ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಆದೇಶ ಪ್ರಶ್ನಿಸಿ ಮೇಲ್ಮನವಿ: ಹೈಕೋರ್ಟ್ನಲ್ಲಿ ಭಾನುವಾರವೂ ನಡೆದ ವಿಶೇಷ ಕಲಾಪ
ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ಹಾಗೂ ಹೊಸ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ಹೊರಡಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ರಜಾ ದಿನವಾದ ಭಾನುವಾರದಂದು ವಿಭಾಗೀಯ ಪೀಠದಲ್ಲಿ ವಿಶೇಷ ಕಲಾಪ ನಡೆಯಿತು.
ಬೆಂಗಳೂರು, ಸೆ.3: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಹೊಸ ಆಯ್ಕೆ ಪಟ್ಟಿ ಬಿಡುಗಡೆ ಮಾಡುವಂತೆ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಅಲ್ಲದೆ, ಪತಿಯ ಆದಾಯದ ಬದಲು ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅದರಂತೆ, ರಜಾ ದಿನವಾದ ಭಾನುವಾರದಂದೂ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಶೇಷ ಕಲಾಪ ನಡೆಯಿತು.
ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕಮಲ್ ಅವರಿದ್ದ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ಸೇವಾ ವಿವಾದಗಳಿಗೆ ಸಂಬಂಧಿಸಿದ ಪೀಠದಲ್ಲಿ ವಿಚಾರಣೆಯಾಗಿಲ್ಲ. ಹೀಗಾಗಿ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಲು ಅರ್ಜಿದಾರರು ಮನವಿ ಮಾಡಿದರು. ಸುದೀರ್ಘ ವಾದಮಂಡನೆ ನಂತರ ವಿಭಾಗೀಯ ಪೀಠವು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿಕೆ ಮಾಡಿತು.
ಇದನ್ನೂ ಓದಿ: ಜೆಡಿಎಸ್ MP ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ
ಹಿಂದುಳಿದ ವರ್ಗಕ್ಕೆ ಪರಿಗಣಿಸುವಾಗ ಪತಿಯ ಆದಾಯ ಆಧಾರವಾಗಿತ್ತು. ಮಹಿಳೆ ಆದಾಯ ಪ್ರಮಾಣಪತ್ರಕ್ಕೆ ಪತಿಯ ಆದಾಯ ಪರಿಗಣಿಸಲಾಗುತ್ತಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಲ್ಲದೆ, ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಲು ಸೂಚಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ