ಸರ್ಕಾರಕ್ಕೆ ಮತ್ತೊಂದು ಬಂದ್ ಬಿಸಿ: ಸೋಮವಾರ ಯಶವಂತಪುರ ಎಪಿಎಂಸಿ ಯಾರ್ಡ್ ಬಂದ್
ಸೋಮವಾರ ಎಂಪಿಎಂಸಿ ಗೇಟ್ 4ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯವರೆಗೆ ಕಾಲ್ನಡಿಗೆ ಮೂಲಕ ರ್ಯಾಲಿ ಕೂಡ ನಡೆಯಲಿದೆ. ಸಾವಿರಾರು ಕೂಲಿ ಕಾರ್ಮಿಕರು ಹಾಗೂ ವರ್ತಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟಕ್ಕೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಮಾಡುವಂತೆ ಕೋರಿ ಯಶವಂತಪುರ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟವು ಸೋಮವಾರ ಬಂದ್ ಆಚರಿಸಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಬಂದ್ ನಡೆಯಲಿದೆ. ಅಂದು ಎಪಿಎಂಸಿ ಯಾರ್ಡ್ನಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಕೂಲಿ ಕಾರ್ಮಿಕರು, ಅಮಾಲಿಗಳು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಸೋಮವಾರ ಎಂಪಿಎಂಸಿ ಗೇಟ್ 4ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯವರೆಗೆ ಕಾಲ್ನಡಿಗೆ ಮೂಲಕ ರ್ಯಾಲಿ ಕೂಡ ನಡೆಯಲಿದೆ. ಸಾವಿರಾರು ಕೂಲಿ ಕಾರ್ಮಿಕರು ಹಾಗೂ ವರ್ತಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಅಂದು ಎಲ್ಲಾ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿ ಕೂಲಿ ಕಾರ್ಮಿಕರ ಸಂಘದಿಂದ ಮನವಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿದ ರಾಜ್ಯ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಅರುಣ್ ಪರಮೇಶ್ವರ್, ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಸ್ಥಳಕ್ಕೆ ಆಗಮಿಸಬೇಕು. ಇಲ್ಲವಾದರೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Published On - 3:21 pm, Fri, 18 December 20