ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಆರೋಪಿಗಳಿಂದ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ
ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ಕೋರ್ಟ್ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಡೆಸುವುದಾಗಿ ತಿಳಿಸಿದೆ.
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಸಿಡಿ ತಯಾರಿಸಿದ್ದಾರೆ ಎಂದು ಹೇಳಲಾದ ನರೇಶ್ ಗೌಡ ಹಾಗೂ ಶ್ರವಣ್ ಕೋರ್ಟ್ ಮೊರೆ ಹೋಗಿದ್ದಾರೆ. ಇಬ್ಬರು ಶಂಕಿತ ಆರೋಪಿಗಳು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸದಾಶಿವನಗರ ಠಾಣೆ ಪೊಲೀಸರಿಗೆ ಕೋರ್ಟ್ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಡೆಸುವುದಾಗಿ ತಿಳಿಸಿದೆ. ಸಿಡಿ ಪ್ರಕರಣದಲ್ಲಿ ನನ್ನ ವಿರುದ್ಧ ಷಡ್ಯಂತ್ರ ಎಸಗಲಾಗಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಆಪಾದಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಅವರುಗಳು ತಲೆಮರಿಸಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಇವರಿಬ್ಬರಿಗಾಗಿ ಹುಡುಕಾಟ ನಡೆಸುತ್ತಿತ್ತು.
ಇದನ್ನೂ ಓದಿ: ನೀವು ಕೊವಿಡ್ನಿಂದ ಈಗಷ್ಟೇ ಚೇತರಿಸಿಕೊಂಡಿದ್ದೀರಾ? ದೀರ್ಘಕಾಲ ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಭಾರತದ ಟಾಪ್ ವೈದ್ಯರು
ಕೊವಿಡ್ ವಾರ್ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ
(Application for anticipatory bail from the accused in the Ramesh Jarkiholi CD case)