ಸಿ ವರ್ಗದ ದೇಗುಲಗಳ ಅನುವಂಶಿಕ ಅರ್ಚಕರ ನೇಮಕಾತಿ; ಹೊಸ ಆದೇಶ ಹೊರಡಿಸಿದ ಧಾರ್ಮಿಕ ದತ್ತಿ ಇಲಾಖೆ

ಧಾರ್ಮಿಕ ದತ್ತಿ ಇಲಾಖೆ(Department of Religious Endowments)ಯ ಸಿ ವರ್ಗದ ದೇವಸ್ಥಾನಗಳ ಅನುವಂಶಿಕ ಅರ್ಚಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ‘ಅರ್ಚಕರು ತೀವ್ರ ಅನಾರೋಗ್ಯ ಅಥವಾ ವಯಸ್ಸಾದ ಸಂದರ್ಭದಲ್ಲೂ ಅನುವಂಶಿಕ ನೇಮಕಾತಿಗೆ ಧಾರ್ಮಿಕ ದತ್ತಿ ಇಲಾಖೆ ಅನುಮತಿ ನೀಡಿದೆ.

ಸಿ ವರ್ಗದ ದೇಗುಲಗಳ ಅನುವಂಶಿಕ ಅರ್ಚಕರ ನೇಮಕಾತಿ; ಹೊಸ ಆದೇಶ ಹೊರಡಿಸಿದ ಧಾರ್ಮಿಕ ದತ್ತಿ ಇಲಾಖೆ
ಧಾರ್ಮಿಕ ದತ್ತಿ ಇಲಾಖೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 05, 2023 | 9:01 PM

ಬೆಂಗಳೂರು, ಡಿ.05: ಧಾರ್ಮಿಕ ದತ್ತಿ ಇಲಾಖೆ(Department of Religious Endowments)ಯ ಸಿ ವರ್ಗದ ದೇವಸ್ಥಾನಗಳ ಅನುವಂಶಿಕ ಅರ್ಚಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ‘ಅರ್ಚಕರು ತೀವ್ರ ಅನಾರೋಗ್ಯ ಅಥವಾ ವಯಸ್ಸಾದ ಸಂದರ್ಭದಲ್ಲೂ ಅನುವಂಶಿಕ ನೇಮಕಾತಿಗೆ ಅನುಮತಿ ನೀಡಿದ ಧಾರ್ಮಿಕ ದತ್ತಿ ಇಲಾಖೆ, ತಹಶೀಲ್ದಾರರ ಮಟ್ಟದಲ್ಲಿ ಷರತ್ತು ಬದ್ಧವಾಗಿ ಅನುವಂಶಿಕ ಅರ್ಚಕ ಪದ್ಧತಿ ಮುಂದುವರಿಸಲು ಆದೇಶಿಸಿದೆ.

ನವೆಂಬರ್​ 17 ರಂದು ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರ್ಕಾರ  ಚಾರಿತ್ರಿಕ ಆದೇಶ ಪ್ರಕಟಿಸಿತ್ತು. ಆ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿತ್ತು. ರಾಜ್ಯದ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ್ದಲ್ಲಿ, ಗಂಭೀರವಾಗಿ ಅಸ್ವಸ್ಥರಾದಲ್ಲಿ ಅಥವಾ ಅಶಕ್ತರಾದಲ್ಲಿ ಅನುವಂಶಿಕ ಹಕ್ಕನ್ನು ವರ್ಗಾಯಿಸುವ ಸರಳ ಕ್ರಮ ಕೈಗೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಸ್ತು ಎಂದಿದ್ದರು.  ಬಳಿಕ ಸರ್ಕಾರ ಕೂಡ ಈ ಕುರಿತು ಆದೇಶ ಹೊರಡಿಸಿದ್ದು ಅರ್ಚಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್​ ಬಳಸುವಂತಿಲ್ಲ: ಸರ್ಕಾರ ಆದೇಶ

ಪ್ರಸ್ತುತ, ಅರ್ಚಕರ ಸಂಘದವರ ಬೇಡಿಕೆಯಂತೆ, ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ʼʼಸಿ” ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು, ವಯಸ್ಸಾದ ಸಂದರ್ಭದಲ್ಲಿ ಹಾಗೂ ತೀವ್ರ ರೀತಿಯ ಅನಾರೋಗ್ಯದ ಕಾರಣದಿಂದಾಗಿ ಅರ್ಚಕರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ, ಅಶಕ್ತರಾದ ಸಂದರ್ಭಗಳಲ್ಲಿಯೂ ಸಹ ಅನುವಂಶಿಕ ಹಕ್ಕನ್ನು (ಬರಾಬರ್ದ್) ಅವರ ಕಾನೂನು ಬದ್ದ ವಾರಸುದಾರರಿಗೆ ವರ್ಗಾಯಿಸಬಹುದಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us