ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ರಾಜ್ಯದ ಕೆಆರ್ಎಸ್ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಏಪ್ರಿಲ್ 05ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 37.32 | 31.19 | 0 | 13448 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 4.46 | 06.04 | 0 | 948 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 10.21 | 12.16 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 13.15 | 19.60 | 50 | 956 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 28.59 | 46.08 | 0 | 3156 |
ಕಬಿನಿ ಜಲಾಶಯ (Kabini Dam) | 696.13 | 19.52 | 09.18 | 06.69 | 67 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 18.79 | 40.19 | 197 | 7014 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 24.80 | 14.21 | 0 | 4702 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.45 | 19.98 | 6 | 330 |
ವರಾಹಿ ಜಲಾಶಯ (Varahi Dam) | 594.36 | 31.10 | 6.09 | 6.54 | 0 | 532 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.19 | 2.87 | 179 | 200 |
ಸೂಫಾ (Supa Dam) | 564.00 | 145.33 | 48.49 | 65.80 | 225 | 4883 |
ಗರಿಷ್ಠ ತಾಪಮಾನವು ಮುಂದಿನ 5 ದಿನಗಳಲ್ಲಿ ವಿಜಯಪುರ, ಬೆಳಗಾವಿ ಧಾರವಾಡ ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕ್ರಮೇಣ 3-4 ಡಿಗ್ರಿ ಸೆಲ್ಸಿಯನ್ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ದುಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ರಾಯಚೂರು ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ವಾತಾವರಣ ಇರುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:02 am, Fri, 5 April 24