ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ ನೋಡಿ

| Updated By: ರಮೇಶ್ ಬಿ. ಜವಳಗೇರಾ

Updated on: Nov 15, 2024 | 8:58 PM

ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಲ್ಲಿ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಟಿವಿ ರಿಪೇರಿ ತರಬೇತಿಗಾಗಿ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ ನೋಡಿ
Follow us on

ಬೆಂಗಳೂರು, (ನವೆಂಬರ್ 15):  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್‌ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಇದನ್ನೂ ಓದಿ: North Western Railway Recruitment 2024: ವಾಯುವ್ಯ ರೈಲ್ವೆಯಲ್ಲಿ ಖಾಲಿಯಿರುವ 1791 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ನವೆಂಬರ್‌ 30 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ನವೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಒಟ್ಟು 12 ತಿಂಗಳುಗಳ ಅಪರಂಟಿಸ್ ತರಬೇತಿಯಲ್ಲಿ ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು.

ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ನವೆಂಬರ್ 25 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಬೆಂಗಳೂರು ನಗರ ಜಿಲ್ಲೆಯಲ್ಲಿ ವಾಸಿಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಹಾಗೂ ಮೊ.ಸಂ: 9480841219 ಗೆ ಕಚೇರಿ ಸಮಯದಲ್ಲಿ ಮಾತ್ರ ಸಂರ್ಪಕಿಸಬಹುದಾಗಿದೆ ಎಂದು ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು.