Tumakuru News: ತುಮಕೂರಿನಲ್ಲಿ ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ, ಮೂಢನಂಬಿಕೆಗೆ ಕೊನೆಯೆಂದು?

ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೂಢನಂಬಿಕೆಯಲ್ಲಿ ಮುಳುಗಿದ್ದ ಕುಟುಂಬಸ್ಥವೊಂದು ಬಾಣಂತಿ, ಮಗುವನ್ನ ಊರ ಹೊರಗಿಟ್ಟಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಚಿಕಿತ್ಸೆ ಫಲಿಸದೆ 1 ತಿಂಗಳ ಕಂದಮ್ಮ ಮೃತಪಟ್ಟಿದೆ.

Tumakuru News: ತುಮಕೂರಿನಲ್ಲಿ ಮೌಢ್ಯಕ್ಕೆ 1 ತಿಂಗಳ ಹಸುಗೂಸು ಬಲಿ, ಮೂಢನಂಬಿಕೆಗೆ ಕೊನೆಯೆಂದು?
ಹಳೆಯ ಚಿತ್ರ
Follow us
| Updated By: ಆಯೇಷಾ ಬಾನು

Updated on:Jul 27, 2023 | 11:13 AM

ತುಮಕೂರು, ಜುಲೈ 26: ಜಿಲ್ಲೆಯ ಗೊಲ್ಲರಹಟ್ಟಿಯಲ್ಲಿ ಮೂಢನಂಬಿಕೆಯಲ್ಲಿ( Superstition) ಮುಳುಗಿದ್ದ ಕುಟುಂಬಸ್ಥರಿಂದ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಪರೀತ ಶೀತದಿಂದ ಬಳಲಿ ಮಗು(Death) ಮೃತಪಟ್ಟಿದೆ. ತುಮಕೂರು ತಾಲೂಕಿನ ಮಲ್ಲೇನಹಳ್ಳಿ ವ್ಯಾಪ್ತಿಯ ಗೊಲ್ಲರಹಟ್ಟಿಯಲ್ಲಿ ಮೌಢ್ಯಕ್ಕೆ 1 ತಿಂಗಳ ಮಗು ಬಲಿಯಾಗಿದೆ. ದೇವರಿಗೆ ಸೂತಕ ಆಗುತ್ತೆ ಎಂದು ಬಾಣಂತಿ, ಮಗುವನ್ನು ಊರಿನ ಹೊರಗೆ ಗುಡಿಸಲಲ್ಲಿಟಲಾಗಿತ್ತು. ಮಗುವಿಗೆ ವಿಪರೀತ ಶೀತವಾಗಿದ್ದು ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಕುಟುಂಬಸ್ಥರ ಮೂಢನಂಬಿಕೆಗೆ 1 ತಿಂಗಳ ಕಂದಮ್ಮ ಸಾವನ್ನಪ್ಪಿದೆ.

ಘಟನೆ ಹಿನ್ನೆಲೆ

ಕಾಡುಗೊಲ್ಲ ಸಮುದಾಯದ ಸೂತಕದ ಸಂಪ್ರದಾಯ ಆಚರಣೆ ಈ ಕಾಲದಲ್ಲೂ ಮುಂದುವರೆದಿದೆ. ತುಮಕೂರು ತಾಲೂಕು ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಿನಿಂದ ಹೊರಗಿಟ್ಟು ಊರಾಚೆಯ ಜಮೀನಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಸಿಲಿನಲ್ಲಿ ಏಕಾಂಗಿಯಾಗಿ ವಾಸ ಮಾಡುವಂತೆ ಕಟ್ಟಪ್ಪಣೆ ಮಾಡಿತ್ತು. ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತಾ ಮೌಡ್ಯಾಚರಣೆ ಮಾಡಲಾಗಿತ್ತಿ. ಆದ್ರೆ ಈಗ ಮಗುವಿಗೆ ವಿಪರೀತ ಶಿತವಾಗಿ ಪುಟ್ಟ ಕಂದಮ್ಮ ಪ್ರಾಣ ಕಳೆದುಕೊಂಡಿದೆ. ತಾಯಿ ಒಡಲ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ತುಮಕೂರು: ಬಾಣಂತಿ ಊರಿನಿಂದ ಹೊರಗೆ, ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ

ವಸಂತ ಎಂಬ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಿದ್ದಂತೆಯೇ ಆಕೆಯ ಕುಟುಂಬಸ್ಥರು ಊರಾಚೆಗಿನ ಗುಡಿಸಿಲಿನಲ್ಲಿ ವಾಸಿಸುವಂತೆ ಅಪ್ಪಣ ಮಾಡಿದ್ದರು. ಅವರ ಮಾತನ್ನು ಮೀರದ ವಸಂತ ಈಗ ಕಂದಮ್ಮನನ್ನು ಕಳೆದುಕೊಂಡಿದ್ದಾರೆ. ವಸಂತ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಂತವಾಗಿತ್ತು. ಹೆರಿಗೆ ಮುಗಿಸಿ ವಾಪಸ್ ಬಂದ ವಸಂತ ಮನೆಗೆ ತೆರಳದೇ ಊರು ಹೊರಗಿನ ಗುಡಿಸಲಿನಲ್ಲಿ ತನ್ನ ಚೊಚ್ಚಲ ಬಾಣಂತನ ಆರಂಭಿಸಿದ್ದರು. ನಮ್ಮ ದೇವರಿಗೆ ಸೂತಕ ಆಗಲ್ಲ ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ, ಹಿಂದಿನಿಂದಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದ್ದರು. ಈ ಬಗ್ಗೆ ಟಿವಿ9 ಈ ಹಿಂದೆ ವರದಿ ಮಾಡಿತ್ತು.

ಆದರೆ ಈಗ ಈ ಮೂಢನಂಬಿಕೆಗೆ ಜಗತ್ತು ಕಾಣದ ಮಗು ಕಣ್ಣುಮುಚ್ಚಿದೆ. ತನ್ನ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ತಾಯಿ ಕಣ್ನೀರಲ್ಲಿ ಕೈಗೊಳೆಯುತ್ತಿದ್ದಾರೆ. ಈಗಲಾದರೂ ಮೂಢನಂಬಿಕೆಯ ಭೂತ ದೂರವಾಗಬೇಕು. ಬಾಲಕಿಯರು ಋತುಮತಿಯಾದಾಗ,ಮಹಿಳೆಯರ ಮಾಸಿಕ ಋತುಚಕ್ರ ಮತ್ತು ಹೆರಿಗೆ ಸಂದರ್ಭದಲ್ಲಿ ನಿರ್ದಿಷ್ಟ ದಿನಗಳವರೆಗೆ ಗ್ರಾಮದಿಂದ ಹೊರಗೆ ಗುಡಿಸಲಿನಲ್ಲಿ ಇರುವ ಪದ್ಧತಿ ಬುಡಕಟ್ಟು ಸಂಪ್ರದಾಯ ಪಾಲಿಸುವ ಗೊಲ್ಲ ಸಮುದಾಯದಲ್ಲಿ ಬಹಳ ಹಿಂದಿನಿಂದಲ್ಲೂ ನಡೆದುಕೊಂಡು ಬಂದಿದೆ. ಈ ಪದ್ಧತಿ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇನ್ನಾದರೂ ಜನ ಬದಲಾಗಬೇಕು.

ಮಗು ಸಾವಾದರೂ ಬಾಣಂತಿಯನ್ನ ಊರೊಳಗೆ ಬಿಟ್ಟುಕೊಳ್ಳದ ಗ್ರಾಮಸ್ಥರು

ಗೊಲ್ಲ ಸಮುದಾಯದ ಮೈಲಿಗೆ ಸಂಪ್ರದಾಯಕ್ಕೆ ಮಗು ಬಲಿಯಾಗಿದ್ದು ಬಾಣಂತಿಯನ್ನ ಊರೊಳಗೆ ಬಿಟ್ಟುಕೊಳ್ಳಲು ಗ್ರಾಮಸ್ಥರು ನಿರಾಕರಿಸಿದ್ದಾರೆ. ಹೀಗಾಗಿ ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ತುಮಕೂರು ತಹಶೀಲ್ದಾರ್ ಸಿದ್ದೇಶ್ ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮನವೊಲಿಸಲು ಯತ್ನಿಸುತ್ತಿದ್ದಾರೆ. ಜೊತೆಗೆ ಮಲ್ಲೇನಹಳ್ಳಿ ಗೊಲ್ಲರಹಟ್ಟಿಗೆ ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಆರ್ ಸಿಎಚ್ ಮೋಹನ್, ಟಿಎಚ್ಓ ಲಕ್ಷ್ಮೀಕಾಂತ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:31 pm, Wed, 26 July 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ