ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆ: ಕೆಜೆ ಜಾರ್ಜ್​

ಪ್ರಧಾನಮಂತ್ರಿ ಕುಸುಮ್‌ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆಗೆ ಟೆಂಡರ್‌ಗಳನ್ನು ಗುರುತಿಸಲಾಗಿದೆ. ಮೊಬೈಲ್‌ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್​ ಹೇಳಿದರು.

ಕೃಷಿ ನೀರಾವರಿಗೆ ಸೌರವಿದ್ಯುತ್‌ ಚಾಲಿತ ಪಂಪ್‌ ಅಳವಡಿಕೆ: ಕೆಜೆ ಜಾರ್ಜ್​
ಸಚಿವ ಕೆಜೆ ಜಾರ್ಜ್​
Follow us
ವಿವೇಕ ಬಿರಾದಾರ
|

Updated on: Mar 11, 2024 | 8:50 AM

ಬೆಂಗಳೂರು, ಮಾರ್ಚ್​ 11: ಪ್ರಧಾನಮಂತ್ರಿ ಕುಸುಮ್‌ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್‌ (Solar Power) ಚಾಲಿತ ಪಂಪ್‌ ಅಳವಡಿಕೆಗೆ ಟೆಂಡರ್‌ಗಳನ್ನು ಗುರುತಿಸಲಾಗಿದೆ. ಮೊಬೈಲ್‌ ಆ್ಯಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ (KJ George) ಮಾತನಾಡಿ ಹೇಳಿದರು. ಬೆಂಗಳೂರು ಕೃಷಿ ವಿವಿ ಕ್ಯಾಂಪಸ್ ಜಿಕೆವಿಕೆಯಲ್ಲಿ ಇಂಧನ ಇಲಾಖೆ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ದ ಉದ್ಘಾಟನೆ, ‘ಕುಸುಮ್’ ಬಿ ಮತ್ತು ಸಿ ಯೋಜನೆ ಹಾಗೂ ಹೊಸ ವಿದ್ಯುತ್ ಉಪಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್​ ಭಾಗಿಯಾಗಿದ್ದರು.

 60 ಸಾವಿರ ಮೆಗಾವ್ಯಾಟ್​ ವಿದ್ಯುತ್​​ ಉತ್ಪಾದನೆ: ಸಿದ್ದರಾಮಯ್ಯ

ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉತ್ಪಾದನೆಯೂ ಹೆಚ್ಚಾಗಬೇಕು. ಮುಂದಿನ ಏಳು ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್​ ವಿದ್ಯುತ್ (Electricity) ​​ ಉತ್ಪಾದನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಪ್ರಸ್ತುತ, 32,000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಶೇ63 ರಷ್ಟು ವಿದ್ಯುತ್ ಅನ್ನು ನವೀಕರಿಸಬಹುದಾದ ಶಕ್ತಿಯ ಮೂಲಕ ಉತ್ಪಾದಿಸಲಾಗುತ್ತಿದೆ. ಮತ್ತು ಉಳಿದವು ಸಾಂಪ್ರದಾಯಿಕ ಮೂಲಗಳಿಂದ ಉತ್ಪಾದಿಸಲಾಗುತ್ತದೆ.

ಇದನ್ನೂ ಓದಿ: Power Tariff: ಕರ್ನಾಟಕ ಜನತೆಗೆ ಕಾದಿದೆ ಕರೆಂಟ್‌ ಶಾಕ್‌, ಮತ್ತೆ ವಿದ್ಯುತ್‌ ದರ ಹೆಚ್ಚಳ ಸಾಧ್ಯತೆ

ರೈತರಿಗೆ ಮೂರು ಹಂತದಲ್ಲಿ ಏಳು ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಕುಸುಮಾ ಬಿ ಮತ್ತು ಸಿ ಯೋಜನೆಗಳ ಅಡಿಯಲ್ಲಿ, ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್​​ಗಳಿಗೆ ಸರ್ಕಾರ ಸಬ್ಸಿಡಿ ಮೊತ್ತವನ್ನು ಶೇ80ಕ್ಕೆ (ಕೇಂದ್ರದಿಂದ ಶೇ30 ಮತ್ತು ರಾಜ್ಯದಿಂದ ಶೇ50) ಹೆಚ್ಚಿಸಿದೆ. ರೈತರು ಸೌರ ಶಕ್ತಿ ಮೂಲಕ ವಿದ್ಯುತ್ ಉತ್ಪಾದಿಸಬಹುದಾಗಿದೆ. ಇದಕ್ಕಾಗಿ ರೈತರಿಗೆ ಸೋಲಾರ್​ ಮೋಟಾರ್, ಮೀಟರ್, ಫಲಕ ಮತ್ತು ತಂತಿಗಳನ್ನು ಒದಗಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು ಎಂದು ತಿಳಿಸಿದರು.

ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಲಾಗುವುದು. ಯೋಜನೆಗಳ ಲಾಭಗಳನ್ನು ರೈತರು ಪಡೆದುಕೊಳ್ಳಬೇಕು. ಈ ಮೂಲಕ ಕೃಷಿ ಚಟುವಟಿಕೆಗಳನ್ನು ಹೆಚ್ಚಿಸಲಾಗುವುದು. ರಫ್ತು ಹೆಚ್ಚಿಸಲು ಸರ್ಕಾರ ರೈತರಿಗೆ ಸಹಾಯ ಮಾಡುತ್ತದೆ. ಕಳೆದ ದಶಕದಲ್ಲಿ ರೈತರ ಜಮೀನು ಹಿಡುವಳಿಗಳು ತೀವ್ರವಾಗಿ ಕಡಿಮೆಯಾಗಿದೆ. ಅದಕ್ಕಾಗಿಯೇ ಸಮಗ್ರ ಕೃಷಿ ಕೈಗೊಳ್ಳಲು ಸರಕಾರ ರೈತರನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು