ಶೀಘ್ರದಲ್ಲೇ ಬಿಪಿಎಲ್​ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭ, ಯಾರೆಲ್ಲ ಅರ್ಜಿ ಹಾಕಬಹುದು? ಸರ್ಕಾರದ ಮಾನದಂಡಗಳೇನು? ಇಲ್ಲಿದೆ ವಿವರ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಶೀಘ್ರದಲ್ಲೇ ಶುರುವಾಗಲಿದೆ. ಹಾಗಾದ್ರೆ, ಈ ಬಿಪಿಎಲ್​ ಕಾರ್ಡ್​ಗೆ ಯಾರೆಲ್ಲ ಅರ್ಹರು? ಸರ್ಕಾರದ ಮಾನದಂಡಗಳು ಏನು? ಇಲ್ಲಿದೆ ವಿವರ

ಶೀಘ್ರದಲ್ಲೇ ಬಿಪಿಎಲ್​ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಆರಂಭ, ಯಾರೆಲ್ಲ ಅರ್ಜಿ ಹಾಕಬಹುದು? ಸರ್ಕಾರದ ಮಾನದಂಡಗಳೇನು? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2023 | 9:39 AM

ಬೆಂಗಳೂರು, (ಆಗಸ್ಟ್ 07): ಶೀಘ್ರದಲ್ಲೇ ಮತ್ತೆ ಕರ್ನಾಟಕದಲ್ಲಿ ಬಿಪಿಎಲ್ ರೇಷನ್‌ ಕಾರ್ಡ್‌ಗೆ((Ration Card)) ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮೊನ್ನೇ ಅಷ್ಟೇ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆಎಚ್​ ಮುನಿಯಪ್ಪ(KH Muniyappa)  ಅವರು ಘೋಷಣೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದಗಿನಿಂದ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸ್ವೀಕರಿಸುವುದನ್ನು ಆಹಾರ ಇಲಾಖೆ ಸ್ಥಗಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಕಾಂಗ್ರೆಸ್ ಜಾರಿ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ (ರೇಷನ್ ಕಾರ್ಡ್) ಮುಖ್ಯವಾಗಿದ್ದು, ಜನರು ರೇಷನ್​ ಕಾರ್ಡ್​ಗಾಗಿ ಅಲೆಯುತ್ತಿದ್ದಾರೆ. ಹಾಗಾದ್ರೆ, ಬಿಪಿಎಲ್​  ಕಾರ್ಡ್​ಗೆ ಅರ್ಜಿ ಸಲ್ಲಿಸಲು ಇರುವ ಮಾನದಂಡಗಳೇನು? ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಹೊಸ ಪಡಿತರ ಕಾರ್ಡ್​ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ- ಕೆಎಚ್ ಮುನಿಯಪ್ಪ

ಆಹಾರ ಇಲಾಖೆಯ ಫೋರ್ಟಲ್ ಸದ್ಯ ಮೊಬೈಲ್‌ ಮಾತ್ರ ಒಪನ್ ಆಗಿದೆ. ಆದ್ರೆ ಇದರಲ್ಲಿ ಅರ್ಜಿ ಸಲ್ಲಿಕೆ ಮಾಡಲು ಆಗುವುದಿಲ್ಲ. ಇದರಿಂದ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಹೊಸವೆಬ್ ಸೈಟ್ ಡೆವಲಪ್ ಮಾಡಬೇಕು. ತದನಂತರದಲ್ಲಿ ಅರ್ಜಿಸಲ್ಲಿಕೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಈಗಾಗಲೇ ಬಿಪಿಎಲ್ ಕಾರ್ಡ್‌ ಪಡೆಯಲು 3 ಲಕ್ಷ ಮಂದಿ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಕಾರ್ಡ್ ಗಳ ವಿಲೇವಾರಿಯೇ ಇನ್ನು ಬಾಕಿ ಇದೆ. ಈ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕಾರ್ಡ್‌ ನೀಡಲು ಸರ್ಕಾರ‌ ಮುಂದಾಗಿದೆ.

ಇನ್ನು 2016ರಲ್ಲಿ ಆಹಾರ ಇಲಾಖೆ ನಿಗದಿ ಮಾಡಿದ್ದ ಮಾನದಂಡಗಳ ಪ್ರಕಾರ ಬಿಪಿಎಲ್ ಗೆ ಮಾನದಂಡಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

  1.  ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಾಯಂ ನೌಕರರಾಗಿರಬಾರದು
  2.  ವೃತ್ತಿ ತೆರಿಗೆ, ಜಿಎಸ್‌ಟಿ, ಆದಾಯ ತೆರಿಗೆ ಪಾವತಿದಾರರಾಗಿರಬಾರದು
  3.  ಗ್ರಾಮೀಣ ಭಾಗದಲ್ಲಿ 3 ಹೆಕ್ಟೇರ್‌ ಗಿಂತ ಹೆಚ್ಚು ಭೂಮಿ ಹೊಂದಿರಬಾರದು
  4.  ನಗರದಲ್ಲಿ 1,000 ಚದರಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಇರಬಾರದು
  5.  ಟ್ರಾಕ್ಟರ್‌, ಕ್ಯಾಬ್‌, ಟ್ಯಾಕ್ಸಿ ಹೊರತಾಗಿ ವೈಟ್ ಬೋರ್ಡ್ ಕಾರು ಹೊಂದಿರಬಾರದು
  6.  ವಾರ್ಷಿಕ ಆದಾಯ 1.20 ಲಕ್ಷಕ್ಕಿಂತ ಹೆಚ್ಚು ಇರುವ ಕುಟುಂಬವಾಗಿರಬಾರದು

    ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುವವರು ಮೇಲೆ ತಿಳಿಸಲಾದ ಸರ್ಕಾರದ ಮಾನದಂಡಗಳನ್ನ ಮೀರಿ ಅರ್ಜಿಸಲ್ಲಿಕ ಮಾಡಿದ್ರೆ ಕಾರ್ಡ್ ಗಳು ರದ್ದಾಗಲಿವೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:36 am, Mon, 7 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್