಷ್ಟೇ ಅಲ್ಲದೆ, ವಿದ್ಯಾರ್ಥಿಯನ್ನು ಪತ್ತೆ ಮಾಡಿ ಅವರಿಗೆ ಮಾನಸಿಕ ಧೈರ್ಯ, ಬೆಂಬಲ ನೀಡುವುದೂ ಸಾಧ್ಯವಾಗಲಿದೆ.

ಇದನ್ನೂ ಓದಿ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ಟೆಲಿ ಮಾನಸ್ ಸಾಧನೆ: 300 ಕ್ಕೂ ಹೆಚ್ಚು ಆತ್ಮಹತ್ಯೆಗಳಿಗೆ ತಡೆ

ಮಿಮ್ಸ್​​ನಲ್ಲಿ ಆ್ಯಂಟಿ ಸೂಯಿಸೈಡ್ ಡಿವೈಸ್​ನ ಅಣಕು ಕಾರ್ಯಾಚರಣೆಯನ್ನೂ ನಡೆಸಿ ಪರಿಶೀಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಿಮ್ಸ್​​ನಲ್ಲಿ ಕೊಪ್ಪಳ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ಭರತ್ ಎಂಬವರು ಜುಲೈ ಕೊನೆಯಲ್ಲಿ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನಿಷ್ಕಲಾ ಆಗಸ್ಟ್ 2 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್