BIG NEWS: ಎಸಿಬಿ ರದ್ದತಿಯ ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ

ಕನಕರಾಜು ಎನ್ನುವವರು ಸಲ್ಲಿಸಿದ ಅರ್ಜಿಯನ್ನು ವಕೀಲರಾದ ಅಶೋಕ್ ಪಾಣಿಗ್ರಹಿ ಸಲ್ಲಿಸಿದರು. ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಪೀಠವು ಸಮ್ಮತಿಸಿತು.

BIG NEWS: ಎಸಿಬಿ ರದ್ದತಿಯ ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ
Supreme Court
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 23, 2022 | 2:22 PM

ದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು (Anti Corruption Bureau – ACB) ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಸುಪ್ರೀಂಕೋರ್ಟ್​ನಲ್ಲಿ ಖಾಸಗಿ ದೂರುದಾರರೊಬ್ಬರು ಪ್ರಶ್ನಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ (Chief Justice of India – CJI) ಎನ್​.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠದ ಎದುರು ಅರ್ಜಿಯು ವಿಚಾರಣೆಗೆ ಬಂತು. ಕನಕರಾಜು ಎನ್ನುವವರು ಸಲ್ಲಿಸಿದ ಅರ್ಜಿಯನ್ನು ವಕೀಲರಾದ ಅಶೋಕ್ ಪಾಣಿಗ್ರಹಿ ಸಲ್ಲಿಸಿದರು. ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನ್ಯಾಯಪೀಠವು ಸಮ್ಮತಿಸಿತು.

‘ಬೆಸ್ಕಾಂ ವಿಚಕ್ಷಣಾ ದಳ ಪೊಲೀಸ್ ಠಾಣೆಯ (BESCOM Vigilance Police Station) ಇಬ್ಬರು ಅಧಿಕಾರಿಗಳು ಲಂಚ ಕೇಳಿದ್ದರು. ಅವರ ವಿರುದ್ಧ ಎಸಿಬಿಗೆ ದೂರು ನೀಡಿದ್ದೆ. ಇದೇ ವೇಳೆ ಕರ್ನಾಟಕ ಹೈಕೋರ್ಟ್​ ಎಸಿಬಿಯನ್ನು ರದ್ದುಪಡಿಸಿ, ಅದು ನಿರ್ವಹಿಸುತ್ತಿದ್ದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತು. ಇದರಿಂದ ಪ್ರಕರಣದ ತನಿಖೆಗೆ ತೊಂದರೆಯಾಗುತ್ತದೆ ಎನ್ನುವುದು ಅರ್ಜಿದಾರರ ಆಕ್ಷೇಪವಾಗಿದೆ. ‘ಹೈಕೋರ್ಟ್​ ತೀರ್ಪಿನಿಂದಾಗಿ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ದಾಖಲಾಗಿರುವ ವಿವಿಧ ಪ್ರಕರಣಗಳ ತನಿಖೆಗೆ ಧಕ್ಕೆಯುಂಟಾಗಬಹುದು’ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಆಗಸ್ಟ್ 11ರಂದು ಕರ್ನಾಟಕ ಹೈಕೋರ್ಟ್​ ಭ್ರಷ್ಟಾಚಾರ ನಿಗ್ರಹ ದಳದ ರಚನೆಯನ್ನೇ ರದ್ದುಪಡಿಸಿತ್ತು. ‘ಭ್ರಷ್ಟ ರಾಜಕಾರಿಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದ ನಿಗಾವಣೆಯಿಂದ ರಕ್ಷಿಸಲು ಎಸಿಬಿ ರಚಿಸಲಾಗಿದೆ’ ಎಂದು ಹೈಕೋರ್ಟ್​ ಹೇಳಿತ್ತು. ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ಎಚ್​.ಎಸ್.ಹೇಮಲತಾ ಅವರಿದ್ದ ನ್ಯಾಯಪೀಠವು, ‘ಲೋಕಾಯುಕ್ತ ಕಾಯ್ದೆಯ ಅನ್ವಯ ಆ ಸಂಸ್ಥೆಗೆ ಇದ್ದ ಸ್ಥಾನಮಾನವನ್ನು ಎಸಿಬಿ ಕಿತ್ತುಕೊಂಡಿದೆ. ಹೀಗಾಗಿ ಎಸಿಬಿ ರಚನೆಗೆ ಸರ್ಕಾರ ಹೊರಡಿಸಿದ್ದ 2016ರ ಆದೇಶ ರದ್ದುಪಡಿಸುತ್ತಿದ್ದೇವೆ’ ಎಂದು ಹೇಳಿತ್ತು.

ಎಸಿಬಿ ಈವರೆಗೆ ಯಾವುದೇ ಸಚಿವರು, ಸಂಸದರು, ವಿಧಾನ ಪರಿಷತ್ ಸದಸ್ಯರು ಅಥವಾ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಕೆಲವೇ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ದಾಳಿಗಳನ್ನು ಮಾಡಿದೆ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ತೀರ್ಪು ಬರುವ ಕೆಲ ದಿನಗಳು ಮೊದಲಷ್ಟೇ ನ್ಯಾಯಮೂರ್ತಿ ಎಚ್​.ಪಿ.ಸಂದೇಶ್ ಅವರು ಎಸಿಬಿ ಕಾರ್ಯನಿರ್ವಹಣೆಯ ಬಗ್ಗೆ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಲೋಕಾಯುಕ್ತ ಬಲಪಡಿಸುತ್ತೇವೆ ಎಂದು ಬಿಜೆಪಿ ಪ್ರನಾಳಿಕೆಯಲ್ಲಿದೆ : ಆರಗ ಜ್ಞಾನೇಂದ್ರ

ಎಸಿಬಿ ರದ್ದು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಮಾತನಾಡಿದ್ದಾರೆ. ನನಗೆ ಇದರ ಬಗ್ಗೆ ಮಾಹಿತಿ ಇಲ್ಲ, ಗೊಂದಲವಾಗ್ತಿದೆ, ಮಾಹಿತಿ ಪಡೆದು ಇದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ, ಲೋಕಾಯುಕ್ತ ಬಲಪಡಿಸುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿದೆ ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಚರ್ಚೆಯಾಗಿ ತೀರ್ಮಾನವಾಗಿದೆ ಎಂದು ಹೇಳಿದ್ದಾರೆ.

ಲೋಕಾಯುಕ್ತಕ್ಕೆ ಅಧಿಕಾರ ನೀಡಲು ನಮ್ಮ ಬೆಂಬಲ ಇದೆ: ಸಚಿವ ಆರ್. ಅಶೋಕ್

ಎಸಿಬಿ ರದ್ದತಿಗೆ ಕಾಲ ಮಿತಿ ಕೇಳಿ ಎಸಿಬಿ ಸುಪ್ರೀಂ ಮೊರೆ ಹೋದ‌ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಸರ್ಕಾರ ಈಗಾಗಲೇ ಸ್ಪಷ್ಟವಾಗಿ ಹೇಳಿದೆ. ಲೋಕಾಯುಕ್ತಕ್ಕೆ ಅಧಿಕಾರ ನೀಡಲು ನಮ್ಮ ಬೆಂಬಲ ಇದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಬಿಬಿಎಂಪಿ ಚುನಾವಣೆ ಸಂಬಂಧ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಿದ್ದೇವೆ. ಬಿಬಿಎಂಪಿಯಲ್ಲಿ 140-150 ಸ್ಥಾನ ಗೆಲ್ಲಲ್ಲು ಚರ್ಚೆ ಮಾಡಿದ್ದೇವೆ  ಮಂತ್ರಿಗಳ, ಶಾಸಕರ ಸಲಹೆ ಪಡೆಯಲಾಗಿದೆ. ಮತ್ತೊಂದು ಸಭೆ ಮಾಡಿ ಇನ್ನಷ್ಟು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

Published On - 11:36 am, Tue, 23 August 22

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು