ಅತಿಥಿ ಉಪನ್ಯಾಸಕರ ನೇಮಕ: ಜನವರಿ 27ರಿಂದ ಆನ್​​ಲೈನ್​​ ಕೌನ್ಸೆಲಿಂಗ್

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕ: ಜನವರಿ 27ರಿಂದ ಆನ್​​ಲೈನ್​​ ಕೌನ್ಸೆಲಿಂಗ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 26, 2022 | 6:18 PM

ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ (Guest Lecturer) ಹುದ್ದೆಗಳಿಗೆ ಜ.27ರಿಂದ (ಗುರುವಾರ) 30ರವರೆಗೆ ನಾಲ್ಕು ದಿನಗಳ ಕಾಲ ಆನ್​​ಲೈನ್ ಕೌನ್ಸೆಲಿಂಗ್ (Online Counseling) ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.  ಅಭ್ಯರ್ಥಿಗಳು ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸೆಲಿಂಗ್​​ನಲ್ಲಿ ಆಯ್ಕೆ  ಮಾಡಿಕೊಳ್ಳಬಹುದು. ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ. ಅದರ ನಂತರದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಅವರು ಮೂಲ ದಾಖಲೆಗಳನ್ನು ಪರಿಶೀಲನೆಗೆ ಒಪ್ಪಿಸಿ, ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.  `ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಹುದ್ದೆಗಳಲ್ಲಿ ವಾಣಿಜ್ಯ ವಿಷಯವು 1,830, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಜೆನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರ ವಿಜ್ಞಾನ 53, ಸಮಾಜಕಾರ್ಯ 80 ಮತ್ತು ಉರ್ದು 78 ಹುದ್ದೆಗಳನ್ನು ಹೊಂದಿವೆ ಎಂದು ಪ್ರದೀಪ್ ಮಾಹಿತಿ ನೀಡಿದ್ದಾರೆ.

ಆದ್ಯತೆ: ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೌನ್ಸೆಲಿಂಗ್ ಬಳಿಕ ಎಲ್ಲರೂ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಯಾಮರಣ ಕೋರಿ ಹಾಸನದ 300ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿ, ಸಿಎಂಗೆ ಪತ್ರ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM