ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ: ಕಾರಣ ಏನೂ ಗೊತ್ತಾ?

ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಇತ್ತೀಚೆಗೆ ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿತ್ತು. ಆದರೆ ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ, ರಾಜ್ಯ ಚುನಾವಣಾ ಆಯೋಗದಿಂದ ಪತ್ರ ಬರೆಯಲಾಗಿದೆ.

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ: ಕಾರಣ ಏನೂ ಗೊತ್ತಾ?
ಪ್ರಾತಿನಿಧಿಕ ಚಿತ್ರ
Edited By:

Updated on: Sep 24, 2025 | 1:47 PM

ಬೆಂಗಳೂರು, ಸೆಪ್ಟೆಂಬರ್ 24: ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಅದು ಮುಗಿಯುವವರೆಗೆ ರಾಜ್ಯದಲ್ಲಿ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆಯನ್ನು (SIR)  ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ (State Election Commission) ಮನವಿ ಮಾಡಿದೆ. ಈ ಕುರಿತಾಗಿ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ, ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ತಿಳಿಸಿದೆ.

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದ್ದಿಷ್ಟು

ಈ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಟಿವಿ9 ಜೊತೆಗೆ ಮಾತನಾಡಿದ್ದು, ಮಂಗಳವಾರ ಕೇಂದ್ರ ಚುನಾವಣಾ ಮುಖ್ಯ ಆಯುಕ್ತರಿಗೆ ಇ-ಮೇಲ್ ಕಳುಹಿಸಿದ್ದೇನೆ. ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ ನಡೆಸಬೇಕಿದೆ. ನ.1ರಿಂದ ಜಿಬಿಎ ಚುನಾವಣೆ ಸಂಬಂಧ ಕೆಲಸ ಶುರು ಮಾಡಬೇಕು. ಈ ಸಮಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡೋದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುತ್ತೆ ಮತದಾರರ ಪಟ್ಟಿ ಪರಿಷ್ಕರಣೆ​: ರಾಜ್ಯ ಚುನಾವಣಾ ಆಯೋಗ

ಈಗಾಗಲೇ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಆರಂಭ ಆಗಿದೆ. ಅದಕ್ಕೆ ಮ್ಯಾನ್ ಪವರ್ ನೀಡಿದೆ. ಇದರಿಂದ ನಮ್ಮ ಪ್ರಕ್ರಿಯೆಗಳಿಗೆ ಮ್ಯಾನ್ ಪವರ್ ಸಮಸ್ಯೆ ಆಗಲಿದೆ. ಸಮೀಕ್ಷೆಗೆ ಸರ್ಕಾರದ ಸಿಬ್ಬಂದಿ ಬಳಕೆ ಮಾಡಲಾಗುತ್ತಿದೆ. ಮತ್ತೆ ಅವರನ್ನು ಪಟ್ಟಿ ಪರಿಷ್ಕರಣೆಗೆ ಬಳಸಿಕೊಂಡರೆ ಕಷ್ಟ ಆಗಲಿದೆ ಎಂದು ತಿಳಿಸಿದರು.

ಸ್ಥಳೀಯಸಂಸ್ಥೆ ಚುನಾವಣೆಗೆ ಬ್ಯಾಲೆಟ್ ಪೇಪರ್​ ಬಳಸುವ ವಿಚಾರ ಇದೆ. ಬ್ಯಾಲೆಟ್​ ಪೇಪರ್ ಬಳಕೆ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದರ ಬಗ್ಗೆಯೂ ನಾವು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಹೀಗಾಗಿ ಮುಂದೂಡಿಕೆ ಮಾಡಿ ಅಂತ ಪತ್ರದ ಮೂಲಕ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಮತಗಳ್ಳತನ: ಅಷ್ಟೆಲ್ಲಾ ಆರೋಪ ಮಾಡಿ ಚುನಾವಣೆ ಆಯೋಗಕ್ಕೆ ದೂರು ನೀಡದೇ ಹೋದ ರಾಹುಲ್ ಗಾಂಧಿ

ನಾವು ಮತದಾರರ ಪಟ್ಟಿ ರೆಡಿ ಮಾಡಿತ್ತೇವೆ ಎಂದು ಪತ್ರ ಬರೆದಿದ್ದೇವೆ. ನ.3ರಂದು ಸುಪ್ರಿಂಕೋರ್ಟ್​ಗೆ ಕಂಪ್ಲಾಯನ್ಸ್ ಅಫಿಡವಿಟ್ ನೀಡಬೇಕು. ಜಿಬಿಎ ಡಿಲಿಮಿಟೇಷನ್ ವರದಿಯನ್ನ ಸರ್ಕಾರ ಕೊಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.